ಮಲ್ಪೆ: ನಿತ್ಯ ಸಂಚಾರ ದಟ್ಟಣೆ; ಮುಗಿಯದ ಪರದಾಟ

Team Udayavani, May 20, 2018, 6:30 AM IST

1805mle3a.jpg

ಮಲ್ಪೆ: ಪ್ರವಾಸೋದ್ಯಮ ಕೇಂದ್ರವಾಗಿ ಮತ್ತು ಉದ್ಯಮ ವಲಯವಾಗಿ ಕ್ಷಿಪ್ರವಾಗಿ ಬೆಳೆಯು ತ್ತಿರುವ ಮಲ್ಪೆಯಲ್ಲಿ ನಿತ್ಯ ಸಂಚಾರ ದಟ್ಟಣೆ ಅಸಹನೀಯವನ್ನಾಗಿಸಿದೆ.
  
ಮಲ್ಪೆಯ ಮುಖ್ಯರಸ್ತೆಯೂ ಆಗಿರುವ ಇಕ್ಕಟ್ಟಾದ ಹೆದ್ದಾರಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ  ವಾಹನಗಳು ಸಂಚರಿಸುತ್ತಿದ್ದು, ಟ್ರಾಫಿಕ್‌ ಜಾಮ್‌ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.  ಬೆಳಗ್ಗೆ, ಸಂಜೆಯ ವೇಳೆಯಂತೂ ಟ್ರಾಫಿಕ್‌ ಸಮಸ್ಯೆ ವಿಪರೀತವಾಗಿದೆ.

50 ವರ್ಷಗಳಿಂದಲೂ ಪರಿಹಾರವಿಲ್ಲ! 
ಮಲ್ಪೆ ಪ್ರಮುಖ ಮೀನುಗಾರಿಕಾ ಬಂದರು ಆಗಿ ಅಭಿವೃದ್ಧಿ ಹೊಂದು ತ್ತಿದ್ದರೂ ಅದಕ್ಕೆ ಪೂರಕದ ರಸ್ತೆಯ ಅಗಲೀ ಕರಣ ಮತ್ತು ಅಭಿವೃದ್ಧಿ ಅಗುತ್ತಿಲ್ಲ. 50-60 ವರ್ಷಗಳ ಹಿಂದೆ ಇದ್ದ ಇಕ್ಕಟ್ಟಾ ಗಿರುವ ರಸ್ತೆ ಈಗಲೂ ಅದೇ ರೀತಿ ಇದೆ. ರಸ್ತೆ ಅಗಲೀಕರಣ ಆಗುತ್ತದೆ ಎಂಬ ಮಾತು ಕಳೆದ 40 ವರ್ಷಗಳಿಂದ ಕೇಳಿ ಬರುತ್ತಲೇ ಇದೆ. ರಾಜ್ಯ ಹೆದ್ದಾರಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿದ್ದರೂ ಅಗಲೀಕರಣ ಮಾತ್ರ ಆಗಿಲ್ಲ.  

2 ಕಿ.ಮೀ. ದಟ್ಟಣೆ
ಮಲ್ಪೆಯ ಸರ್ಕಲಿನಿಂದ ಹಿಡಿದು ಕಲ್ಮಾಡಿವರೆಗೂ ಸುಮಾರು ಎರಡು ಕಿ.ಮೀ. ಉದ್ದಕ್ಕೆ ಪದೇ ಪದೇ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದೆ.  ಸಂಚಾರಿ ಪೋಲಿಸರು ಅದೆಷ್ಟೋ ಹರಸಾಹಸ ಪಟ್ಟರೂ ಸಂಚಾರ ಸುಗಮಗೊಳಿಸಲು ಸಾಧ್ಯವಾಗುತ್ತಿಲ್ಲ. ನಿತ್ಯ ಸಂಚಾರದ ಬಸ್ಸುಗಳಲ್ಲದೆ ಸಾವಿರಾರು ಸಂಖ್ಯೆಯಲ್ಲಿ  ಮೀನು ಸಾಗಾಟ, ಮಂಜುಗಡ್ಡೆ ಸಾಗಾಟದ ಲಾರಿಗಳು, ಟೆಂಪೋ, ರಿಕ್ಷಾಗಳು ನಿತ್ಯ ಓಡಾಡುತ್ತವೆ. ಜತೆಗೆ ಅಷ್ಟೇ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳು ರಸ್ತೆಗಿಳಿಯುತ್ತವೆ. ಜತೆಗೆ ಸೈಂಟ್‌ಮೇರೀಸ್‌ ದ್ವೀಪಕ್ಕೆ ತೆರಳುವ ಪ್ರವಾಸಿಗರೂ ಇದೇ ಮಾರ್ಗದಲ್ಲಿ ಸಂಚರಿಸುವುದರಿಂದ ವಾಹನ ದಟ್ಟಣೆ ಸಮಸ್ಯೆ ಬಿಗಡಾಯಿಸಿದೆ.

ಪರ್ಯಾಯ ಮಾರ್ಗದ ವ್ಯವಸ್ಥೆ ಬೇಕು
ಬಂದರಿನಿಂದ ಒಳ ಹೊರಗೆ ಹೋಗುವ ವಾಹನಗಳು, ತೊಟ್ಟಂ, ಕೊಡವೂರಿನಿಂದ ಮಲ್ಪೆ ಮೂಲಕ ಬರುವ ವಾಹನಗಳು ಮೂರು ರಸ್ತೆ ಸಂಧಿಸುವಲ್ಲಿ ಸಮಸ್ಯೆ ಉಂಟಾಗುತ್ತದೆ. ಸಿಟಿ ಬಸ್ಸುಗಳು ಪ್ರಯಾಣಿಕರನ್ನು ಈ ಮೂರು ರಸ್ತೆ ಕೂಡುವಲ್ಲಿ ಹತ್ತಿಸಿ, ಇಳಿಸುತ್ತಿರುವುದರಿಂದ ಸಮಸ್ಯೆ ಸೃಷ್ಟಿ ಆಗುತ್ತಿದೆ. ಪರ್ಯಾಯ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಿದರೆ ಈ ಹೆದ್ದಾರಿಯಲ್ಲಿ ಉಂಟಾಗುವ ವಾಹನ ದಟ್ಟಣೆಗೆ ಬ್ರೇಕ್‌ ಹಾಕಿದಂತಾಗುತ್ತದೆ ಎಂಬುವುದು ನಾಗರಿಕರ ಅಭಿಪ್ರಾಯ.

ರಸ್ತೆ ವಿಸ್ತರಣೆ ಅಗತ್ಯ
ಇಲ್ಲಿನ ಪ್ರತಿದಿನವೂ ಟ್ರಾಫಿಕ್‌ ಜಾಮ್‌ ಸಮಸ್ಯೆ ಎದುರಾಗುತ್ತಿದೆ. ಇಕ್ಕಟ್ಟಾದ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿರುವಾಗ ಕೆಲವರು ರಸ್ತೆಯಲ್ಲೇ ಪಾರ್ಕಿಂಗ್‌ ಮಾಡಿ ತೆರಳುತ್ತಾರೆ. ಮುಖ್ಯವಾಗಿ ಇಲ್ಲಿನ ರಸ್ತೆಯ ವಿಸ್ತರಣೆ ಅತೀ ಶೀಘ್ರದಲ್ಲಿ ಆದರೆ ಎಲ್ಲ ಸಮಸ್ಯೆಗೆ ಪರಿಹಾರ ದೊರೆತಂತಾಗುತ್ತದೆ.
– ಸುರೇಶ್‌ ಕರ್ಕೇರ, ಮಲ್ಪೆ

ಸರಕಾರ ಗಮನ ಹರಿಸಲಿ
ಮಲ್ಪೆ ಆದಿವುಡುಪಿ ರಸ್ತೆ ವಿಸ್ತರಣೆ ನನೆಗುದಿಗೆ ಬಿದ್ದಿರುವುದು, ನಗರದಲ್ಲಿ ವಾಹನದ ದಟ್ಟಣೆ ಹೆಚ್ಚಾಗಿರುವುದು ಟ್ರಾಫಿಕ್‌ ಜಾಮ್‌ ಸಮಸ್ಯೆಗೆ ಕಾರಣವಾಗಿದೆ. ಹೊಸ ಸರಕಾರ ಈ ಬಗ್ಗೆ ಹೆಚ್ಚಿನ ಗಮನಹರಿಸಿ ಸಮಸ್ಯೆ ಬಗೆಹರಿಸುವತ್ತ ಮುತುವರ್ಜಿ ವಹಿಸಬೇಕಾಗಿದೆ.
– ಪ್ರದೀಪ್‌ ಟಿ. ಮೆಂಡನ್‌, ಕಲ್ಮಾಡಿ

– ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.