Malpe: ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಆತ್ಮಹತ್ಯೆ
Team Udayavani, Sep 5, 2023, 11:34 PM IST
ಮಲ್ಪೆ: ಕರಾವಳಿ ಜಿಲ್ಲೆಯಲ್ಲಿಯೇ ಬಲು ಅಪರೂಪ ಎನ್ನುವಂತೆ ಬಾಕ್ಸಿಂಗ್ ಕ್ಷೇತ್ರದಲ್ಲಿ ಮಿಂಚಿದ್ದ ರಾಷ್ಟ್ರೀಯ ಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಮಲ್ಪೆ ಪಡುಕರೆ ಶಾಂತಿನಗರದ ವಿರಾಜ್ ಬಿ. ಮೆಂಡನ್ (28) ನೇಣಿಗೆ ಶರಣಾಗಿದ್ದಾರೆ.
ಬೆಳಗ್ಗೆ ಮನೆಯವರು ಮೀನುಗಾರಿಕೆಗೆ ತೆರಳಿದ ವೇಳೆ ಒಬ್ಬರೇ ಮನೆಯಲ್ಲಿದ್ದ ಸಂದರ್ಭ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಪೆ ಬಂದರಿನಲ್ಲಿ ಬೋಟಿನಿಂದ ಮೀನು ಇಳಿಸುವ ಕೆಲಸ ಮಾಡಿಕೊಂಡಿದ್ದು, ಕನ್ನಿ ಮೀನುಗಾರರ ಸಂಘದ ಸದಸ್ಯರಾಗಿದ್ದರು.
ಗೆಳೆಯರು ನೀಡಿದ ಸಲಹೆ ಮೇರೆಗೆ ಅವರು ಕಳೆದ ಎಂಟು ವರ್ಷಗಳಿಂದ ಬಾಕ್ಸಿಂಗ್‌ನಲ್ಲಿ ತೊಡಗಿಸಿಕೊಂಡಿದ್ದರು.
ಭಾರತದಲ್ಲಿ ಪ್ರೊ ಬಾಕ್ಸಿಂಗ್‌ನಲ್ಲಿ 5ನೇ ರ್‍ಯಾಂಕ್ ಹೊಂದಿರುವ ವಿರಾಜ್ ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಿ ದೇಶಕ್ಕೆ ಕೀರ್ತಿ ತರಬೇಕೆಂಬ ಹಂಬಲ ಹೊಂದಿದ್ದರು. ಹಗ್ಗಜಗ್ಗಾಟ ಸೇರಿದಂತೆ ಗ್ರಾಮೀಣ ಕ್ರೀಡೆಯಲ್ಲೂ ಮುಂದಿದ್ದ ಅವರು ಹಲವಾರು ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.
ಮಲ್ಪೆ ಪಡುಕರೆಯ ಭಾಸ್ಕರ್ ಕುಂದರ್ ಮತ್ತು ಮೋಹಿನಿ ಮೆಂಡನ್ ಅವರ ಪುತ್ರರಾಗಿರುವ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.