ಮಣಿಪಾಲ ಸಮೂಹ ಆಸ್ಪತ್ರೆ : ಬರಲಿದೆ 60,000 ಕೊವಿಶೀಲ್ಡ್‌ ಲಸಿಕೆ

Team Udayavani, May 21, 2021, 7:15 AM IST

ಮಣಿಪಾಲ ಸಮೂಹ ಆಸ್ಪತ್ರೆ : ಬರಲಿದೆ 60,000 ಕೊವಿಶೀಲ್ಡ್‌  ಲಸಿಕೆ

ಉಡುಪಿ: ಮಣಿಪಾಲ ಸಮೂಹದ ಆಸ್ಪತ್ರೆಗಳಿಗೆ ಸದ್ಯವೇ 12,000 ಕೊವಿಶೀಲ್ಡ್‌ ಲಸಿಕೆ ಬರಲಿದೆ. ಒಟ್ಟು 60,000 ಡೋಸ್‌ ಲಸಿಕೆಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಆದ್ದರಿಂದ ಲಸಿಕೆ ಕೊರತೆ ಕುರಿತು ಎದ್ದ ಆತಂಕ ದೂರವಾಗಲಿದೆ.

ಮೇ ಕೊನೆಯ ವಾರ ಅಥವಾ ಜೂನ್‌ ಮೊದಲ ವಾರದಲ್ಲಿ ಮೊದಲ ಕಂತಿನಲ್ಲಿ 12,000 ಲಸಿಕೆ ಬರಲಿದೆ. ಈ ಕುರಿತು ಪುಣೆಯ ಸೀರಂ ಸಂಸ್ಥೆ ಜತೆ ಪತ್ರ ವ್ಯವಹಾರಗಳಾಗಿದ್ದು ಲಸಿಕೆ ಪೂರೈಕೆಗೆ ಒಪ್ಪಿದ್ದಾರೆ. ಜೂನ್‌ ಮೊದಲ ವಾರದಲ್ಲಿ ಲಸಿಕೆ ಹಾಕಲಾಗುತ್ತದೆ.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಮಂಗಳೂರಿನ ಕೆಎಂಸಿ ಆಸ್ಪತ್ರೆ, ಉಡುಪಿಯ ಡಾ| ಟಿಎಂಎ ಪೈ ಆಸ್ಪತ್ರೆ, ಕಾರ್ಕಳದ ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗಳಿಗೆ ಬರುವವರಿಗೆ ಲಸಿಕೆಗಳನ್ನು ನೀಡಲಾಗುವುದು. ಜನಸಂದಣಿಯನ್ನು ನಿಯಂತ್ರಿಸುವ ಉದ್ದೇಶದಿಂದ ಆನ್‌ಲೈನ್‌ ನೋಂದಣಿ ಮಾಡಿದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. 18+ ಎಲ್ಲರಿಗೂ ಅವಕಾಶವಿದೆ. ಸರಕಾರ ಈಗಾಗಲೇ ಬಿಡುಗಡೆ ಮಾಡಿದ ಆನ್‌ಲೈನ್‌ ನೋಂದಣಿ ನಮಗೂ ಅನ್ವಯವಾಗುತ್ತದೆ. ಪೂರೈಕೆ ಆದ ಬಳಿಕ ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು. ಸರಕಾರದ ಮಾರ್ಗಸೂಚಿಯಂತೆ ದರವನ್ನು ನಿಗದಿಪಡಿಸಲಾಗುವುದು ಎಂದು ಮಣಿಪಾಲ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ ಶೆಟ್ಟಿ “ಉದಯವಾಣಿ’ಗೆ ತಿಳಿಸಿದ್ದಾರೆ.

2,000 ಕೊವ್ಯಾಕ್ಸಿನ್‌ 2ನೇ ಡೋಸ್‌ :

ಮಣಿಪಾಲ ಆಸ್ಪತ್ರೆಯಲ್ಲಿ ಈಗಾಗಲೇ ಕೊವ್ಯಾಕ್ಸಿನ್‌ ಮೊದಲ ಡೋಸ್‌ ಪಡೆದುಕೊಂಡ ಫ್ರಂಟ್‌ಲೆçನ್‌ ವರ್ಕರ್ ಮತ್ತು ಸಾರ್ವಜನಿಕರಿಗೆ ಎರಡನೆಯ ಡೋಸ್‌ ಅನ್ನು ವಿತರಿಸಲಾಗುವುದು. ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಬಂದ ಕೊವ್ಯಾಕ್ಸಿನ್‌ ಲಸಿಕೆಯಲ್ಲಿ ಮಣಿಪಾಲಕ್ಕೂ 2,000 ಡೋಸ್‌ ತರಿಸಲಾಗುವುದು. ಮಣಿಪಾಲದಲ್ಲಿ ಮೊದಲ ಡೋಸ್‌ ತೆಗೆದುಕೊಂಡವರಿಗೆ ನಾವೇ ಸಂದೇಶ ಕಳುಹಿಸುತ್ತೇವೆ. ಇದು ಒಂದೆರಡು ದಿನಗಳಲ್ಲಿ ಆರಂಭವಾಗಲಿದೆ ಎಂದು ಡಾ| ಶೆಟ್ಟಿ ತಿಳಿಸಿದ್ದಾರೆ.

ಕೊವ್ಯಾಕ್ಸಿನ್‌ ಉತ್ಪಾದನೆ ಮಾಡುವ ಹೈದರಾಬಾದ್‌ನ  ಭಾರತ್‌ ಬಯೋಟೆಕ್‌ ಸಂಸ್ಥೆ ಜತೆ ಮಾತುಕತೆ ನಡೆಸಲಾಗಿದೆ. ಅಂತಿಮ ನಿರ್ಧಾರ ಇನ್ನಷ್ಟೇ ಆಗಬೇಕಾಗಿದೆ. ದರವನ್ನೂ ಸರಕಾರದ ಮಾರ್ಗದರ್ಶಿ ಸೂತ್ರದ ಅನ್ವಯ ನಿಗದಿಪಡಿಸಲಾಗುವುದು. ಪೂರೈಕೆ ನಿರಂತರವಾದಾಗ ಸಾರ್ವಜನಿಕರಿಗೂ ವಿತರಿಸಲಾಗುವುದು ಎಂದರು.

ಮಣಿಪಾಲ ಆಸ್ಪತ್ರೆಯ ಮರೀನಾದಲ್ಲಿ ಈಗಾಗಲೇ 10 ಕೌಂಟರ್‌ಗಳನ್ನು ತೆರೆಯಲಾಗಿದೆ. ಮೊದಲು ಲಸಿಕೆ ಪೂರೈಕೆಯಾದಾಗ ಇಲ್ಲಿ ವಿತರಿಸಲಾಗಿತ್ತು. ಲಸಿಕೆ ಪೂರೈಕೆ ನಿಲುಗಡೆಯಾದ ಬಳಿಕ ನಿಲ್ಲಿಸಲಾಗಿದೆ. ಲಸಿಕೆ ಬಂದ ಬಳಿಕ  ಇದೇ ಕೌಂಟರ್‌ನಲ್ಲಿ ವಿತರಿಸಲಾಗುತ್ತದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.