ಮಲ್ಪೆ ಬೀಚ್‌: ಇಂದಿನಿಂದ 3 ದಿನ “ಉಡುಪಿ ಪರ್ಬ’


Team Udayavani, Dec 29, 2017, 1:30 PM IST

29-26.jpg

ಮಲ್ಪೆ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಿರ್ಮಿತಿ ಕೇಂದ್ರ, ಮಲ್ಪೆ ಅಭಿವೃದ್ಧಿ ಸಮಿತಿ, ಉಡುಪಿ ಡಾ| ಜಿ. ಶಂಕರ್‌ ಸರಕಾರಿ ಮಹಿಳಾ ಪ್ರ.ದ.ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಜನರಲ್‌ ತಿಮ್ಮಯ್ಯ ರಾಷ್ಟ್ರೀಯ ಅಕಾಡೆಮಿ ಬೆಂಗಳೂರು ಹಾಗೂ ಕರಾವಳಿ ಪ್ರವಾಸೋದ್ಯಮಗಳ ಸಂಘಟನೆಗಳ ಆಶ್ರಯದಲ್ಲಿ ಮಲ್ಪೆ ಕಡಲ ಕಿನಾರೆಯಲ್ಲಿ ಡಿ. 29ರಿಂದ 31ರ ವರೆಗೆ ನಡೆಯಲಿರುವ ಉಡುಪಿ ಪರ್ಬ ಮತ್ತು ಉಡುಪಿ ಸಾಹಸ ಉತ್ಸವಕ್ಕೆ ಭರದ ಸಿದ್ದತೆಗಳು ನಡೆಯುತ್ತಿವೆ.

ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೋತ್ಸವ, ಸಾಹಸ ಕ್ರೀಡೆ, ಆಹಾರೋತ್ಸವ, ಗೂಡುದೀಪ ಸ್ಪರ್ಧೆ, ಮರಳು ಶಿಲ್ಪ, ಗಾಳಿಪಟ ಮುಂತಾದ ಕಾರ್ಯಕ್ರಮಗಳು ನಡೆಯಲಿದ್ದು ಅದಕ್ಕಾಗಿ ಸಂಘಟಕರಿಂದ ಪೂರ್ವ ತಯಾರಿಗಳು ನಡೆಯುತ್ತಿವೆ. ಕಾರ್ಯಕ್ರಮಕ್ಕೆ ಬೃಹತ್‌ ಗಾತ್ರದ ವೇದಿಕೆಯ ನಿರ್ಮಾಣದ ಕೆಲಸಗಳು ನಡೆಯುತ್ತಿವೆ.  ಕರಕುಶಲ ವಸ್ತುಗಳು ಸೇರಿದಂತೆ ಆಹಾರ ಮೇಳಗಳ ಪ್ರದರ್ಶನ ಮತ್ತು ಮಾರಾಟದ 30 ಮಳಿಗೆಗಳನ್ನು ತೆರೆಯಲಾಗುತ್ತದೆ. 

ಸಿಸಿ ಕೆಮರಾ ಅಳವಡಿಕೆ
ಮುಂಜಾಗ್ರತೆಗಾಗಿ ಈಗಿರುವ 7 ಸಿಸಿ ಕೆಮರಾ ಅಲ್ಲದೆ ಹೆಚ್ಚುವರಿಯಾಗಿ 12 ಕೆಮರಾಗಳನ್ನು ಅಳವಡಿಸಲಾಗಿದೆ. ಕಾರ್ಯಕ್ರಮದ ವೀಕ್ಷಣೆಗಾಗಿ ಸುಮಾರು 5 ಸಾವಿರ ಮಂದಿ ಕುಳಿತುಕೊಳ್ಳಲು ಆಸನದ ವ್ಯವಸ್ಥೆಯನ್ನು ಮಾಡಲಾಗಿದೆ. ಡಿ. 29ರಂದು ಸಂಜೆ 6 ಗಂಟೆಗೆ ನಡೆಯಲಿರುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅಧ್ಯಕ್ಷತೆಯಲ್ಲಿ ಪ್ರವಾಸೋದ್ಯಮ ಸಚಿವ ಪ್ರಿಯಾಂಕಾ ಖರ್ಗೆ ಅವರು ಚಾಲನೆ ನೀಡಲಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಶಿವಮಣಿ ಅವರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ. 

30ರಂದು ಪ್ರಹ್ಲಾದ ಆಚಾರ್ಯ ಅವರಿಂದ ಶ್ಯಾಡೋ ಪ್ಲೇ  ಆಳ್ವಾಸ್‌ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ಜರಗಲಿದೆ. ಡಿ. 31ರಂದು ಸರಿಗಮಪ ತಂಡದವರಿಂದ ಸಂಗೀತ ಸಂಜೆ, ಬಳಿಕ ಹೊಸವರ್ಷ ಆಚರಣೆಯ ಪ್ರಯುಕ್ತ ಮಂತ್ರ ಡಯಾಲ್‌ ವತಿಯಿಂದ ಒಂದು ಗಂಟೆ ಅವಧಿಯ ಸುಡುಮದ್ದು ಪ್ರದರ್ಶನ ನಡೆಯಲಿದೆ

ರಾಷ್ಟ್ರೀಯ ಓಪನ್‌ ಈಜು
ರಾಷ್ಟ್ರಮಟ್ಟದ  ಓಪನ್‌ ಸ್ವಿಮ್ಮಿಂಗ್‌ ಸ್ಪರ್ಧೆಗಳು ಡಿ. 30ರಂದು ಬೆಳಗ್ಗೆ 7 ಕ್ಕೆ ಮಲ್ಪೆ ಅರಬ್ಬಿ ಸಮುದ್ರದಲ್ಲಿ ನಡೆಯಲಿದೆ. ಭಾರತದಲ್ಲಿ ನಡೆಯುವ ಏಕೈಕ ಓಪನ್‌ ಈಜು ಸ್ಪರ್ಧೆ ಇದಾಗಿದೆ. ಈಗಾಗಲೇ 270 ಮಂದಿ 14, 16, 18  ವಯೋ ವಿಭಾಗದಲ್ಲಿ ನೋಂದಣಿ ಮಾಡಿದ್ದಾರೆ.ಅಗತ್ಯವಿರುವ ಕ್ರೀಡಾ ಸಾಮಗ್ರಿಗಳನ್ನು ತರಲಾಗಿದ್ದು, ರಾಷ್ಟ್ರೀಯ ಸ್ವಿಮ್ಮಿಂಗ್‌ ಫೆಡರೇಶನಿನ ಕಾರ್ಯದರ್ಶಿ ಬಂದು ಸ್ಥಳದ ಪರಿವೀಕ್ಷಣೆ ನಡೆಸಿದ್ದಾರೆ. ಇಲ್ಲಿ ವಿಜೇತರಾದವರು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಅಂದು ಬೆಳಗ್ಗೆ 11 ಗಂಟೆಗೆ ಮಹಿಳೆಯರಿಗೆ ಮತ್ತು ಪುರುಷರಿಗೆ ಬೀಚ್‌ ಹಗ್ಗಜಗ್ಗಾಟವೂ ನಡೆಯಲಿದೆ.

ಸಾಹಸ ಸ್ಪರ್ಧೆ
ಉಡುಪಿ ಪರ್ಬದ ಅಂಗವಾಗಿ ಟೆರಿಸ್ಟ್ರೀಯ ಅಡ್ವೆಂಚರ್‌ ನ್ಪೋರ್ಟ್ಸ್ ಗಳಾದ ಬೋಲ್ಡಿಂಗ್‌ ಸ್ಲೇಕ್‌ಲೈನ್‌, ಜುಮ್ಮರಿಂಗ್‌, ಬರ್ಮಾಬ್ರಿಡ್ಜ್, ಕಮಾಂಡೋ ಬ್ರಿಡ್ಜ್, ಸೇಕ್‌ಲೈನ್‌ ಸುರಕ್ಷತಾ ಕಾರ್ಯಾಗಾರಗಳು ನಡೆಯಲಿವೆೆ. 125 ಕಿ. ಮೀ. ಸೈಕಲ್‌ ಸ್ಪರ್ಧೆ, ಈಜು, ಎಕ್ಟ್ರೀಮ್‌ ಸೋ³ರ್ಟ್ಸ್, ಬಿಎಂಎಕ್ಸ್‌, ಸೇಟ್‌ ಬೋರ್ಡಿಂಗ್‌, ಸಾರ್ವಜನಿಕರಿಗೆ ರಿಯಾಯಾತಿ ದರದಲ್ಲಿ ಜೆಟ್‌ಸ್ಕೈ, ವಿಂಡ್‌ ಸರ್ಫಿಂಗ್‌, ಬನಾನ ರೈಡ್‌, ಕಯಾಕಿಂಗ್‌ ನಡೆಸಲಾಗುವುದು. 

ನಟರಾಜ್‌ ಮಲ್ಪೆ
ಚಿತ್ರಗಳು: ಆಸ್ಟ್ರೋ ಮೋಹನ್‌

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.