ಮಾ. 21: ನಂದಳಿಕೆ ಸಿರಿ ಜಾತ್ರೆ, ಆಯನೋತ್ಸವ
Team Udayavani, Mar 20, 2019, 1:00 AM IST
ಬೆಳ್ಮಣ್: ತುಳುನಾಡಿ ನಾದ್ಯಂತ ನೆಲೆಗೊಂಡಿರುವ ಸಕಲ ಸಿರಿ ಕ್ಷೇತ್ರಗಳಿಗೆ ಪುರಾತನ ಮತ್ತು ಮಿಗಿಲೆನಿ ಸಿರುವ ಸತ್ಯದ ಸಿರಿಗಳ ಪುಣ್ಯಕ್ಷೇತ್ರ ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಳದ ಸನ್ನಿಧಾನದಲ್ಲಿ ಸಿರಿ ಜಾತ್ರೆ ಮಾ. 21ರಂದು ಸಡಗರದಿಂದ ನಡೆಯಲಿದೆ. ತುಳುನಾಡು, ಮಲೆನಾಡು, ಕರ್ನಾಟಕದಾದ್ಯಂತ ಮಹಾರಾಷ್ಟ್ರದಂತಹ ಹೊರನಾಡುಗಳಿಂದ ವಿದೇಶಗಳಿಂದಲೂ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದು, ಭಕ್ತರ ಸೇವೆಗಾಗಿ ಸಮಗ್ರ ನಂದಳಿಕೆ ತಯಾರಾಗಿದೆ.
ಮಾ. 21ರಂದು ಬೆಳಗ್ಗೆ 8ರಿಂದ ಶ್ರೀ ಉರಿಬ್ರಹ್ಮ ರಜತ ಪಾದುಕೆ, ಶ್ರೀ ಅಬ್ಬಗ-ದಾರಗರ ಚೆನ್ನೆಮಣಿಗಳ ಸಾಲಂಕೃತ ಮೆರವಣಿಗೆ ಪ್ರಾಕ್ತನ ಪದ್ಧತಿಯಂತೆ ಪರ್ಯಟಿಸಿ ಮಧ್ಯಾಹ್ನ ಶ್ರೀ ಆಲಡೆಯಲ್ಲಿ ಶ್ರೀ ಅಣ್ಣಪ್ಪ ದರ್ಶನ, ಹಸಿಮಡಲುಚಪ್ಪರ ಕಟ್ಟೆಪೂಜಾ ಸೇವೆ ಶ್ರೀ ದೇವರ ಮಹೋತ್ಸವ ಬಲಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ 1ರಿಂದ 8ರ ವರೆಗೆ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನಡೆಯಲಿದ್ದು ರಾತ್ರಿ 9.30ಕ್ಕೆ ನಂದಳಿಕೆ ಚಾವಡಿ ಅರಮನೆಯಿಂದ ಶ್ರೀ ಸುಂದರರಾಮ ಹೆಗ್ಡೆ ಅವರ ಆಗಮನದ ಪರಂಪರಾಗತ ಅದ್ಧೂರಿಯ ಮೆರವಣಿಗೆ ನಡೆಯಲಿದೆ. ರಾತ್ರಿ 10.30ರಿಂದ ಆಯನೋತ್ಸವ ಬಲಿ, ವೈಭವೋಪೇತ ಕೆರೆದೀಪೋತ್ಸವ, “ಶ್ರೀ ಕೆರೆದೀಪ ಕಟ್ಟೆಪೂಜಾ ಮಹೋತ್ಸವ’ ಸಂಪನ್ನಗೊಳ್ಳಲಿದ್ದು, ರಾತ್ರಿ 11ರಿಂದ ಸತ್ಯದ ಸಿರಿಗಳ ಮೂಲಕ್ಷೇತ್ರ ಶ್ರೀ ಆಲಡೆ ಸನ್ನಿಧಾನದಲ್ಲಿ ಶ್ರೀ ಸಿರಿ ಕುಮಾರ, ಅಬ್ಬಗ-ದಾರಗ ದರ್ಶನಾವೇಶಾಪೂರ್ವಕ ಸೂಯೊìàದಯ ಪರ್ಯಂತ ಸಪ್ತ ಸತ್ಯದ ಸಿರಿಗಳ ನಂದಳಿಕೆ ಸಿರಿಜಾತ್ರೆ ಪ್ರಾಚೀನ ವಿಧಿ ವೈಭವಗಳು ನಡೆಯಲಿವೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.
ಮಾ. 22ರಂದು ಊರ ಅಯನೋತ್ಸವ, ಮಾ. 23ರಂದು ಬಾಕಿಮಾರು ದೀಪೋತ್ಸವ, ಮಾ. 24ರಂದು ಮೂಡುಸವಾರಿ ಉತ್ಸವ ನಡೆಯಲಿದ್ದು ಮಾ. 25ರಂದು ಶ್ರೀ ಮನ್ಮಹಾರಥೋತ್ಸವ ನಡೆಯಲಿದೆ. ಅಂದು ಬೆಳಗ್ಗೆ 7ರಿಂದ ಶ್ರೀ ದೇವರಿಗೆ ಶತರುದ್ರಾಭಿಷೇಕ, ರುದ್ರಯಾಗ ಬೆಳಗ್ಗೆ 11.45ಕ್ಕೆ ರಥಾರೋಹಣ, ಮಧ್ಯಾಹ್ನ 1ರಿಂದ ಮಹಾಅನ್ನಸಂತರ್ಪಣೆ ನಡೆಯಲಿದೆ. ಮಾ. 26ರಂದು ಕವಾಟೋದ್ಘಾಟನೆ, ಪಡುಸವಾರಿ, ಅವಭೃತ, ಧ್ವಜಾವರೋಹಣ ನಡೆಯಲಿದ್ದು ಮಾ. 27ರಂದು ಮಹಾಸಂಪ್ರೋಕ್ಷಣೆ, ಮಂಗಲ ಮಂತ್ರಾಕ್ಷತೆ ನಡೆಯಲಿದೆ. ಎ. 6ರಂದು ಸಾಮೂಹಿಕ ಶ್ರೀ ಶನಿಪೂಜಾ ಮಹೋತ್ಸವ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.