ಮಲ್ಪೆ : ಹಾವು ಕಚ್ಚಿ ವ್ಯಕ್ತಿ ಸಾವು : ಮನೆಯ ಕಪಾಟಿನ ಮೇಲಿದ್ದ ಬಟ್ಟೆ ತೆಗೆಯಲು ಹೋದಾಗ ದುರಂತ
Team Udayavani, Jun 14, 2022, 10:44 PM IST
ಮಲ್ಪೆ : ನಾಗರಹಾವು ಕಚ್ಚಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಿದಿಯೂರು ಗ್ರಾಮದ ಸುಧಾಕರ ಅಮೀನ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸುಧಾಕರ ಅಮೀನ್ (55) ಅವರಿಗೆ ಜೂ. 8ರಂದು ತಮ್ಮ ಮನೆಯ ಕೋಣೆಯಲ್ಲಿ ಕಪಾಟಿನ ಮೇಲೆ ಇಟ್ಟಿದ್ದ ಅಂಗಿಯನ್ನು ತೆಗೆಯಲು ಹೋದಾಗ ಕಪಾಟಿನ ಮೇಲೆ ಇದ್ದ ನಾಗರಹಾವು ಕಚ್ಚಿದೆ.
ಕೂಡಲೇ ಸುಧಾಕರ ಅಮೀನ್ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಜೂ. 13ರಂದು ಮಧ್ಯಾಹ್ನದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಅಕ್ಕ ವನಜ ಅಮೀನ್ ಅವರು ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕಾರ್ಕಳ: ಜೀವ ಬೆದರಿಕೆ ಒಡ್ಡಿದ ಪ್ರಕರಣ: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.