Udupi ಪೆರಂಪಳ್ಳಿಯಲ್ಲಿ ತಪ್ಪಿದ ರೈಲು ದುರಂತ: ಲೋಕೊ ಪೈಲಟ್ ಸಮಯ ಪ್ರಜ್ಞೆ
Team Udayavani, Jul 25, 2024, 7:15 AM IST
ಉಡುಪಿ: ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯಗಂಧ ಎಕ್ಸ್ ಪ್ರಸ್ ರೈಲಿನ ಲೋಕೊ ಪೈಲಟ್‌ಗಳ ಸಮಯಪ್ರಜ್ಞೆಯಿಂದ ಬುಧವಾರ ಬೆಳಗ್ಗೆ ಬಾರಕೂರು- ಉಡುಪಿ ನಿಲ್ದಾಣಗಳ ನಡುವೆ ಸಂಭವಿಸಲಿದ್ದ ದೊಡ್ಡ ದುರಂತ ತಪ್ಪಿದೆ.
ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9.18ಕ್ಕೆ ಮಣಿಪಾಲದ ಪೆರಂಪಳ್ಳಿ ಬಳಿ ದೊಡ್ಡ ಮರವೊಂದು ಹಳಿಗೆ ಬಿದ್ದಿರುವುದನ್ನು ರೈಲಿನ ಲೋಕೋ ಪೈಲಟ್‌ಗಳು ತೀರಾ ಸಮೀಪದಲ್ಲಿ ಗಮನಿಸಿದ್ದರು. ತತ್‌ಕ್ಷಣವೇ ಎಮರ್ಜೆನ್ಸಿ ಬ್ರೇಕ್ ಬಳಸಿ ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾದರು. ಹಳಿಯಲ್ಲಿ ಬಿದ್ದ ಮರ ಪೈಲಟ್‌ಗಳ ಗಮನಕ್ಕೆ ಬರುವುದು ಸ್ವಲ್ಪ ತಡವಾಗಿದ್ದರೂ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಧಾವಿಸಿ ಬಂದ ಒಎಚ್‌ಇ ತಂಡದವರು ಮರವನ್ನು ಹಳಿಯಿಂದ ತೆಗೆದು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅನಾಹುತ ತಪ್ಪಿಸಿದ ಜಾಗೃತ ಮಂಡ್ಯ ಮತ್ತು ಭಟ್ಕಳದ ಲೋಕೊ ಪೈಲಟ್ ಮತ್ತು ಸಹಾಯಕ ಪೈಲಟ್‌ಗೆ ಕೊಂಕಣ ರೈಲ್ವೆಯ ಸಿಎಂಡಿ ಸಂತೋಷ್ ಕುಮಾರ್ ಝಾ ಅವರು ತಲಾ 15,000 ರೂ. ಬಹುಮಾನ ಘೋಷಿಸಿದ್ದು, ಸುರತ್ಕಲ್ ನಿಲ್ದಾಣದಲ್ಲಿ ಬಹುಮಾನದ ಚೆಕ್ ಹಸ್ತಾಂತರಿಸಲಾಯಿತು ಎಂದು ಕೊಂಕಣ ರೈಲ್ವೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.