Malpe; ದಡಕ್ಕೆ ಮರಳಿದ ಮೀನುಗಾರಿಕಾ ಬೋಟುಗಳು
Team Udayavani, Dec 3, 2024, 1:37 AM IST
ಮಲ್ಪೆ: ಅರಬಿ ಸಮುದ್ರದಲ್ಲಿ ಗಾಳಿ ಒತ್ತಡ ಮತ್ತು ಅಲೆಗಳ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಮೀನುಗಾರಿಕೆ ನಡೆಸಲಾಗದೆ ದೋಣಿಗಳು ದಡ ಸೇರಿವೆ. ಬಲವಾದ ಗಾಳಿಗೆ ಸಮುದ್ರ ಮಧ್ಯೆ ದೊಡ್ಡಗಾತ್ರದ ಅಲೆಗಳು ಬರುತ್ತಿರುವುದರಿಂದ ರವಿವಾರದಿಂದ ಪರ್ಸಿನ್, ಸಣ್ಣಟ್ರಾಲ್ ಬೋಟು ಹಾಗೂ ನಾಡದೋಣಿಗಳು ಮೀನುಗಾರಿಕೆ ನಡೆಸಲಾಗದೆ ದಡ ಸೇರಿವೆ.
ಕೆಲವು ಆಳಸಮುದ್ರದ ಬೋಟುಗಳು ಕಾರವಾರ ಸಹಿತ ಸಮೀಪದ ಬಂದರನ್ನು ಪ್ರವೇಶಿಸಿವೆ. ಈಗಾಗಲೇ ಮೀನುಗಾರಿಕೆ ಮುಗಿಸಿ ಬಂದ ಬೋಟುಗಳು ಮತ್ತೆ ಸಮುದ್ರಕ್ಕೆ ಇಳಿದಿಲ್ಲ. ಸೋಮವಾರ ಮಲ್ಪೆ ಬಂದರಿನಲ್ಲಿ ಶೇ. 100 ಪರ್ಸಿನ್ ಮತ್ತು ನಾಡದೋಣಿಗಳು ಮೀನುಗಾರಿಕೆ ನಡೆಸದೇ ದಡ ಸೇರಿವೆ.
ರವಿವಾರದಂದು ಗಾಳಿ ಉತ್ತರ ವಾಯವ್ಯದಿಂದ ಬೀಸುತ್ತಿದ್ದು, ಸೋಮವಾರ ದಕ್ಷಿಣ ಪೂರ್ವದ ಕಡೆಗೆ ಸಾಗಿದೆ. ಇದು ಗಂಟೆಗೆ 50ರಿಂದ 60 ಕಿ.ಮೀ. ವೇಗದಲ್ಲಿ ಬೀಸುತ್ತಿದೆ. ಆಳಸಮುದ್ರದಲ್ಲಿ ಇದರ ಪ್ರಭಾವ ತುಸು ಜಾಸ್ತಿ. ಗಾಳಿಯ ಒತ್ತಡ ಬುಧವಾರದವರೆಗೂ ಇರಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಅಪಾಯಕಾರಿ ರೀತಿಯಲ್ಲಿ ಬೈಕ್ ಚಾಲನೆ; ಪ್ರಕರಣ ದಾಖಲು
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.