Manipal: ಮಾಧವಕೃಪಾ ಶಾಲೆಯ ಡೈಮಂಡ್ ಜ್ಯುಬಿಲಿ ಬ್ಲಾಕ್ ಉದ್ಘಾಟನೆ
Team Udayavani, Mar 21, 2024, 1:10 AM IST
ಮಣಿಪಾಲ: ಮಾಧವ ಕೃಪಾ ಶಾಲೆಯ ಕ್ಯಾಂಪಸ್‌ನಲ್ಲಿ ನಿರ್ಮಿಸಿರುವ ಡೈಮಂಡ್ ಜ್ಯುಬಿಲಿ ಬ್ಲಾಕ್‌ನ ಉದ್ಘಾಟನೆಯನ್ನು ಮಾಹೆ ಟ್ರಸ್ಟ್‌ನ ಟ್ರಸ್ಟಿ ವಸಂತಿ ಆರ್. ಪೈ ಹಾಗೂ ಅಧ್ಯಕ್ಷ ಡಾ| ರಂಜನ್ ಆರ್. ಪೈ ಬುಧವಾರ ಉದ್ಘಾಟಿಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಸಂತಿ ಆರ್. ಪೈ ಅವರು ಮಾತನಾಡಿ, ಶಿಕ್ಷಕರೇ ಶಾಲೆಯ ಬೆನ್ನೆಲುಬು. ಅವರ ಶೈಕ್ಷಣಿಕ ಅರ್ಹತೆ ಹಾಗೂ ಜ್ಞಾನ ಮಟ್ಟ ಉತ್ತಮವಾಗಿದ್ದರೆ ಶಾಲೆಯ ಶೈಕ್ಷಣಿಕ ಗುಣಮಟ್ಟವೂ ಶ್ರೇಷ್ಠವಾಗಿರುತ್ತದೆ. ದಶಕಗಳಿಂದ ಮಾಧವ ಕೃಪಾ ಶಾಲೆಯು ಶೈಕ್ಷಣಿಕ ಗುಣಮಟ್ಟದಲ್ಲಿ ಶ್ರೇಷ್ಠತೆಯನ್ನು ಕಾಪಾಡಿಕೊಂಡು ಬರುತ್ತಿದೆ. ಸಾಧನೆ, ಯಶಸ್ಸಿಗೆ ಯಾವುದೇ ಅಡ್ಡ ಮಾರ್ಗ ವಿಲ್ಲ. ಕಠಿನ ಪರಿಶ್ರಮದಿಂದ ಯಶಸ್ಸು ಸಾಧ್ಯ ಎಂದು ಶುಭ ಹಾರೈಸಿದರು.
ಮಾಹೆ ಸಹ ಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಮಾತನಾಡಿ, ಕೆಎಂಸಿ ಮಾಹೆ ವಿ.ವಿ.ಯ ಕಿರೀಟವಿರು ವಂತೆ, ಮಾಧವ ಕೃಪಾ ಶಾಲೆಯು ಅಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಕಿರೀಟವಿದ್ದಂತೆ. ಶಿಕ್ಷಣ ಸಂಸ್ಥೆಯ ಪ್ರಗತಿಗೆ ನಾಯಕತ್ವ ಮುಖ್ಯ. ಸದ್ಯ ಮಾಧವ ಕೃಪಾ ಶಾಲೆಯಲ್ಲಿ ಸುಮಾರು 3 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಗುಣಮಟ್ಟವು ಸಮಾಜ ಹಾಗೂ ದೇಶ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ಸಂಸ್ಥೆಗಳ ಸಂಸ್ಥಾಪಕರಾದ ಡಾ| ಟಿಎಂಎ ಪೈ ಅವರ ದೂರದೃಷ್ಟಿಯ ಚಿಂತನೆ, ಯೋಜನೆಗಳನ್ನು ಮಾಹೆ ಕುಲಾಧಿಪತಿಯಾಗಿರುವ ಡಾ| ರಾಮದಾಸ ಪೈ ಹಾಗೂ ಮಾಹೆ ಟ್ರಸ್ಟ್‌ನ
ಮುಖ್ಯಸ್ಥರಾದ ಡಾ| ರಂಜನ್ ಆರ್. ಪೈ ಸಮರ್ಪಕವಾಗಿ ಅನುಷ್ಠಾನಕ್ಕೆ ತರುತ್ತಿದ್ದಾರೆ ಎಂದರು.
ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್ ಮಾತನಾಡಿ, ಸಕಾರಾತ್ಮಕ ಕಲಿಕೆಗೆ ಪೂರಕ ವಾತಾವರಣ ಹಾಗೂ ಪ್ರೋತ್ಸಾಹ ಮಾಧವ ಕೃಪಾದಲ್ಲಿದೆ.
ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸು ಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗಿದೆ. ವಿದ್ಯಾರ್ಥಿ ಗಳ ಸರ್ವಾಂಗೀಣ ಅಭಿವೃದ್ಧಿಗೆ ಈ ಶಾಲೆ ಪ್ರೇರಕ ಶಕ್ತಿಯಾಗಿದೆ ಎಂದು ಬಣ್ಣಿಸಿದರು.
ಡಾ| ಟಿಎಂಎ ಫೌಂಡೇಶನ್ ಅಧ್ಯಕ್ಷರೂ ಆದ ಶಾಲೆಯ ಸಲಹ ಮಂಡಳಿಯ ಸದಸ್ಯ ಟಿ. ಅಶೋಕ್ ಪೈ, ಎಜಿಇ ಕಾರ್ಯದರ್ಶಿ ವರದರಾಯ ಪೈ ಉಪಸ್ಥಿತರಿದ್ದರು.ಪ್ರಾಂಶುಪಾಲೆ ಜೆಸ್ಸಿ ಆ್ಯಂಡ್ರೂéಸ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಶಾಲೆಯ ಕರೆಸ್ಪಾಂಡೆಂಟ್ ರಾಧಿಕಾ ಪೈ ವಂದಿಸಿ ದರು. ಉಪಪ್ರಾಂಶುಪಾಲೆ ಜ್ಯೋತಿ ಸಂತೋಷ್ ನಿರೂಪಿಸಿದರು. ಸಭೆಯ ಅನಂತರ ಗಣ್ಯರು ಡೈಮಂಡ್ ಜ್ಯುಬಿಲಿ ಬ್ಲಾಕ್ ಉದ್ಘಾಟನೆಯ ಸವಿ ನೆನಪಿಗಾಗಿಕ್ಯಾಂಪಸ್ ಆವರಣದಲ್ಲಿ ಗಿಡಗಳನ್ನು ನೆಟ್ಟರು. ನೂತನ ಬ್ಲಾಕ್‌ನ ನೆಲ ಅಂತಸ್ತಿ ನಲ್ಲಿ ಕಚೇರಿ, ಮೊದಲ ಮಹಡಿಯಲ್ಲಿ ಗ್ರಂಥಾಲಯ, 2ನೇ ಮಹಡಿಯಲ್ಲಿ ಕಂಪ್ಯೂಟರ್ ಲ್ಯಾಬ್ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.