ಹೆಸರು ಬದಲಾಯಿಸಿ ಟೆಬ್ಮಾ ಕಾರ್ಯಾಚರಣೆ: ಬಂದರಿನ ಜಾಗ ಇತರರ ಕೈವಶವಾದರೆ ಹೋರಾಟದ ಎಚ್ಚರಿಕೆ

Team Udayavani, Jul 15, 2022, 6:23 AM IST

ಹೆಸರು ಬದಲಾಯಿಸಿ ಟೆಬ್ಮಾ ಕಾರ್ಯಾಚರಣೆ: ಬಂದರಿನ ಜಾಗ ಇತರರ ಕೈವಶವಾದರೆ ಹೋರಾಟದ ಎಚ್ಚರಿಕೆ

ಮಲ್ಪೆ: ಮೀನುಗಾರಿಕೆ ಬಂದರಿನ ಅಭಿವೃದ್ಧಿಗೆ ಮೀಸಲಾಗಿರಿಸಿದ್ದ ಈಗಿರುವ ಟೆಬ್ಮಾ ಶಿಪ್‌ ಯಾರ್ಡ್‌ ಜಾಗವನ್ನು ಕೇಂದ್ರ ಸರಕಾರದ ಅಧೀನದ ಉಡುಪಿ ಕೊಚ್ಚಿನ್‌ ಶಿಪ್‌ಯಾರ್ಡ್‌ ಲಿಮಿಟೆಡ್‌ ಎಂಬ ಹೆಸರಿನಲ್ಲಿ ತನ್ನ ಅಧೀನಕ್ಕೆ ತೆಗೆದುಕೊಂಡು ಕಾರ್ಯಾ ಚರಿಸುತ್ತಿರುವುದು ಕಂಡು ಬಂದಿದೆ.

ಟೆಬ್ಮಾ ಶಿಪ್‌ ಯಾರ್ಡ್‌ಗೆ ಈ ಹಿಂದೆ ನಡೆದ ಒಪ್ಪಂದದಂತೆ 2023ರ ಡಿಸೆಂಬರ್‌ 31ರಂದು ಅವಧಿ ಮುಗಿ ಯ ಲಿದ್ದು, ಒಪ್ಪಂದದಂತೆ ಸರಕಾರ ಹಿಂದೆ ಪಡೆಯಬೇಕು. ಒಂದು ವೇಳೆ ಒಪ್ಪಂದವನ್ನು ಮುರಿದರೆ ಸಮಸ್ತ ಮೀನುಗಾರರ ನೇತೃತ್ವದಲ್ಲಿ ಉಗ್ರ ಹೋರಾಟದ ಹಾದಿಯನ್ನು ತುಳಿಯಬೇಕಾಗುತ್ತದೆ ಎಂದು ಮಲ್ಪೆ ಮೀನುಗಾರ ಸಂಘ ಎಚ್ಚರಿಸಿದೆ.

ಮೀನುಗಾರರ ಕೈಜಾರಿದ ಜಾಗ:

ಬಂದರಿನಲ್ಲಿ ಬೋಟುಗಳ ಲ್ಯಾಂಡಿಂಗ್‌, ಬರ್ತಿಂಗ್‌ ಮಾಡಲು ಈಗಿರುವ ಜಾಗದಲ್ಲಿ ಸ್ಲಿಪ್‌ವೇ ಮಾಡು ವುದೆಂದು ನಿರ್ಧರಿಸಲಾಗಿದ್ದು, ಕಾರಣಾಂತರಗಳಿಂದ ಸ್ಲಿಪ್‌ವೇ

ವಿಳಂಬವಾಗಿತ್ತು. ಅನಂತರ ಬೋಟು, ಸ್ಲಿಪ್‌ವೇ ನಿರ್ಮಾಣಕ್ಕೆ ಸರಕಾರ ಜಾಗವನ್ನು ಖಾಸಾಗಿ ಸಂಸ್ಥೆಗೆ ನೀಡಿತ್ತು. ಅದು ಮುಂದೆ ಟೆಬ್ಮಾ ಶಿಪ್‌ಯಾರ್ಡ್‌ ಆಗಿ ಪರಿವರ್ತನೆಗೊಂಡು ದೊಡ್ಡ ಪ್ರಮಾಣದ ಹಡಗು ನಿರ್ಮಾಣ ಗೊಳ್ಳಲಿದೆ ಎಂದು ಮೀನುಗಾರರ ಅರಿವಿಗೆ ಬರುವಾಗ ತಡವಾಗಿತ್ತು. ಮೀನುಗಾರರಿಂದ ಒಂದು ತಿಂಗಳ ಕಾಲ ಹೋರಾಟ ನಡೆದಿತ್ತು. ಅದಾಗಲೇ ಸರಕಾರ ಬಂದರು ಇಲಾಖೆಗೆ ಸೇರಿದ ಜಾಗವನ್ನು ಟೆಬ್ಮಾ ಶಿಪ್‌ಯಾರ್ಡ್‌ಗೆ 30 ವರ್ಷದ ಅವಧಿಗೆ ಲೀಸ್‌ಗೆ ನೀಡಲಾಗಿತ್ತು.

ಸಿಎಂ ಮಧ್ಯೆ ಪ್ರವೇಶ, ಒಪ್ಪಂದ :

ಮಲ್ಪೆ ಬಂದರಿನಲ್ಲಿ ಬೋಟು ನಿಲ್ಲಲು ಸ್ಥಳಾವಕಾಶದ ಕೊರತೆಯಿಂದ ಮೀನುಗಾರರಿಗೆ ಆಗುತ್ತಿರುವ ಸಮಸ್ಯೆಯನ್ನು ಮನಗಂಡು 2008ರ ಡಿಸೆಂಬರ್‌ 18ರಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಟೆಬ್ಮಾ ಅಧಿಕಾರಿಗಳು, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು, ಶಾಸಕರು, ಸಚಿವರೊಂದಿಗೆ ಬೆಂಗಳೂರಿನಲ್ಲಿ ಮೀನುಗಾರ ಸಂಘದ ಜತೆ ಸಭೆ ನಡೆಸಿ 30 ವರ್ಷದ ಅವಧಿಯನ್ನು 15 ವರ್ಷಕ್ಕೆ ಸೀಮಿತಗೊಳಿಸುವ ಮೂಲಕ ಒಪ್ಪಂದ ಮಾಡಿದ್ದರು. ಈ ಬಗ್ಗೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಆದೇಶವನ್ನು ನೀಡಿದ್ದರು. ಜಿಲ್ಲಾಧಿಕಾರಿ ಸೇರಿದಂತೆ ಸಭೆಯಲ್ಲಿದ್ದ ಎಲ್ಲರೂ ಸಹಿ ಹಾಕಿದ್ದ‌ರು. ಮೀನುಗಾರರಿಗೆ ಇದು ಅಸಮಾಧಾನವಾದರೂ ಒಪ್ಪಿಗೆ  ಸೂಚಿಸಿದ್ದರು. 2023ರ ಡಿ. 31ಕ್ಕೆ ಅವಧಿ ಮುಗಿಯಲಿದೆ. ಆದರೆ ಸರಕಾರ ಇದಕ್ಕೆ ಮೊದಲೇ ಕಳೆದ ವರ್ಷ ಉಡುಪಿ ಕೊಚ್ಚಿನ್‌ ಶಿಪ್‌ಯಾರ್ಡ್‌ ಎಂಬ ಹೆಸರಿನಲ್ಲಿ ಕಾರ್ಯಾಚರಿಸುತ್ತಿದೆ ಎಂದು ಮೀನುಗಾರ ಸಂಘಟನೆ ತಿಳಿಸಿದೆ.

ಮಲ್ಪೆ ಶಿಪ್‌ಯಾರ್ಡ್‌ ಬಗ್ಗೆ ಶುಕ್ರವಾರ ಬೆಂಗಳೂರಿನಲ್ಲಿ ಬಂದರು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.  – ಎಸ್‌. ಅಂಗಾರ  ಸಚಿವರು, ಮೀನುಗಾರಿಕೆ ಮತ್ತು ಬಂದರು ಇಲಾಖೆ

ಮೀನುಗಾರಿಕೆ ಬಂದರಿನ ಅಭಿವೃದ್ಧಿಗೆ ಮೀಸಲಾಗಿರಿಸಿದ ಜಾಗವನ್ನು ಬಂದರಿನ ಅಭಿವೃದ್ಧಿ ಹೊರತುಪಡಿಸಿ ಬೇರೆ ಯಾವುದೇ ಉದ್ದೇಶಕ್ಕೆ ಬಳಸಿಕೊಂಡಲ್ಲಿ ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಸಮಸ್ತ ಮೀನುಗಾರರು ಸೇರಿ ಬೀದಿಗಿಳಿದು ಹೋರಾಟ ನಡೆಸಲು ಸಿದ್ಧರಾಗಿದ್ದಾರೆ. -ದಯಾನಂದ ಕೆ. ಸುವರ್ಣ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.