ಉಡುಪಿ ಜಿಲ್ಲೆ: ಜೂನ್‌ನಲ್ಲಿ 48 ಮಲೇರಿಯಾ, 84 ಡೆಂಗ್ಯೂಪ್ರಕರಣ
Team Udayavani, Jul 7, 2017, 3:40 AM IST
ಉಡುಪಿ: ಜೂನ್ ತಿಂಗಳಲ್ಲಿ ಜಿಲ್ಲೆಯಲ್ಲಿ 48 ಮಲೇರಿಯಾ, 84 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಸಾಂಕ್ರಾಮಿಕ ರೋಗ ತಡೆಗೆ ಪ್ರಕರಣ ಹೆಚ್ಚಿರುವ ಪ್ರದೇಶಗಳಲ್ಲಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಿಸಲಾಗಿದೆ. ಸೊಳ್ಳೆ ಪರದೆಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರೋಹಿಣಿ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಅಪರ ಜಿಲ್ಲಾಧಿಕಾರಿ ಅನುರಾಧಾ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮಲೇರಿಯಾ ಸಮನ್ವಯ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಮಲೇರಿಯಾ ಟ್ರ್ಯಾಕಿಂಗ್ ಬಗ್ಗೆ ಆರೋಗ್ಯ ಕಾರ್ಯಕರ್ತರಿಗೆ ಸೂಕ್ತ ತರಬೇತಿ ನೀಡಲಾಗಿದೆ ಎಂದರು.
ಜುಲೈಯಿಂದ ಆಗಸ್ಟ್‌ವರೆಗೆ ಡೆಂಗ್ಯೂ ಮಾಸಾಚರಣೆ ಮಾಡಲು ಸೂಚನೆ ನೀಡಲಾಗಿದೆ. ನಿಟ್ಟೂರು, ಹನುಮಂತನಗರ ಮುಂತಾದೆಡೆ ಒಟ್ಟು 54 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ಎಂದು ಮಲೇರಿಯಾಧಿಕಾರಿ ಡಾ| ಪ್ರೇಮಾನಂದ ಮಾಹಿತಿ ನೀಡಿದರು. ಈಗಾಗಲೇ ಜಿಲ್ಲೆಯಲ್ಲಿ ಮಲೇರಿಯಾ ಜಾಗೃತಿ ಸಂಬಂಧ ಆರೋಗ್ಯ ಇಲಾಖೆ ಸ್ಥಳೀಯಾಡಳಿತ ಸಮನ್ವಯದೊಂದಿಗೆ ಹಲವು ಕಾರ್ಯ ಕ್ರಮಗಳನ್ನು ಕೈಗೊಂಡಿದ್ದು, ಈ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಅನುರಾಧಾ ಅವರು ಹೇಳಿದರು.
ಶಾಲೆಗಳಲ್ಲಿ, ಸ್ಥಳೀಯಾಡಳಿತ ಪ್ರದೇಶಗಳಲ್ಲಿ ಐಇಸಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳು ಮಲೇರಿಯಾ ಚಿಕಿತ್ಸೆ ನೀಡುವ ವೇಳೆ ಸರಕಾರದ ನೀತಿಯನ್ನು ಅನುಸರಿಸಬೇಕು. ವಲಸೆ ಕಾರ್ಮಿಕರು ಸ್ಪ್ರೇ ಸುರಕ್ಷಾ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು. ಫೋನ್ ಇನ್ ಕಾರ್ಯಕ್ರಮ, ಸಮುದಾಯ ಮಾಹಿತಿ, ಮಾಧ್ಯಮಗಳ ಮೂಲಕ ಮಾಹಿತಿ ನೀಡುವಂತೆಯೂ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.