Manipal: ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್ ಬಾಯಲ್
Team Udayavani, Sep 26, 2024, 12:30 AM IST
ಮಣಿಪಾಲ: ಸಾಲ ಮತ್ತು ಠೇವಣಿ ಅನುಪಾತ (ಸಿಡಿ ರೇಷಿಯೋ) ಹೆಚ್ಚಿಸಲು ಬ್ಯಾಂಕ್‌ಗಳು ಹೆಚ್ಚು ಶ್ರಮ ವಹಿಸಬೇಕು. ಎಲ್ಲ ಬ್ಯಾಂಕ್‌ಗಳು ಕಡ್ಡಾಯವಾಗಿ ಕನ್ನಡ ಸೂಚನಾ ಫಲಕಗಳನ್ನು ಅಳವಡಿಸಬೇಕು ಹಾಗೂ ಸ್ಥಳೀಯ ಗ್ರಾಹಕರ ಅನುಕೂಲಕ್ಕಾಗಿ ಕನ್ನಡ ತಿಳಿದಿರುವ ಸಿಬಂದಿಯೊಬ್ಬರನ್ನು ನಿಯೋಜಿಸಿಕೊಂಡಿರಬೇಕು ಎಂದು ಜಿಪಂ ಸಿಇಒ ಪ್ರತೀಕ್ ಬಾಯಲ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿ.ಪಂ.ನ ಡಾ| ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ಜರಗಿದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬ್ಯಾಂಕ್‌ಗಳ ಮ್ಯಾನೇಜರ್, ಸಿಬಂದಿ ಜನಸಾಮಾನ್ಯರೊಂದಿಗೆ ಬ್ಯಾಂಕಿನ ವ್ಯವಹಾರಗಳ ಕುರಿತು ಕನ್ನಡ ಭಾಷೆಯಲ್ಲಿ ವ್ಯವಹರಿಸುವುದರಿಂದ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಹೆಚ್ಚಲಿದೆ. ಆಗ ಸಿಡಿ ರೇಷಿಯೋ ಹೆಚ್ಚಿ ಸಲು ಅನುಕೂಲವಾಗಲಿದೆ ಎಂದರು.
ಸಾರ್ವಜನಿಕರ ಜೀವನ ಸುಧಾರಣೆಗೆ ಸರಕಾರಗಳ ಹಲವಾರು ಯೋಜನೆಗಳು ಜಾರಿಯಲ್ಲಿವೆ. ಈ ಕುರಿತು ಬ್ಯಾಂಕ್ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜನಸಾಮಾನ್ಯರಿಗೆ ವ್ಯವಹಾರ ಚಟುವಟಿಕೆಗಳ ಕುರಿತು ಅರಿವು ಮೂಡಿಸುವ ಮೂಲಕ ಹೆಚ್ಚಿನವರು ಯೋಜನೆಯ ಫಲಾನುಭವಿಗಳನ್ನಾಗಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯ ಬ್ಯಾಂಕ್‌ಗಳಲ್ಲಿ 2023ರ ಜೂನ್ ಅಂತ್ಯಕ್ಕೆ 52,676 ಕೋ. ರೂ. ವ್ಯವಹಾರ ನಡೆದಿದ್ದು, 2024ರ ಜೂನ್ ಅಂತ್ಯಕ್ಕೆ 58,352 ಕೋ. ರೂ.ವ್ಯವಹಾರ ನಡೆದು, 5,676 ಕೋ. ರೂ. ಹೆಚ್ಚಾಗಿ ಶೇ.10.78ರಷ್ಟು ಬೆಳೆವಣಿಗೆಯಾಗಿದೆ. ಆರ್ಥಿಕತೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಮಾದರಿಯಾಗಲು ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು ಎಂಬ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಆದ್ಯತಾ ವಲಯಗಳಿಗೆ 2,703.09 ಕೋ. ರೂ. ಸಾಲ ವಿತರಿಸಿ ಶೇ. 30.74 ಹಾಗೂ ಆದ್ಯತೇತರ ವಲಯಗಳಿಗೆ 1,677.82 ಕೋ. ರೂ. ಸಾಲ ವಿತರಿಸಿ, ಶೇ. 43.65 ರಷ್ಟು ಸಾಧನೆ ಮಾಡಲಾಗಿದೆ. ಆದ್ಯತಾ ವಲಯಗಳಿಗೆ ಸಾಲ ನೀಡಿಕೆ ಹೆಚ್ಚಾಗಬೇಕು. ಆದ್ಯತೇತರ ವಲಯವೇ ಬ್ಯಾಂಕ್ ಆದ್ಯತೆ ಆಗಬಾರದು. ಸರಕಾರದ ಯೋಜನೆಗಳು ಹಾಗೂ ಆದ್ಯತ ವಲಯಗಳಿಗೆ ಹೆಚ್ಚೆಚ್ಚು ಸಾಲಸೌಲಭ್ಯ ಒದಗಿಸಬೇಕು ಎಂದರು.
ಕೆನರಾ ಬ್ಯಾಂಕ್‌ನ ರೀಜನಲ್ ಮ್ಯಾನೇಜರ್ ಶಿಬಾ ಸಹಜನ್ ಮಾತ ನಾಡಿ, ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಬ್ಯಾಂಕಿಂಗ್ ಸಾಲ-ಠೇವಣಿ ಅನುಪಾತ ಇಳಿಮುಖವಾಗಿದೆ. ಕಳೆದ ವರ್ಷ ಶೇ.46.94ರಷ್ಟಿದ್ದು, ಈ ಬಾರಿ ಅದು ಶೇ.46.92ರಷ್ಟಾಗಿದೆ. ಇದು ರಾಜ್ಯದಲ್ಲೇ ಕೆಳ ಹಂತದ್ದಾಗಿದೆ. ಉ.ಕ.ಜಿಲ್ಲೆ ಅಂತಿಮ ಸ್ಥಾನದಲ್ಲಿದ್ದು, ಅನಂತರ ಉಡುಪಿ ಇದೆ. ಸಿ.ಡಿ. ರೇಷಿಯೋ ಶೇ.50ಕ್ಕಿಂತ ಕಡಿಮೆ ಇರುವುದು ಕಳವಳಕಾರಿ ಸಂಗತಿ ಎಂದರು.
ಆರ್‌ಬಿಐ ಎಕ್ಸಿಕ್ಯುಟಿವ್ ಇಳಾ ಸಾಹು ಮಾತನಾಡಿ, ಆರ್‌ಬಿಐ ವಿದ್ಯಾರ್ಥಿಗಳಿಗೆ ಕ್ವಿಜ್ ಏರ್ಪಡಿಸು ತ್ತಿದ್ದು, ರಾಜ್ಯದ 20 ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಅದರಲ್ಲಿ ಉಡುಪಿಯ 600 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಬ್ಯಾಂಕ್‌ಗಳು ಆರ್‌ಬಿಐನ ಎಲ್ಲ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು ಎಂದರು.
ನಬಾರ್ಡ್‌ನ ಡಿಡಿಎಂ ಸಂಗೀತಾ ಕರ್ತಾ ನಬಾರ್ಡ್ ನೀಡುತ್ತಿರುವ ಸೌಲಭ್ಯದ ಕುರಿತು ಮಾಹಿತಿ ನೀಡಿದರು. ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಜಿಎಂ ರಾಜೇಶ್ ಶೆಟ್ಟಿ ಹಾಗೂ ವಿವಿಧ ಬ್ಯಾಂಕ್‌ಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ. ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್.ಕೆ.ಪಾಟೀಲ್
ಮಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ
Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.