ಮಲ್ಪೆ ಬಂದರಿಗೆ ಅಧಿಕಾರಿಗಳ ದಾಳಿ :ಮೀನು ಆಯುವ 16 ಮಂದಿ; ಅಪ್ರಾಪ್ತ ವಯಸ್ಕರು ವಶಕ್ಕೆ
Team Udayavani, Nov 4, 2022, 12:25 AM IST
ಮಲ್ಪೆ: ಅಪ್ರಾಪ್ತ ವಯಸ್ಕರನ್ನು ಬಂದರಿನಲ್ಲಿ ದುಡಿಸಿಕೊಳ್ಳಲಾಗುತ್ತದೆ ಎಂಬ ದೂರಿನ ಮೇರೆಗೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಮಹಿಳಾ ಮತ್ತು ಮಕ್ಕಳ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ಉಡುಪಿ ಜಿಲ್ಲಾ ನಾಗರಿಕ ಸೇವಾ ಟ್ರಸ್ಟ್, ಮಣಿಪಾಲದ ಹೊಸಬೆಳಕು ಸಂಸ್ಥೆಯವರು ಮುಂಜಾನೆ 4.30ರ ವೇಳೆಗೆ ಕಾರ್ಯಾಚರಣೆ ನಡೆಸಿ ಕೊಪ್ಪಳ ಮತ್ತು ದಾವಣಗೆರೆ ಮೂಲದ 11 ಬಾಲಕಿಯರು, ಐವರು ಬಾಲಕರು ಸೇರಿ 16 ಮಂದಿ ಮೀನು ಆಯುವ ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ನಿಟ್ಟೂರು ವಶಕ್ಕೆ ನೀಡಿದ್ದಾರೆ.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೊನಾಲ್ಡ್ ಫುಟಾರ್ಡೊ ಮತ್ತು ಸದಸ್ಯರು ಮಕ್ಕಳಿಗೆ ಸೂಕ್ತ ಪುನರ್ವಸತಿ ಕಲ್ಪಿಸಲಿದ್ದಾರೆ.
ಕಾರ್ಮಿಕ ಅಧಿಕಾರಿ ಕುಮಾರ್ ಈ ಸಂದರ್ಭದಲ್ಲಿ ಮಾತನಾಡಿ, ಮಕ್ಕಳ ರಕ್ಷಣ ಘಟಕದಿಂದ ನಿರಂತರವಾಗಿ ದಾಳಿ ಮಾಡಲಾಗುತ್ತಿದ್ದು ಕಾನೂನು ಬಾಹಿರವಾಗಿ ದುಡಿಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಜರಗಿಸ ಲಾಗುವುದು. ಅಪ್ರಾಪ್ತ ವಯಸ್ಕ ಮಕ್ಕಳು ಯಾವುದೇ ಕೆಲಸದಲ್ಲಿ ತೊಡಗಬಾರದು; ಅವರು ಶಿಕ್ಷಣ ಮುಂದುವರಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.