ಮಧ್ವಾಚಾರ್ಯರ ಏಕಶಿಲಾ ವಿಗ್ರಹಕ್ಕೆ ಮಸ್ತಕಾಭಿಷೇಕ
Team Udayavani, May 11, 2017, 10:19 AM IST
ಉಡುಪಿ: ಉಡುಪಿ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಸಂಕಲ್ಪದಂತೆ ಕುಂಜಾರುಗಿರಿ ಶ್ರೀ ದುರ್ಗಾ ದೇವಸ್ಥಾನದ ಬೆಟ್ಟದಲ್ಲಿ ಪ್ರತಿಷ್ಠಾಪಿಸಲಾಗಿರುವ ದ್ವೆ„ತ ಮತ ಸಂಸ್ಥಾಪಕ ಆಚಾರ್ಯ ಮಧ್ವರ 32 ಅಡಿ ಎತ್ತರದ ಏಕಶಿಲಾ ಮೂರ್ತಿಗೆ ಬುಧವಾರ ಬೆಳಗ್ಗೆ 8.55ಕ್ಕೆ 108 ಕಲಶಗಳ ಮಂತ್ರೋಕ್ತ ಅಭಿಷೇಕ ನಡೆಯಿತು.
ಭವ್ಯ ಮೂರ್ತಿಗೆ ಜಲ, ಕ್ಷೀರ ಮತ್ತು ಶ್ರೀಗಂಧದ ಅಭಿಷೇಕ ನೆರವೇರಿಸಧಿಲಾಯಿತು. ಅಪಾರ ಸಂಖ್ಯೆಯ ಭಕ್ತರು ಈ ವಿಶೇಷ ಸಮಾರಂಭಕ್ಕೆ ಸಾಕ್ಷಿಧಿಯಾದರು. ಈ ಸಂದರ್ಭ ಶ್ರೀ ಮಧ್ವರ ಅನುಯಾಯಿಗಳ ಜಯಘೋಷ ಮುಗಿಲು ಮುಟ್ಟಿತ್ತು. ಸುಮಾರು 96 ಮಂದಿ ವೈದಿಕರಿಂದ ವಿವಿಧ ಹೋಮ ಸೇರಿದಂತೆ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.
ಮಧ್ವರ ಮೂರ್ತಿ ಸ್ಥಾಪನೆಗೆ ಪ್ರೇರಣೆ ನೀಡಿದ, ಕನಸು ಸಾಕಾರಗೊಳಿಸಿದ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಉತ್ತರಾಧಿಧಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು, ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪೇಜಾವರ ಮಠದ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಶ್ರೀ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಮಧ್ವ ಮಠದ ಪ್ರಯಾಗದ ವಿದ್ಯಾತ್ಮ ತೀರ್ಥ ಶ್ರೀಪಾದರು, ಶ್ರೀ ಭಂಡಾರಕೇರಿ ಮಠದ ಶ್ರೀ ವಿದ್ಯೆàಶತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಅಭಿಷೇಕ ಕಾರ್ಯಕ್ರಮ ನೆರವೇರಿತು. ಕಾಪು ಶಾಸಕ ವಿನಯಕುಮಾರ್ ಸೊರಕೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.