ಮಲ್ಪೆ : ಮಕ್ಕಳ ಅಪಹರಣ ಯತ್ನ ವದಂತಿ; ಪೊಲೀಸರಿಂದ ಪರಿಶೀಲನೆ
Team Udayavani, Jul 27, 2022, 12:23 AM IST
ಮಲ್ಪೆ : ಮಲ್ಪೆ ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ಮಕ್ಕಳ ಅಪಹರಣಕ್ಕೆ ಯತ್ನ ನಡೆದಿದೆ ಎಂಬ ವದಂತಿ ಹರಡಿದ್ದು, ಇದರಿಂದ ಜನರು ಆತಂಕಗೊಂಡಿದ್ದಾರೆ.
ಮಲ್ಪೆ ವಡಭಾಂಡೇಶ್ವರ ಸಮೀಪ ರಸ್ತೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಜು. 21ರಂದು ಶಾಲೆಯ ವಾಹನಕ್ಕಾಗಿ ರಸ್ತೆ ಬದಿ ಕಾಯುತ್ತಿದ್ದ ಬಾಲಕಿಗೆ ಆಮ್ನಿ ಕಾರಿನಲ್ಲಿ ಬಂದ ಮೂವರು ಚಾಕ್ಲೇಟ್ ತೋರಿಸಿ ಅಪಹರಣಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂದರ್ಭದಲ್ಲಿ ಬಾಲಕಿ ಬೊಬ್ಬೆ ಹಾಕಿದ್ದಾಳೆ. ಅಷ್ಟರಲ್ಲಿ ಅಪಹರಣಕಾರರು ಕಾರು ಚಲಾಯಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮಲ್ಪೆ ಪೊಲೀಸರು ಸ್ಥಳೀಯರು ನೀಡಿದ ಮಾಹಿತಿಯ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಆಸುಪಾಸಿನಲ್ಲಿರುವ ಸಿಸಿ ಕೆಮರಾವನ್ನು ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಅಪಹರಣದ ಕುರಿತು ವಾಟ್ಸ್ಆ್ಯಪ್ನಲ್ಲಿ ಮಾಹಿತಿ ಹರಿದಾಡಿದ್ದು, ಪೋಷಕರು ಭಯಭೀತರಾಗಿದ್ದಾರೆ.
ಬಾಲಕಿ ಹೇಳಿದ ಜಾಗ, ಸಮಯ, ಆಕೆ ನಡೆದುಕೊಂಡು ಹೋದ ಜಾಗವನ್ನು ಸಿಸಿ ಕೆಮರಾದಲ್ಲಿ ಪರಿಶೀಲನೆ ನಡೆಸಿದ್ದೇವೆ. ಆ ಸಮಯದಲ್ಲಿ ಯಾವುದೇ ವಾಹನ ಅಲ್ಲಿ ನಿಂತಿರಲಿಲ್ಲ. ಆ ಮಗು ಯಾವುದೋ ಕಾರಣಕ್ಕೆ ಹೆದರಿ ಹೇಳಿರಬೇಕು. ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿ ಶಕ್ತಿವೇಲು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.