ಮಣಿಪಾಲ - ಕಡಿಯಾಳಿ ರಸ್ತೆ: ಸೂಚನಾ ಫಲಕ ಆಳವಡಿಕೆ
Team Udayavani, May 11, 2019, 6:10 AM IST
ಕಾಮಗಾರಿ ನಡೆಯುವ ಸ್ಥಳದಲ್ಲಿ ಆಳವಡಿಸಲಾದ ಸೂಚನಾಫಲಕ.
ಉಡುಪಿ: ಮಣಿಪಾಲ - ಉಡುಪಿ ನಿರ್ಮಾಣದ ಹಂತದಲ್ಲಿ ರುವ ರಾ.ಹೆ. 169ಎ ಕಾಮಗಾರಿಯಲ್ಲಿ ರಸ್ತೆ ಸುರಕ್ಷಾ ಕ್ರಮ ಕೈಗೊಳ್ಳದೆ ಇರುವುದರಿಂದ ನಗರದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಕುರಿತು ಮೇ.7ರಂದು ಉದಯವಾಣಿ ಪ್ರತಿಕೆಯಲ್ಲಿ ವರದಿ ಪ್ರಕಟವಾಗುತ್ತಿದಂತೆ ಎಚ್ಚೆತ್ತುಕೊಂಡ ಗುತ್ತಿಗೆದಾರರು ಮಣಿಪಾಲದಿಂದ ಕಡಿಯಾಳಿಯ ವರೆಗೆ ಕಾಮಗಾರಿ ಪ್ರಗತಿಯ ಲ್ಲಿರುವ ಕುರಿತು ಸೂಚನಾ ಫಲಕ ಅಳವಡಿಸಿದ್ದಾರೆ.
ವರದಿ ಪ್ರಕಟವಾದ ದಿನ ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಹಾಗೂ ಎಸ್ಪಿ ನಿಶಾ ಜೇಮ್ಸ್ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ರಸ್ತೆ ಸುರಕ್ಷಾ ಕ್ರಮಗಳು ಮತ್ತು ಕಾಮಗಾರಿಯನ್ನು ಮಳೆಗಾಲದ ಒಳಗೆ ಪೂರೈಸುವಂತೆ ರಾ.ಹೆ. ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದಂತೆ ಸೂಚನಾ ಫಲಕ ಅಳವಡಿಸಲಾಗಿದೆ.
ಗುತ್ತಿಗೆದಾರರು ಕಾಮಗಾರಿ ಸಂದರ್ಭ ರಸ್ತೆ ಸುರಕ್ಷಾ ಕ್ರಮ ಕೈಗೊಳ್ಳದ ಹಿನ್ನೆಲೆ ನಗರದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಸ್ಥಳೀಯರಿಗೆ ಭೀತಿ ಮೂಡಿಸಿತ್ತು. ಇದೀಗ ಕಾಮಗಾರಿ ಸ್ಥಳದಲ್ಲಿ ಹಾಕಿರುವ ಸೂಚನಾಫಲಕ ವಾಹನ ಸವಾರರಲ್ಲಿ ಆತಂಕ ಕಡಿಮೆ ಮಾಡಿದೆ.
ಮಣಿಪಾಲದ ಎಂಐಟಿ, ಟೈಗರ್ ಸರ್ಕಲ್, ಎಂಜೆಸಿ ಕಾಲೇಜು, ಸಿಂಡಿಕೇಟ್ ಸರ್ಕಲ್, ಲಕ್ಷ್ಮೀಂದ್ರ ನಗರ, ಇಂದ್ರಾಳಿ, ಎಂಜಿಎಂ, ಕಡಿಯಾಳಿಯಲ್ಲಿ ಸೇರಿದಂತೆ ವಿವಿಧ ಕಡೆಗಳಲ್ಲಿ “ಎಚ್ಚರಿಕೆ ಕಾಮಗಾರಿ ಪ್ರಗತಿಯಲ್ಲಿದೆ ನಿಧಾನವಾಗಿ ಚಲಿಸಿ’ ಎನ್ನುವ ಸೂಚನಾಫಲಕ ಆಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.