Malpe: ಸಂಪೂರ್ಣ ಕಿತ್ತು ಹೋದ ಕೊಡವೂರು-ಮೂಡುಬೆಟ್ಟು ಸೇತುವೆ ಬಳಿಯ ಸಂಪರ್ಕ ರಸ್ತೆ
ವಾಹನ ಸಂಚಾರವೇ ಕಷ್ಟ; ಶೀಘ್ರ ದುರಸ್ತಿಗೆ ಆಗ್ರಹ
Team Udayavani, Sep 26, 2024, 5:03 PM IST
ಮಲ್ಪೆ: ಉಡುಪಿ ನಗರಸಭೆ ಮೂಡುಬೆಟ್ಟು ವ್ಯಾಪ್ತಿಯ ಕೊಡವೂರಿನಿಂದ ಮೂಡುಬೆಟ್ಟು ಸಂಪರ್ಕ ಕಲ್ಪಿಸುವ ಸೇತುವೆ ಬಳಿ ರಸ್ತೆ ಸಂಪೂರ್ಣ ಹದಗೆಟ್ಟು ತಗ್ಗು-ಗುಂಡಿಗಳೇ ನಿರ್ಮಾಣವಾಗಿವೆ. ಇದರಿಂದ ಈ ಭಾಗದಲ್ಲಿ ಸಂಚರಿಸುವ ಸಾವಿರಾರು ವಾಹನ ಸವಾರರು, ಸಾರ್ವಜನಿಕರು, ವಿದ್ಯಾರ್ಥಿಗಳು ನಿತ್ಯ ಪರದಾಡುತ್ತಿದ್ದಾರೆ.
ಕೊಡವೂರು ಮೂಡುಬೆಟ್ಟು ಮೂಲಕ ಆದಿಉಡುಪಿ, ಉಡುಪಿಗೆ ಮುಖ್ಯ ರಸ್ತೆ ಇದಾಗಿದ್ದು ಇಲ್ಲಿನ ಸೇತುವೆಯಿಂದ 20 ಮೀಟರ್ ದೂರ ಇರುವ ರಸ್ತೆಯ ಡಾಮರು ಕಿತ್ತು ಹೋಗಿದೆ. ಅಲ್ಲಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿದ್ದು, ಜಲ್ಲಿಕಲ್ಲುಗಳು ತೇಲುತ್ತಿವೆ. ರಸ್ತೆ ತಗ್ಗುಗಳಲ್ಲಿ ಮಳೆ ನೀರು ಸಂಗ್ರಹವಾಗಿ ಹೊಂಡಗಳಂತೆ ಕಾಣುತ್ತಿವೆ.
ಇಲ್ಲಿ ಕಡಿದಾದ ತಿರುವು ಇದೆ. ತಿರುವಿನಲ್ಲಿ ವೇಗವಾಗಿ ಬರುವ ವಾಹನ ಸವಾರರು ಇಲ್ಲಿ ಹೊಂಡಕ್ಕೆ ಬೀಳುವ ಸಾಧ್ಯತೆ ಹೆಚ್ಚು. ಹಾಗಾಗಿ ಈ ರಸ್ತೆಯಲ್ಲಿ ಪ್ರಯಾಣಿಕರು ನಿತ್ಯ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಇದೆ ಎಂದು ಸಾರ್ವಜನಿಕರು ಅಳಲು ತೋಡಿಕೊಳುತ್ತಿದ್ದಾರೆ.
ಇಂದ್ರಾಣಿ ನದಿಗೆ ತಡೆಗೋಡೆ ನಿರ್ಮಿಸಿ
ಈ ರಸ್ತೆಯ ಪಕ್ಕದಲ್ಲೇ ಇಂದ್ರಾಣಿ ನದಿ ಹರಿಯುತ್ತಿರುವುದರಿಂದ ಮಳೆಗಾಲದಲ್ಲಿ ಇಲ್ಲಿ ನೀರಿನ ಹರಿವು ಜಾಸ್ತಿಯಾಗಿ ಉಕ್ಕೇರಿ ಬಂದು ಪರಿಸರದ ಸುತ್ತ ತುಂಬಿಕೊಳ್ಳುತ್ತದೆ. ನದಿಯ ತಿರುವು ಈ ಭಾಗದಲ್ಲೆ ಇರುವುದರಿಂದ ಇಲ್ಲಿ ನೀರಿನ ಹರಿಯುವಿಕೆ ಹೆಚ್ಚಾಗಿ ಮೇಲೆ ಬರುವುದು ಸಹಜ. ಮಾತ್ರವಲ್ಲದೆ ಇಲ್ಲಿ ರಸ್ತೆ ತಗ್ಗು ಪ್ರದೇಶದಲ್ಲಿರುವುದರಿಂದ ಯಾವಾಗಲೂ ನೀರು ತುಂಬಿ ರಸ್ತೆ ಹಾಳಾಗುವುದು ಸಾಮಾನ್ಯ. ಮುಖ್ಯರಸ್ತೆಯ ಸಮೀಪ ಇಂದ್ರಾಣಿ ನದಿಗೆ ಈ ಭಾಗದಲ್ಲಿ ಸುಮಾರು 200 ಮೀಟರ್ ಉದ್ದಕ್ಕೆ ತಡೆಗೊಡೆಯನ್ನು ನಿರ್ಮಿಸಿದರೆ ಸಮಸ್ಯೆಯನ್ನು ತಕ್ಕಮಟ್ಟಿಗೆ ಪರಿಹರಿಸಲು ಸಾಧ್ಯವಿದೆ ಎನ್ನುತ್ತಾರೆ ಸ್ಥಳೀಯರಾದ ಬಾಲಕೃಷ್ಣ ಕೊಡವೂರು.
ಹೆಜ್ಜೆ ಹೆಜ್ಜೆಗೂ ಗುಂಡಿ
ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ಹೆಜ್ಜೆ ಹೆಜ್ಜೆಗೂ ಗುಂಡಿಗಳಿಂದ ಕೂಡಿದೆ. ಇದರಿಂದ ತೀವ್ರ ತೊಂದರೆಯಾಗಿದೆ. ರಸ್ತೆ ದುರಸ್ತಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿಗೆ ಮುಂದಾಗಬೇಕು.
-ಸತೀಶ್ ಕೋಟ್ಯಾನ್, ಸ್ಥಳೀಯರು
ಪ್ರಯತ್ನಿಸಲಾಗುತ್ತಿದೆ
ಇಲ್ಲಿನ ರಸ್ತೆ ದುರಸ್ತಿಗೆ 11 ಲಕ್ಷ ರೂ. ಅಂದಾಜು ಪಟ್ಟಿ ತಯಾರಿಸಲಾಗಿದ್ದು ಟೆಂಡರ್ ಕರೆಯಲಾಗಿತ್ತು. ಈ ಮಧ್ಯೆ ತಾಂತ್ರಿಕ ಸಮಸ್ಯೆ ಎದುರಾಗಿದ್ದರಿಂದ ಮರು ಟೆಂಡರ್‌ಗೆ ಹೋಗಿದೆ. ಇದೀಗ ನೀತಿ ಸಂಹಿತೆ ಇರುವುದರಿಂದಾಗಿ ಸ್ವಲ್ಪ ಮಟ್ಟಿಗೆ ವಿಳಂಬವಾಗುತ್ತಿದೆ. ಈ ಬಗ್ಗೆ ಎಲ್ಲ ಪ್ರಯತ್ನವನ್ನು ಮಾಡಲಾಗುತ್ತಿದೆ.
-ಶ್ರೀಶ ಭಟ್ ಕೊಡವೂರು, ನಗರಸಭಾ ಸದಸ್ಯರು, ಮೂಡುಬೆಟ್ಟು ವಾರ್ಡ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.