ಮಣಿಪಾಲ ಮಾಹೆ: ದಾನ್ ಉತ್ಸವ
Team Udayavani, Oct 1, 2021, 12:48 AM IST
ಉಡುಪಿ: ಮಣಿಪಾಲ ಮಾಹೆ ವಿ.ವಿ.ಯಲ್ಲಿ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ದಾನ್ ಉತ್ಸವ ಹಮ್ಮಿಕೊಳ್ಳಲಾಗಿದೆ.
ಮಾಹೆ ಕಳೆದ 10 ವರ್ಷಗಳಿಂದ ಈ ಉತ್ಸವವನ್ನು ಆಚರಿಸುತ್ತಿದ್ದು, ಡಾ| ಅನುಪ್ ನಾಹಾ ಅವರ ನಾಯಕತ್ವದಲ್ಲಿ ಎಲ್ಲ ಸಹಸಂಸ್ಥೆಗಳೊಂದಿಗೆ ಈ ಆಚರಣೆಯನ್ನು ನಡೆಸಲಾಗುತ್ತಿದೆ. ಸಮುದಾಯ ಸೇವೆಯನ್ನು ಹೇಗೆ ರಚನಾತ್ಮಕ ರೀತಿಯಲ್ಲಿ ಪಠ್ಯ
ಕ್ರಮದ ಭಾಗವಾಗಿ ಸೇರಿಸಿಕೊಳ್ಳಬಹುದು ಎಂಬುದಕ್ಕೆ ಒಂದು ಉದಾಹರಣೆಯಾಗಿ ಈ ಉತ್ಸವವನ್ನು ವಿ.ವಿ.ಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಸ್ಥೆಯ ಸಹ ವಿ.ವಿ.ಗಳಾದ ಮಣಿಪಾಲ ವಿ.ವಿ. ಜೈಪುರ, ಸಿಕ್ಕಿಂ ಮಣಿಪಾಲ ವಿ.ವಿ.ಯಲ್ಲೂ ಆಚರಿಸಲಾಗುತ್ತದೆ.
ಈ ವರ್ಷ 45ಕ್ಕೂ ಹೆಚ್ಚು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಮಾಹೆಯ ವಿವಿಧ ಸಂಸ್ಥೆಗಳು ಅ. 2ರಿಂದ 8ರ ನಡುವೆ ಕಾರ್ಯಗತ ಗೊಳಿಸಲು ನಿರ್ಧರಿಸಲಾಗಿದೆ. ಈ ಯೋಜನೆಯಡಿ ವಸ್ತ್ರದಾನ, ಜ್ಞಾನದಾನ, ರಕ್ತದಾನ, ಅನ್ನದಾನ, ಶೂ ಕಲೆಕ್ಷನ್ ಡ್ರೈವ್, ಸ್ಟೇಷನರಿ ಡ್ರೈವ್, ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಸೇವಾ ಕಾರ್ಯಕ್ರಮಗಳನ್ನು ಒಳಗೊಂಡಿವೆ.
ಮಾಹೆ ವಿ.ವಿ. ಸಹಕುಲಾಧಿಪತಿ ಡಾ| ಎಚ್. ಎಸ್. ಬಲ್ಲಾಳ್ ಅವರು, ಈ ವರ್ಷ ಮಾಹೆ ವಿ.ವಿ. ಸಹಯೋಗದಲ್ಲಿ ರೋಟರಿ ಕ್ಲಬ್ ಮಣಿಪಾಲ ಟೌನ್ ಸಂಗ್ರಹಿಸಿದ ನಿಧಿಯೊಂದಿಗೆ ಬಡ ಮಕ್ಕಳ ಕ್ಯಾನ್ಸರ್ ರೋಗ ಚಿಕಿತ್ಸೆಗಾಗಿ ಹಣ ನೀಡಲು ನಿರ್ಧರಿಸಿರುವುದು ಸಂತೋಷದ ವಿಚಾರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.