ನ.18-20 ವರೆಗೆ ಮಾಹೆ ವಿಶ್ವವಿದ್ಯಾನಿಲಯ ಘಟಿಕೋತ್ಸವ: ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಭಾಗಿ


Team Udayavani, Nov 17, 2022, 11:05 AM IST

ನ.18-20 ವರೆಗೆ ಮಾಹೆ ವಿಶ್ವವಿದ್ಯಾನಿಲಯ ಘಟಿಕೋತ್ಸವ: ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಭಾಗಿ

ಮಣಿಪಾಲ : ಮಾಹೆ ವಿಶ್ವವಿದ್ಯಾನಿಲಯದ 30ನೇ ಘಟಿಕೋತ್ಸವವು ನ. 18ರಿಂದ 20ರ ವರೆಗೆ ಮಣಿಪಾಲ ಗ್ರೀನ್ಸ್‌ನಲ್ಲಿ ನಡೆಯಲಿದೆ. ನ. 18ರಂದು ಮುಖ್ಯ ಅತಿಥಿಯಾಗಿ ಕೇಂದ್ರ ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಭಾಗವಹಿಸಲಿದ್ದಾರೆ ಎಂದು ಮಾಹೆ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಹಾಗೂ ಕುಲಸಚಿವ ಡಾ| ನಾರಾಯಣ ಸಭಾಹಿತ್‌ ಪತ್ರಿಕಾಗೊಷ್ಠಿಯಲ್ಲಿ ತಿಳಿಸಿದರು.

ದೂರ ದೃಷ್ಟಿಯುಳ್ಳ ಪ್ರಬುದ್ಧ ವ್ಯಕ್ತಿತ್ವದ ಡಾ| ಟಿಎಂಎ ಪೈ ಅವರು 1942ರಲ್ಲಿ ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ ಆರಂಭಿಸಿ, ವಾಣಿಜ್ಯ ಮತ್ತು ತಾಂತ್ರಿಕ ಶಿಕ್ಷಣ ಲಭ್ಯ ವಾಗು ವಂತೆ ಮಾಡಿದರು. ಸ್ಥಳೀಯರಿಗೆ ಉದ್ಯೋಗಾವಕಾಶಕ್ಕೆ ನೆರವಾ ಗುವ ತರಬೇತಿಗಳನ್ನು ಆರಂಭಿಸಿದರು. 1953ರಲ್ಲಿ ದೇಶದ ಪ್ರಥಮ ಖಾಸಗಿ ವೈದ್ಯಕೀಯ ಕಾಲೇಜನ್ನು ಆರಂಭಿಸಿದರಲ್ಲದೇ ಎಂಜಿನಿಯರಿಂಗ್‌, ದಂತವೈದ್ಯಕೀಯ, ಫಾರ್ಮಸಿ, ಆರ್ಕಿಟೆಕ್ಟ್, ಕಾನೂನು, ಶಿಕ್ಷಣ ಮತ್ತು ಆಡಳಿತ ಸುಧಾರಣೆಗೆ ಸಂಬಂಧಿಸಿದ ಮ್ಯಾನೇಜ್‌ಮೆಂಟ್‌ ಕಾಲೇಜುಗಳನ್ನು ಆರಂಭಿಸಿದರು. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜ್‌ ದೇಶದ ಅಗ್ರ 10 ವೈದ್ಯಕೀಯ ಕಾಲೇಜುಗಳಲ್ಲಿ ಒಂದಾಗಿದೆ ಎಂದು ಡಾ| ಎಚ್‌.ಎಸ್‌. ಬಲ್ಲಾಳ್‌ ಹೇಳಿದರು.

ಡಾ| ಟಿಎಂಎ ಪೈ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಅವರ ಪುತ್ರ ಡಾ| ರಾಮದಾಸ ಪೈ (ಕುಲಾಧಿಪತಿ) ಅವರು ಮಾಹೆಯನ್ನು ಸ್ಥಾಪಿಸಿ, 1993ರಲ್ಲಿ ಡೀಮ್ಡ್ ವಿ.ವಿ.ಯ ಸ್ಥಾನಮಾನವನ್ನು ಒದಗಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಸ್ಥೆಯನ್ನು ಬೆಳೆಸಿದರು. ದುಬಾೖ, ಮಲೇಷ್ಯಾ ಸಹಿತ ವಿದೇಶಗಳಲ್ಲಿ ಹಾಗೂ ದೇಶದ ಬೇರೆ ಬೇರೆ ಕಡೆ ಶಾಖೆಗಳನ್ನು ಹೊಂದಿದ್ದೇವೆ. ಖಾಸಗಿ-ಸಾರ್ವಜನಿಕ ಸಹಭಾಗಿತ್ವವನ್ನು ಮೊದಲು ಆರಂಭಿಸಿದ ಮಾಹೆ ವಿ.ವಿ.ಯು ಈಗ ಖಾಸಗಿ-ಖಾಸಗಿ ಸಹಭಾಗಿತ್ವ (ಪಿಪಿಪಿ)ವನ್ನು ಆರಂಭಿಸಿದೆ ಎಂದು ಹೇಳಿದರು.

ಎನ್‌ಇಪಿ ಅನುಷ್ಠಾನ
ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಮಾತನಾಡಿ, ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಭಾಗವಾಗಿ 5 ವರ್ಷಗಳ ಕಾರ್ಯಸೂಚಿಯನ್ನು ಸಿದ್ಧಪಡಿಸಿಕೊಂಡಿ ದ್ದೇವೆ. 12 ಕೋರ್ಸ್‌ ಗಳನ್ನು 3 ವರ್ಷದಿಂದ 4 ವರ್ಷಕ್ಕೆ ವಿಸ್ತರಿಸಿದ್ದೇವೆ. 45ಕ್ಕೂ ಅಧಿಕ ಹೊಸ ಕೋರ್ಸ್‌ಗಳನ್ನು ಆರಂಭಿಸಿದ್ದೇವೆ. ಗುಣಮಟ್ಟದ ಕಲಿಕೆಯ ಜತೆಗೆ ಉತ್ಕೃಷ್ಟ ಬೋಧನೆಗೆ ಅನುಕೂಲವಾಗುವಂತೆ ಸಮರ್ಥ ಬೋಧನಾ ವರ್ಗವನ್ನು ಹೊಂದಿದ್ದೇವೆ. ಕೋವಿಡ್‌ ಬಗ್ಗೆ ಚರ್ಚೆಯಲ್ಲಿ ರುವ ಹಲವು ವಿಷಯಗಳ ಬಗ್ಗೆ ಇನ್ನಷ್ಟು ಸಂಶೋಧನೆ ನಡೆಸಲಿದ್ದೇವೆ ಎಂದರು.

ಮಾಹೆ ಪಿ.ಆರ್‌. ಆ್ಯಂಡ್‌ ಮೀಡಿಯಾ ಡೈರೆಕ್ಟರ್‌ ಎಸ್‌.ಪಿ. ಕರ್‌, ಅಡಿಷನಲ್‌ ರಿಜಿಸ್ಟ್ರಾರ್‌ ಗಿರಿಧರ್‌ ಕಿಣಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಪರೇಶ ಮೇಸ್ತ ಪ್ರಕರಣ; ಬಿ ರಿಪೋರ್ಟ್‌ಗೆ ತಂದೆ ಕಮಲಾಕರ ಆಕ್ಷೇಪಣೆ ಸಲ್ಲಿಕೆ

30ನೇ ಘಟಿಕೋತ್ಸವ
ನ. 18ರ ಮಧ್ಯಾಹ್ನ 2ಕ್ಕೆ ಆರಂಭವಾಗುವ ಮಾಹೆಯ 30ನೇ ಘಟಿಕೋತ್ಸವದಲ್ಲಿ ಕೇಂದ್ರ ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ನಾಸಿಕ್‌ನಲ್ಲಿರುವ ಮಹಾರಾಷ್ಟ್ರ ಯುನಿವರ್ಸಿಟಿ ಆಫ್ ಹೆಲ್ತ್‌ ಸೈನ್ಸ್‌ನ ಕುಲಪತಿ ಲೆ| ಜ| ಡಾ| ಮಾಧುರಿ ಕಾನಿಟ್ಕರ್‌ ಅತಿಥಿಯಾಗಿ ಭಾಗವಹಿಸಲಿದ್ದಾರೆ. 33 ಪಿಎಚ್‌.ಡಿ. ಸಹಿತ 1,680 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ.

ನ. 19ರಂದು ಕೇಂದ್ರ ರಕ್ಷಣ ಸಚಿವರ ವೈಜ್ಞಾನಿಕ ಸಲಹಗಾರ ಡಾ| ಜಿ. ಸತೀಶ್‌ ರೆಡ್ಡಿ ಭಾಗವಹಿಸಲಿದ್ದು 79 ಪಿಎಚ್‌.ಡಿ. ಸಹಿತ 1,648 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ನ. 20ರಂದು ಆ್ಯಕ್ಸಿಸ್‌ ಬ್ಯಾಂಕ್‌ನ ಎಂಡಿ ಮತ್ತು ಸಿಇಒ ಅಮಿತಾಭ್‌ ಚೌಧರಿ ಭಾಗವಹಿಸಲಿದ್ದು 26 ಪಿಎಚ್‌.ಡಿ. ಸಹಿತ 1,643 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಡಾ| ನಾರಾಯಣ ಸಭಾಹಿತ್‌ ಅವರು ವಿವರ ನೀಡಿದರು.

ಸಂಪೂರ್ಣ ಡಿಜಿಟಲ್‌
ಮಾಹೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಪೇಪರ್‌ ಮೇಲೆ ಬರೆಯುವ ವ್ಯವಸ್ಥೆ ಈಗ ಇಲ್ಲ. ಸಂಪೂರ್ಣ ಡಿಜಿಟಲ್‌ ಮಾಡಿದ್ದೇವೆ. ಆನ್‌ಲೈನ್‌ ವ್ಯವಸ್ಥೆಯ ಮೂಲಕವೇ ಪರೀಕ್ಷೆ ಬರೆಯಲಿದ್ದಾರೆ ಹಾಗೂ ಮೌಲ್ಯಮಾಪನ ಪ್ರಕ್ರಿಯೆಗಳು ಕೂಡ ಆನ್‌ಲೈನ್‌ನಲ್ಲೇ ಇರಲಿವೆ ಎಂದ ಅವರು, ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕಗಳ ಚೌಕಟ್ಟು(ಎನ್‌ಐಆರ್‌ಎಫ್)-2022ರ ಪ್ರಕಾರ ವಿ.ವಿ.ಗಳ ವಿಭಾಗದಲ್ಲಿ ಮಾಹೆ ಏಳನೇ ಸ್ಥಾನ ಪಡೆದಿದೆ. ವಿವಿಧ ಶೈಕ್ಷಣಿಕ ಶ್ರೇಯಾಂಕದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ. 3,000ಕ್ಕೂ ಅಧಿಕ ಸಂಶೋಧನ ಪ್ರಬಂಧಗಳನ್ನು ಮಂಡಿಸಲಾಗಿದೆ. ಜೆಮ್ಶೆಡ್‌ಪುರದಲ್ಲಿ ಟಾಟಾ ಸಂಸ್ಥೆಯ ಜತೆ ಸೇರಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು, ಆಸ್ಪತ್ರೆ ಆರಂಭಿಸಿದ್ದೇವೆ ಎಂದು ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಹೇಳಿದರು.

ಟಾಪ್ ನ್ಯೂಸ್

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ

5

Chocolate ಕೇವಲ ಸಸ್ಯಾಹಾರವೇ? ಸಸ್ಯಾಹಾರಿಗಳೇ ಗಮನಿಸಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮೃತರ ಕುಟುಂಬಸ್ಥರು ಪಾರದರ್ಶಕ ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಸಿದರು

AjekarCase: ತನಿಖೆ ದಿಕ್ಕು ತಪ್ಪುತ್ತಿದೆ: ದಿಲೀಪ್ ತಂದೆ ವಿರುದ್ದ ಬಾಲಕೃಷ್ಣ ಮನೆಯವರ ಆರೋಪ

8

Katpadi: ಭತ್ತದ ತೆನೆಯಿಂದಲೇ ಆಟೋ ರಿಕ್ಷಾ ಅಲಂಕರಿಸಿ ಸಂಭ್ರಮಿಸಿದ ಚಾಲಕ

Udupi: ಗೀತಾರ್ಥ ಚಿಂತನೆ-83: ಅಪೇಕ್ಷಿತ-ಅನಪೇಕ್ಷಿತ ವಂಶವಾಹಿಗಳು

Udupi: ಗೀತಾರ್ಥ ಚಿಂತನೆ-83: ಅಪೇಕ್ಷಿತ-ಅನಪೇಕ್ಷಿತ ವಂಶವಾಹಿಗಳು

ರಾಜ್ಯ ಸರಕಾರದ ವಿರುದ್ಧ ಮೂರು ಹಂತದ ಪ್ರತಿಭಟನೆ: ಕಿಶೋರ್‌

Congress Govt.,: ರಾಜ್ಯ ಸರಕಾರದ ವಿರುದ್ಧ ಮೂರು ಹಂತದ ಪ್ರತಿಭಟನೆ: ಕಿಶೋರ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

9

Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

death

Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.