![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 8, 2024, 1:00 AM IST
ಮಣಿಪಾಲ: ಮಾಹೆ ವಿಶ್ವವಿದ್ಯಾನಿಲಯದ ಎಂಐಟಿಯ ಹಳೆವಿದ್ಯಾರ್ಥಿ ಹರೀಶ್ ಶಾ ಅವರ ಹರೀಶ್ ಮತ್ತು ಬಿನಾ ಶಾ ಫೌಂಡೇಶನ್ ಮೂಲಕ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಬಿಎಚ್‌ಎಸ್‌ಎಫ್-ಮಾಹೆ ಎಜುಎಂಪವರ್ ಸ್ಕಾಲರ್‌ಶಿಪ್ ಆರಂಭಿಸಿದೆ.
ಎಂಐಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಹೆ ವಿವಿ ಸಹ ಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್, ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್ ಇದಕ್ಕೆ ಚಾಲನೆ ನೀಡಿ, ಶೈಕ್ಷಣಿಕ ಸಂಸ್ಥೆಯ ಸಾಧನೆ ಮತ್ತು ಅದರ ಹಳೇ ವಿದ್ಯಾರ್ಥಿ ಸಾಧನೆಯ ಗುಣಮಟ್ಟಕ್ಕೆ ಇದು ಸಾಕ್ಷಿಯಾಗಿದೆ. ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆಯ ಮೂಲಕ ಸದೃಢ ಸಮಾಜಕ್ಕೆ ಪೂರಕವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಎಂಐಟಿ ನಿರ್ದೇಶಕ ಕ| ಡಾ| ಅನಿಲ್ ರಾಣ ಮಾತನಾಡಿ, ಸಂಸ್ಥೆಯ ಹಳೆ ವಿದ್ಯಾರ್ಥಿ ರೂಪಿಸಿರುವ ಈ ಉಪಕ್ರಮವು ಪ್ರತಿಭೆಯನ್ನು ಪೋಷಿಸುತ್ತದೆ. ಆರ್ಥಿಕವಾಗಿ ದುರ್ಬಲರಾಗಿರುವ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ ಎಂದರು.
ಹರೀಶ್ ಶಾ ಅವರು ಅಭಿಪ್ರಾಯ ಹಂಚಿಕೊಂಡರು. ಈ ವಿದ್ಯಾರ್ಥಿವೇತನದಡಿಯಲ್ಲಿ ವರ್ಷಕ್ಕೆ 60 ವಿದ್ಯಾರ್ಥಿಗಳಂತೆ 240 ವಿದ್ಯಾರ್ಥಿಗಳಿಗೆ 12 ಕೋ.ರೂ. ನೀಡುವ ಗುರಿ ಹೊಂದಿದೆ. 2024-25ನೇ ಶೈಕ್ಷಣಿಕ ವರ್ಷದಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ. ಈ ವಿದ್ಯಾರ್ಥಿ ವೇತನ ಪಡೆಯುವ ವಿದ್ಯಾರ್ಥಿಯು ಮಾಹೆ ಪ್ರವೇಶ ಪರೀಕ್ಷೆಯಲ್ಲಿ ಅಖಿಲ ಭಾರತ ಶ್ರೇಣಿಯ 1-10,000 ನಡುವೆ ಇರಬೇಕು. ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ರೂ.ಗಿಂತ ಕಡಿಮೆ ಇರಬೇಕು. ವಿಜ್ಞಾನ ವಿಭಾಗದಲ್ಲಿ ಬೋರ್ಡ್ ಪರೀಕ್ಷೆಯಲ್ಲಿ ಶೇ. 85ಕ್ಕಿಂತ ಹೆಚ್ಚಿನ ಅಂಕ ಪಡೆದಿರಬೇಕು ಮತ್ತು 8ನೇ ತರಗತಿಯಿಂದ 12ನೇ ತರಗತಿ ಶಿಕ್ಷಣ ಭಾರತದಲ್ಲಿ ಮಾಡಿರಬೇಕು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.