ಮಳೆಗಾಲದ ನಿಷೇಧ ತೆರವು; ಪ್ರವಾಸಿಗರಿಗೆ ಮುಕ್ತ

Team Udayavani, Sep 25, 2021, 4:10 AM IST

ಮಳೆಗಾಲದ ನಿಷೇಧ ತೆರವು; ಪ್ರವಾಸಿಗರಿಗೆ ಮುಕ್ತ

ಮಲ್ಪೆ:  ದೇಶ ವಿದೇಶಗಳ ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಸೈಂಟ್‌ ಮೇರೀಸ್‌ ದ್ವೀಪಕ್ಕೆ ಮಳೆ ಗಾಲದಲ್ಲಿ 4 ತಿಂಗಳ ಕಾಲ ಹೇರಲಾಗಿದ್ದ ಪ್ರವೇಶ ನಿರ್ಬಂಧ ತೆರವಾಗಿದ್ದು, ಇದೀಗ ಮತ್ತೆ ದ್ವೀಪಯಾನ ಆರಂಭ ಗೊಳ್ಳುತ್ತಿದೆ.

ಮಳೆಗಾಲದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿರುವುದರಿಂದ ದ್ವೀಪಕ್ಕೆ ತೆರಳುವುದು ಅಪಾಯಕಾರಿ ಎಂದು ಪ್ರತೀ ವರ್ಷ ಮೇ 15ರಿಂದ ಸೆ. 15ರ ವರೆಗೆ ಇಲ್ಲಿನ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರುತ್ತದೆ. ಆದರೆ ಕಳೆದ ಎರಡು ವರ್ಷಗಳಿಂದ ಕೊರೊನಾ ಲಾಕ್‌ಡೌನ್‌ನಿಂದಾಗಿ ನಿಗದಿತ ನಿಷೇಧದ ಅವಧಿಯ ಮೊದಲೇ ಪ್ರವಾಸಿ ಬೋಟ್‌ಗಳು ಪ್ರಯಾಣವನ್ನು ಅರ್ಧದಲ್ಲೇ ಸ್ಥಗಿತಗೊಳಿಸಿತ್ತು. ಸೆ. 19ರಿಂದ ಮತ್ತೆ ಬೋಟ್‌ ಯಾನ ಆರಂಭಗೊಂಡಿದ್ದು ಪ್ರವಾಸಿಗರನ್ನು ಕರೆದೊಯ್ಯಲು ಸಿದ್ಧªವಾಗಿದೆ.

ಐಲ್ಯಾಂಡ್‌ನ‌ಲ್ಲಿ ಸ್ವಚ್ಛತ ಕಾರ್ಯ:

ಕಳೆದ ನಾಲ್ಕೈದು ತಿಂಗಳು ಸ್ತಬ್ಧವಾಗಿದ್ದ ದ್ವೀಪದಲ್ಲಿ ಗಿಡಗಂಟಿಗಳು ಎತ್ತರಕ್ಕೆ ಬೆಳೆದು ನಿಂತಿದ್ದು ಅದನ್ನು ತೆರವುಗೊಳಿಸುವ ಕೆಲಸ ನಡೆಯುತ್ತಿದೆ. ದ್ವೀಪದ ಸುತ್ತಲೂ ತ್ಯಾಜ್ಯಗಳು ಸಂಗ್ರಹವಾಗಿದ್ದು ಕ್ಲೀನಿಂಗ್‌ ಮೆಶಿನ್‌ ಮೂಲಕ 4 ಮಂದಿ ಸ್ವತ್ಛತೆಯಲ್ಲಿ ತೊಡಗಿದ್ದಾರೆ. ದ್ವೀಪದ ಪಶ್ಚಿಮ ಭಾಗದ ಅಪಾಯಕಾರಿ ಪ್ರದೇಶದಲ್ಲಿ ಸಮುದ್ರಕ್ಕೆ ಇಳಿಯದಂತೆ 20 ಫ್ಲ್ಯಾಗ್‌ಗಳನ್ನು ಅಳವಡಿಸಿ, ಎಚ್ಚರಿಕೆ ಬೋರ್ಡ್‌ ಹಾಕಲಾಗಿದೆ. ಈಗ ಬರುತ್ತಿರುವ ಪ್ರವಾಸಿಗರ ಕಣ್ಗಾವಲಿಗೆ ಪ್ರಸ್ತುತ 2 ಮಂದಿ ಜೀವರಕ್ಷಕ ಸಿಬಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ.

ಐಲ್ಯಾಂಡ್‌ ಅನ್ನು  ಪೂರ್ಣ ಹಸುರು  ಮ ಯವಾಗಿಸುವ ಮತ್ತು ಪ್ರವಾಸಿಗರಿಗೆ ನೆರಳು ನೀಡುವ ಉದ್ದೇಶದಿಂದ ಖಾಲಿ ಜಾಗವಿದ್ದಲ್ಲಿ ಎಲ್ಲ ಕಡೆ ಗಿಡ ಮರಗಳನ್ನು ಬೆಳೆಸಲಾಗುತ್ತದೆ. ಪ್ರವೇಶ ದ್ವಾರದಲ್ಲಿ ತಪಾಸಣೆಯ ಕಾರ್ಯವನ್ನು ಅ. 1ರಿಂದಲೇ ನಡೆಸಲಾಗುತ್ತದೆ ಎಂದು ನಿರ್ವಾಹಕ ಸುದೇಶ್‌ ಶೆಟ್ಟಿ ತಿಳಿಸಿದ್ದಾರೆ.

ಇನ್ನು ಮಲ್ಪೆ ಬೀಚ್‌ನಿಂದ ದ್ವೀಪಕ್ಕೆ ಹೋಗಲು 4 ಪ್ರವಾಸಿ ಸ್ಪೀಡ್‌ ಬೋಟ್‌ಗಳಿದ್ದು, ಒಂದು ಬೊಟ್‌ನಲ್ಲಿ 10 ಮಂದಿಗೆ ಮಾತ್ರ ತೆರಳಲು ಅವಕಾಶವಿದೆ. ಇದರಿಂದ ಕೇವಲ 15 ನಿಮಿಷಗಳಲ್ಲಿ  ತಲುಪಬಹುದಾಗಿದೆ.

ಅ. 1ರಿಂದ ವಾಟರ್‌ ಸ್ಪೋರ್ಟ್ಸ್ ಆರಂಭ:

ಜಲಸಾಹಸ ಕ್ರೀಡೆಗಳು, ಫುಡ್‌ಕೋರ್ಟ್‌, ಲಗೇಜ್‌ ರೂಮ್‌, ಶೌಚಾಲಯ ಸೇರಿದಂತೆ ಪೂರ್ಣ ಪ್ರಮಾಣದ ಸೌಲಭ್ಯಗಳೊಂದಿಗೆ ಅ. 1ರಿಂದ ಐಲ್ಯಾಂಡ್‌ ಪ್ರವಾಸಿಗರಿಗೆ ತೆರೆದುಕೊಳ್ಳಲಿದೆ. ಪ್ರವಾಸಿಗರಿಗೆ ಕುಳಿತುಕೊಳ್ಳಲು ಮರದ ಬೆಂಚು, ನೆರಳಿಗಾಗಿ ಶೆಲ್ಟರ್‌, ಪ್ರವೇಶ ದ್ವಾರವನ್ನು ನಿರ್ಮಿಸುವ ಇನ್ನಿತರ ಕೆಲಸ ಕಾರ್ಯಗಳು ನಡೆಯುತ್ತಿವೆ.

2 ಕಡೆ ಬೋಟಿನ ವ್ಯವಸ್ಥೆ  :

ಮಲ್ಪೆ  ಸೀವಾಕ್‌ ಬಳಿ, ಮಲ್ಪೆ ಬೀಚ್‌ ಎರಡೂ ಕಡೆಯಲ್ಲೂ  ಐಲ್ಯಾಂಡ್‌ಗೆ  ತೆರಳಲು ಪ್ರವಾಸಿ ಬೋಟಿನ ವ್ಯವಸ್ಥೆ ಇದೆ. ಆಧುನಿಕ ಸೌಕರ್ಯದೊಂದಿಗೆ, ಲೈಫ್‌ ಜಾಕೆಟ್‌, ಲೈಫ್‌ಬಾಯ್‌, ಪ್ರಥಮ ಚಿಕಿತ್ಸೆ ವ್ಯವಸ್ಥೆ, ನುರಿತ ಈಜುಗಾರರನ್ನೊಳ ಗೊಂಡ ರಕ್ಷಣ ತಂಡವನ್ನು ಹೊಂದಿದೆ. ಸೀವಾಕ್‌ ಬಳಿ ದ್ವೀಪಕ್ಕೆ ತೆರಳಲು 4 ದೊಡ್ಡ ಬೋಟುಗಳಿದ್ದು, ಇದರಲ್ಲಿ ಸುಮಾರು 120 ಮಂದಿ ಕರೆದೊಯ್ಯುವ ಸಾಮರ್ಥ್ಯವನ್ನು ಹೊಂದಿದೆ. ದ್ವೀಪಕ್ಕೆ ತೆರಳಲು ಕನಿಷ್ಠ 30 ಮಂದಿಯಾದರೂ ಭರ್ತಿಯಾಗಬೇಕು. ಬೆಳಗ್ಗೆ  10.30 ಮತ್ತು ಅಪರಾಹ್ನ 3.30ಕ್ಕೆ ರೆಗ್ಯುಲರ್‌ ಟ್ರಿಪ್‌ ಆಲ್ಲದೆ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಬಂದರೆ ಬೆಳಗ್ಗೆ 9ರಿಂದ ಸಂಜೆ 5ರ ವರೆಗೂ ನಿರಂತರವಾಗಿರುತ್ತದೆ.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.