Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ
Team Udayavani, Dec 25, 2024, 1:12 AM IST
ಮಲ್ಪೆ: ಕೋಳಿ ಅಂಕ ನಡೆಯುತ್ತಿದ್ದಲ್ಲಿಗೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಡಿ. 23ರಂದು ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಕೋಡಿ ಕಂಡಾಳ ಬಬ್ಬುಸ್ವಾಮಿ ದೈವಸ್ಥಾನದ ಬಳಿಯ ಹಾಡಿಯಲ್ಲಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಲ್ಪೆ ಪೊಲೀಸರು ದಾಳಿ ನಡೆಸಿ ಉಲ್ಲಾಸ್, ಸೀಫನ್ ಪೀಟರ್ ಡಿ’ಸೋಜಾ, ಶ್ರವಣ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದು, ಇತರರು ಅಲ್ಲಿಂದ ಓಡಿ ಹೋಗಿದ್ದಾರೆ.
ಕೋಳಿ ಅಂಕ ನಡೆದ ಸ್ಥಳದಲ್ಲಿ ಒಂದು ಕೋಳಿ, ಜೂಜಾಟಕ್ಕೆ ಬಳಿಸಿದ್ದ 960 ರೂ. ನಗದನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.