Udupi ಪಟಾಕಿ ಮಾರಾಟಕ್ಕೆ ಹಲವು ಷರತ್ತು: ನಿಯಮಾವಳಿ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್!
Team Udayavani, Nov 6, 2023, 11:24 PM IST
ಉಡುಪಿ: ಹಸುರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ನಿಷೇಧಿತ ಯಾವುದೇ ರೀತಿಯ ಪಟಾಕಿಗಳು ಕಂಡು ಬಂದರೆ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದರ ಜತೆಗೆ ಸಂಬಂಧಪಟ್ಟ ಮಾಲಕರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ರಾಜ್ಯ ಪೌರಾಡಳಿತ ನಿರ್ದೇಶನಾಲಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ದೀಪಾವಳಿ ಹಬ್ಬಕ್ಕೆ ದಿನಗಣನೆ ಆರಂಭವಾಗು ತ್ತಿದ್ದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರೂಪಿಸಿರುವ ಹಲವು ಮಾರ್ಗಸೂಚಿಗಳನ್ನು ಉಲ್ಲೇಖಿಸಿ ರಾಜ್ಯ ಪೌರಾಡಳಿತ ನಿರ್ದೇಶನಾಲಯ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಸುತ್ತೋಲೆ ಹೊರಡಿಸಿದ್ದು ಸುಪ್ರೀಂ ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದೆ.
ಸುತ್ತೋಲೆಯಲ್ಲಿ ಏನಿದೆ?
ಹಸುರು ಪಟಾಕಿ ಪ್ಯಾಕೆಟ್‌ಗಳನ್ನು ರ್‍ಯಾಂಡಮ್ ಆಗಿ ಸಂಗ್ರಹಿಸಿ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡಬೇಕು. ನಿಗದಿತ ಗುಣಮಾಪನಗಳಿಗೆ ಸರಿ ಹೊಂದದಿದ್ದಲ್ಲಿ ಅವುಗಳನ್ನು ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಹಸುರು ಪಟಾಕಿಗಳ ಬಗ್ಗೆ ಸಾರ್ವಜನಿಕರಿಗೆ ಹಾಗೂ ಮಕ್ಕಳಲ್ಲಿ ವ್ಯಾಪಕವಾಗಿ ಅರಿವು ಮೂಡಿಸಬೇಕು ಎಂದು ರಾಜ್ಯ ಸರಕಾರ ನಿರ್ದೇಶಿಸಿದೆ.
ಪ್ರಮುಖ ಸೂಚನೆಗಳು
ಹೊರರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ರಾಜ್ಯದ ಗಡಿಗಳಲ್ಲಿರುವ ತಮ್ಮ ತಮ್ಮ ತನಿಖಾ ಠಾಣೆಗಳ ಮೂಲಕ ನಿಷೇಧಿತ ಪಟಾಕಿಗಳು ಹಾಗೂ ಸಂಬಂಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಬೇಕು. ಸಾಗಾಟ ಮಾಡುವ ವಾಹನಗಳನ್ನೂ ಸಾರಿಗೆ ಇಲಾಖೆ ಮುಟ್ಟುಗೋಲು ಹಾಕಬೇಕು ಎಂದು ಸೂಚನೆ ನೀಡಲಾಗಿದೆ.
ನಾಗರಿಕರನ್ನೊಳಗೊಂಡ ಕಾರ್ಯಪಡೆ
ದೀಪಾವಳಿ ವೇಳೆ ಪರಿಸರ ಮಾಲಿನ್ಯ ಹಾಗೂ ಶಬ್ದ ಹಾಗೂ ವಾಯು ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಹಿತ ನಾಗರಿಕರು ಮತ್ತು ಸರಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆಗಳನ್ನು ರಚಿಸಿ ತಮ್ಮ ವ್ಯಾಪ್ತಿಯ ಎಲ್ಲ ಪಟಾಕಿ ಮಾರಾಟಗಾರರ ಗೋದಾಮು ಪರಿಶೀಲಿಸಬೇಕು. ಅಲ್ಲಿ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ ಗೋದಾಮನ್ನು ಮುಟ್ಟು ಗೋಲು ಹಾಕಿಕೊಳ್ಳಬೇಕು ಹಾಗೂ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಆದೇಶಿಸಲಾಗಿದೆ.
ಹಸುರು ಪಟಾಕಿಯಲ್ಲಿ ಕ್ಯುಆರ್‌ಕೋಡ್
ಎಲ್ಲ ಹಸುರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸುರು ಪಟಾಕಿಯ ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಇರುತ್ತದೆ. ಈ ಚಿಹ್ನೆಯ ಬಗ್ಗೆ ಸಂಬಂಧಪಟ್ಟ ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತಪಡಿಸಿಕೊಳ್ಳಬೇಕು. ಚಿಹ್ನೆ ಇಲ್ಲದ ಯಾವುದೇ ಪಟಾಕಿಗಳನ್ನು ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಜಿಲ್ಲಾ ಪರಿಸರ ಅಧಿಕಾರಿ ರಾಜು ತಿಳಿಸಿದ್ದಾರೆ.
ನಿಯಮ ಪಾಲನೆ ಕಡ್ಡಾಯ
ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಸಿಡಿಮದ್ದುಗಳ ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವ ಬಗ್ಗೆ ರಾಜ್ಯಸರಕಾರ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇದು ಜಿಲ್ಲೆಯಲ್ಲಿಯೂ ಕಟ್ಟುನಿಟ್ಟಾಗಿ ಪಾಲನೆಯಾಗಲಿದೆ. ನಿಯಮ ಉಲ್ಲಂ ಸಿ ಪಟಾಕಿ ಸಿಡಿಸಿದ್ದೇ ಆದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ ಅಥವಾ ಸ್ಥಳೀಯ ಠಾಣೆಗೆ ಮಾಹಿತಿ ನೀಡಬಹುದು.
-ಡಾ| ಕೆ. ವಿದ್ಯಾಕುಮಾರಿ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.