Udupi ಲಾರಿ, ಟೆಂಪೋ ಮಾಲಕರ ಮುಷ್ಕರ ಮುಂದುವರಿಕೆ
Team Udayavani, Oct 4, 2023, 12:33 AM IST
ಉಡುಪಿ: ಸರಕಾರ ಅಥವಾ ಜಿಲ್ಲಾಡಳಿತದಿಂದ ಕಟ್ಟಡ ಸಾಮಗ್ರಿ ಸಾಗಾಟಕ್ಕೆ ಅವಕಾಶ ಮಾಡಿಕೊಡುವ ವರೆಗೂ ಮುಷ್ಕರ ಮುಂದುವರಿಸಲು ಕಟ್ಟಡ ಸಾಮಗ್ರಿ ಸಾಗಾಟ ಲಾರಿ, ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ.
ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಯಲಿದೆ ಹಾಗೂ ಲಾರಿ, ಟೆಂಪೋಗಳು ಸದ್ಯ ಖಾಸಗಿ ಮೈದಾನದಲ್ಲಿ ಇರುವುದರಿಂದ ಅಲ್ಲೇ ಇರಲಿವೆ. ನಮ್ಮ ಸಮಸ್ಯೆ ಬಗೆಹರಿವ ವರೆಗೂ ಮುಷ್ಕರ ಕೈಬಿಡುವುದಿಲ್ಲ. ಜಿಲ್ಲಾಡಳಿತ ಸಹಿತ ಎಲ್ಲರೂ ನಮ್ಮ ಸಮಸ್ಯೆ ಆಲಿಸುತ್ತಿದ್ದಾರೆಯೇ ಹೊರತು ಪರಿಹಾರ ನೀಡುತ್ತಿಲ್ಲ ಎಂದು ಒಕ್ಕೂಟದ ರಾಘವ ಶೆಟ್ಟಿ ತಿಳಿಸಿದ್ದಾರೆ.
ಸಿಎಂ ಭೇಟಿ ಸಾಧ್ಯತೆ
ಲಾರಿ, ಟೆಂಪೋ ಮಾಲಕರ ಮುಷ್ಕರ ಹಾಗೂ ಜಿಲ್ಲೆಯ ಕಟ್ಟಡ ಸಾಮಗ್ರಿ ಸಾಗಾಟ ಸಮಸ್ಯೆ ಕುರಿತು ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಶೀಘ್ರವೇ ಮುಖ್ಯಮಂತ್ರಿ ಯವರನ್ನು ಭೇಟಿಯಾಗಿ ಮನವಿ ಸಲ್ಲಿಸುವ ಸಾಧ್ಯತೆಯಿದೆ. ಜಿಲ್ಲೆಯ ಶಾಸಕರು ಮಂಗಳವಾರ ಲಾರಿ, ಟೆಂಪೋ ಮಾಲಕರ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.