Manipal; ಶೀಂಬ್ರ ಬ್ರಿಡ್ಜ್ ಬಳಿ ಗಾಂಜಾ ಮಾರಾಟ: ನಾಲ್ವರು ಪೆಡ್ಲರ್ಗಳ ಬಂಧನ
ಹಲವಾರು ವಿದ್ಯಾರ್ಥಿಗಳು ಇದರಲ್ಲಿ ಭಾಗಿ...
Team Udayavani, Nov 26, 2023, 7:54 PM IST
ಮಣಿಪಾಲ: ಇಲ್ಲಿನ ಶಿವಳ್ಳಿ ಗ್ರಾಮದ ಶೀಂಬ್ರ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಪೆಡ್ಲರ್ಗಳನ್ನು ಪೊಲೀಸರು ಭಾನುವಾರ (ನ 26) ಬಂಧಿಸಿದ್ದಾರೆ.
ಬಂಧಿತರು ಸಾಸ್ತಾನದ ಅಬ್ದುಲ್ ಲತೀಫ್(32), ಕೋಟೇಶ್ವರದ ಮುಸ್ತಾಫ್ ಹಂಜಾ ಬ್ಯಾಲಿ (35)ಸಾಸ್ತಾನದ ಮೊಹಮ್ಮದ್ ಅಶ್ಪಕ್ (21) ಮತ್ತು ಉಪ್ಪೂರಿನ ಶಕಿಲೇಶ್ (25) ಎನ್ನುವವರಾಗಿದ್ದಾರೆ.
ನಾಲ್ವರ ವಶದಿಂದ 274 ಗ್ರಾಂ ಗಾಂಜಾ, ಅಂದಾಜು 5 ಲಕ್ಷ ರೂ. ಮೌಲ್ಯದ ಕಾರು,19, 130 ರೂ. ನಗದು, 5 ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ. ಗಾಂಜಾವನ್ನು ಮಣಿಪಾಲದಲ್ಲಿ ಮಾರಾಟ ಮಾಡಿ ಲಾಭ ಗಳಿಸುವ ಉದ್ದೇಶದಿಂದ ನಾಲ್ವರು ಶೇಖರಿಸಿ ಇಟ್ಟಿರುವುದು ತನಿಖೆಯಲ್ಲಿ ತಿಳಿದು ಬಂದಿದೆ. ಕಪ್ಪು ಬಣ್ಣದ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರನ್ನು ಸುತ್ತುವರಿದು ಬಂಧಿಸಲಾಗಿದೆ.
ಮಣಿಪಾಲ ಠಾಣಾ ಉಪನಿರೀಕ್ಷಕ ರಾಘವೆಂದ್ರ ಸಿ ನೇತೃತ್ವದಲ್ಲಿ, ಪತ್ರಾಂಕಿತ ಅಧಿಕಾರಿ ಟಿ ಗುರುರಾಜ್ (ತಾಲೂಕು ದಂಡಾಧಿಕಾರಿಗಳು ಉಡುಪಿ ತಾಲೂಕು) ಹಾಗೂ ಮಣಿಪಾಲ ಠಾಣಾ ಸಿಬಂದಿಗಳಾದ ಎ ಎಸ್ ಐ ವಿವೇಕಾನಂದ, ಅಬ್ದುಲ್ ರಜಾಕ್, ಸುಕುಮಾರ ಶೆಟ್ಟಿ, ಪ್ರಸನ್ನ, ಅರುಣ ಕುಮಾರ್, ಚನ್ನೇಶ್, ಮಂಜುನಾಥರವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಮಾದಕ ವಸ್ತುಗಳನ್ನು ಮಣಿಪಾಲದಲ್ಲಿ ಮಾರಾಟ ಮಾಡುವ ಜಾಲದ ಬಗ್ಗೆ ತನಿಖೆ ಮುಂದುವರಿಸಲಾಗಿದೆ.
ವಿಚಾರಣೆ ಮುಂದುವರಿಸಲಾಗಿ ಮಣಿಪಾಲದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯ ನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದ್ದು, ಹಲವಾರು ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿರುವುದು ಹಾಗೂ ಸೇವನೆ ಮಾಡಿರುವುದು ತಿಳಿದು ಬಂದಿದ್ದು ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.