ಮಣಿಪಾಲ ಪೊಲೀಸರ ಕಾರ್ಯಾಚರಣೆ: ವಿದ್ಯಾರ್ಥಿ ಸೇರಿ 3 ಮಂದಿ ಡ್ರಗ್ ಪೆಡ್ಲರ್‌ಗಳ ಬಂಧನ
ಲಕ್ಷಾಂತರ ರೂ.ಮೌಲ್ಯದ ನಿಷೇಧಿತ ಮಾದಕ ದ್ರವ್ಯ ವಶ
Team Udayavani, Apr 27, 2023, 7:35 AM IST
ಉಡುಪಿ: ಮಣಿಪಾಲ ಪೊಲೀಸರು ಕಾರ್ಯಾಚರಣೆ ನಡೆಸಿ 22.11 ಗ್ರಾಂ ತೂಕದ 2.30 ಲ.ರೂ. ಮೌಲ್ಯದ ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ಓರ್ವ ವಿದ್ಯಾರ್ಥಿ ಸೇರಿದಂತೆ 3 ಮಂದಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ.
ಮೂಲತಃ ಮಹಾರಾಷ್ಟ್ರ ನಿವಾಸಿ, ಮಣಿಪಾಲದ ಎಂಐಟಿ ವಿದ್ಯಾರ್ಥಿ ಅಕ್ಷಯ್ ಕುಮಾವತ್ (36) ಬೆಂಗಳೂರಿನ ಸರ್ಜಾಪುರ ನಿವಾಸಿ ಶ್ರೀನಿವಾಸ ಗೌಡ (31), ಬಾಣಸವಾಡಿ ನಿವಾಸಿ ಐಸಾಕ್ ಶ್ಯಾಮ್ (29) ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳು ಉಡುಪಿ ಮತ್ತು ಮಣಿಪಾಲ ನಗರದ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳನ್ನು ಸರಬರಾಜು ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ.
ಚುನಾವಣೆ ಹಿನ್ನೆಲೆಯಲ್ಲಿ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಜಾಲದ ಬಗ್ಗೆ ಪೊಲೀಸರ ತಂಡ ಮಣಿಪಾಲ ಹಾಗೂ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಡ್ರಗ್ ಪೆಡ್ಲರ್‌ಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಎ. 24ರಂದು ಮಣಿಪಾಲದ ಈಶ್ವರನಗರದ ಅಕ್ಷಯ್ ವಾಸವಿರುವ ಜನತಾ ಟವರ್‌ನ ಎದುರು ಭಾಗದ ಸಾರ್ವಜನಿಕ ಸ್ಥಳದಲ್ಲಿ ದಾಳಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಲಿಂಗಪ್ಪ ಟಿ.ಕೆ. ಅವರು ತಮ್ಮ ತಂಡದ ಸದಸ್ಯರಾದ ಉಡುಪಿ ಡಿವೈಎಸ್‌ಪಿ ದಿನಕರ ಕೆ.ಪಿ., ಮಣಿಪಾಲ ಠಾಣೆಯ ಇನ್‌ಸ್ಪೆಕ್ಟರ್ ದೇವರಾಜ ಟಿ.ವಿ., ಪಿಎಸ್‌ಐ ನವೀನ್ ನಾಯ್ಕ, ಸಿಬಂದಿ ಥಾಮ್ಸನ್, ಅಬ್ದುಲ್ ರಜಾಕ್, ಸಲ್ಮಾನ್ ಖಾನ್, ಚೆನ್ನೇಶ್ ಕೆ., ರೇವಣಸಿದ್ಧ, ಮಹಾಬಲೇಶ್ವರ ಅವರನ್ನೊಳಗೊಂಡ ತಂಡ ಯಶಸ್ವಿಯಾಗಿ ಕಾರ್ಯಾಚರಣೆ ಮಾಡಿದೆ. ಮಣಿಪಾಲ ಪೊಲೀಸರ ತಂಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಶಂಸಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.