ಜೂ. 1ರಿಂದ ಜು. 31ರ ತನಕ ಯಾಂತ್ರಿಕ ಮೀನುಗಾರಿಕೆ ನಿಷೇಧ
Team Udayavani, May 20, 2022, 6:06 AM IST
ಮಲ್ಪೆ: ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿ ಮತ್ತು 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂ. 1ರಿಂದ ಜು. 31ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿರುತ್ತದೆ.
ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿರುತ್ತದೆ.
ಈ ಆದೇಶವನ್ನು ಉಲ್ಲಂಘಿಸುವ ದೋಣಿಗಳು ಮತ್ತು ಮೀನುಗಾರರು ಕಡಲ ಮೀನುಗಾರಿಕೆ ಕಾಯ್ದೆ 1986ರ ಅನ್ವಯ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.