ಮಂದಾರ್ತಿ ದೇಗುಲ ಇಂದು, ನಾಳೆ ಪ್ರತಿಷ್ಠಾ ವರ್ಧಂತ್ಯುತ್ಸವ
Team Udayavani, Feb 4, 2018, 12:10 PM IST
ಉಡುಪಿ: ಮಂದಾರ್ತಿ ಶ್ರೀ ದುರ್ಗಾ ಪರಮೇಶ್ವರೀ ದೇಗುಲದಲ್ಲಿ ಫೆ. 4 ಮತ್ತು 5ರಂದು ಪ್ರತಿಷ್ಠಾಪನ ವರ್ಧಂತ್ಯುತ್ಸವ ಹಾಗೂ ಶ್ರೀ ವೀರಭದ್ರ, ಬೊಬ್ಬರ್ಯ ದೇವರ ಪುನಃಪ್ರತಿಷ್ಠಾಪನೆ, ಚಾಮುಂಡೇಶ್ವರೀ ದೇವಿ ಅಷ್ಟಬಂಧ ಬ್ರಹ್ಮ ಕಲಶ ಸಹಿತ ಪುನಃಪ್ರತಿಷ್ಠಾ ಪೂಜೆಯೊಂದಿಗೆ ಧಾರ್ಮಿಕ ವಿಧಿ ನಡೆಯಲಿವೆ.
ಫೆ. 4ರಂದು ಸಂಜೆ ರಾಕ್ಷೋಘ್ನ ಹೋಮ, ವಾಸ್ತುಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಫೆ. 5ರಂದು ಶ್ರೀ ವೀರಭದ್ರ, ಬೊಬ್ಬರ್ಯ, ಚಾಮುಂಡೇಶ್ವರೀ ದೇವರ ಪ್ರತಿಷ್ಠಾಪನೆ, ಅಷ್ಟೋತ್ತರ ಪರಿಕಲಶ ಸಹಿತ ಬ್ರಹ್ಮಕುಂಭ ಸ್ಥಾಪನೆ, ಬ್ರಹ್ಮಕಲಶಾಭಿಷೇಕ, ಮಹಾ ಅನ್ನಸಂತರ್ಪಣೆ ಜರಗಲಿದೆ.
ಫೆ. 5ರಂದು ಮಧ್ಯಾಹ್ನ 12ಕ್ಕೆ ನಡೆಯಲಿರುವ ಸಭೆಯಲ್ಲಿ ಕಾಣಿಯೂರು ಶ್ರೀಗಳು ಆಶೀರ್ವಚನ ನೀಡಲಿದ್ದು, ಗರ್ಭಗುಡಿಗೆ ರಜತದ್ವಾರ ಮತ್ತು ಶ್ರೀ ವೀರಭದ್ರ ದೇವರಿಗೆ ರಜತ ಕವಚ ಕೊಡುಗೆಯಾಗಿ ನೀಡಿದ ದಾನಿಗಳನ್ನು ಸಮ್ಮಾನಿ ಸುವರು ಎಂದು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಚ್. ಧನಂಜಯ ಶೆಟ್ಟಿ ಮತ್ತು ದೇಗುಲದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಎಂ.ಎ. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
MUST WATCH
ಹೊಸ ಸೇರ್ಪಡೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.