ಮಣಿಪಾಲದಲ್ಲಿ  5 ಕಿ.ಮೀ. ಜಾಗೃತಿ ಓಟ

Team Udayavani, Sep 24, 2018, 11:01 AM IST

run.jpg

ಉಡುಪಿ: ಮಾದಕ ವ್ಯಸನ ವಿರೋಧಿ ಮಾಸಾಚರಣೆ ಪ್ರಯುಕ್ತ ಮಣಿಪಾಲ ವಿ.ವಿ. ಪ್ರಾಯೋಜಕತ್ವದಲ್ಲಿ ರವಿವಾರ ಮಣಿಪಾಲದಲ್ಲಿ ಜಿಲ್ಲಾ  ಪೊಲೀಸ್‌, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರಸ್‌ ಕ್ಲಬ್‌ ಉಡುಪಿ ಆಯೋಜಿಸಿದ 5 ಕಿ.ಮೀ.ಗಳ “ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಓಟ’ದಲ್ಲಿ 3,000ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು.

ಮಾಹೆ ವಿ.ವಿ.ಯ ಬಳಿಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ಬ. ನಿಂಬರಗಿ, ಮಾಹೆ ವಿ.ವಿ.ಯ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್ ಹಾಗೂ ಇತರ ಗಣ್ಯರು ಹಸಿರು ನಿಶಾನೆ ತೋರಿಸಿ ಓಟಕ್ಕೆ ಚಾಲನೆ ನೀಡಿದರು. ಜಾಗೃತಿ ಓಟವು ಎಂಕಾಪ್ಸ್ , ಉಪೇಂದ್ರ ಪೈ ಸರ್ಕಲ್, ಸಿಂಡಿಕೇಟ್‌ ಸರ್ಕಲ್, ವೇಣುಗೋಪಾಲ ದೇವಸ್ಥಾನ, ಎಂಐಟಿ ಈಜು ಕೊಳ, ಎಂಐಟಿ, ಕಾಮತ್‌ ಕೆಫೆ, ಟೈಗರ್‌ ಸರ್ಕಲ್‌ ಮೂಲಕ ಮಣಿಪಾಲ್‌ ಇಡಿಯು ಕಟ್ಟಡದ ಬಳಿ ಸಮಾಪನಗೊಂಡಿತು.

ಜಾಗೃತಿ ಕಾರ್ಯಕ್ರಮಕ್ಕೆ ಸಹಕಾರ 
ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ| ಎಚ್‌.ಎಸ್‌. ಬಲ್ಲಾಳ್ , ಯುವಜನತೆ ದೇಶದ ಭವಿಷ್ಯ. ಅವರು ಮಾದಕ ವ್ಯಸನದಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಅರಿತುಕೊಳ್ಳ ಬೇಕು ಎನ್ನುವ ಉದ್ದೇಶದಿಂದ ಜಾಗೃತಿ ಓಟವನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿರುವುದು ಅಭಿಮಾನದ ಸಂಗತಿ. ವ್ಯಸನಮುಕ್ತ ಸಮಾಜ ನಿರ್ಮಾಣದತ್ತ ಮಣಿಪಾಲ ಸಂಸ್ಥೆಗಳು ಸದಾ ತಮ್ಮ ಬದ್ಧತೆಯನ್ನು ಪ್ರದರ್ಶಿಸುತ್ತಿದ್ದು, ಮುಂದೆಯೂ ಇಂತಹ ಜಾಗೃತಿ ಕಾರ್ಯಕ್ರಮಗಳಿಗೆ ಸಹಕಾರ ನೀಡಲಿದೆ ಎಂದರು.

 ಜಿಲ್ಲಾ ಎಸ್‌ಪಿ ಲಕ್ಷ್ಮಣ ಬ. ನಿಂಬರಗಿ ಮಾತನಾಡಿ, ದೇಶದ ಸಾಮಾಜಿಕ, ಆರ್ಥಿಕ, ರಾಜಕೀಯ ಭವಿಷ್ಯ ಯುವಜನರ ಮೇಲೆ ನಿಂತಿದೆ. ಯುವ ಜನರಿಗೆ ಸೂಕ್ತ ಮಾರ್ಗದರ್ಶನ ನೀಡಿದಲ್ಲಿ ಸರಿಯಾದ ಸಮಯದಲ್ಲಿ ಸರಿಯಾದ ದಾರಿಯಲ್ಲಿ ಸಾಗಲು ಅವಕಾಶ ಮಾಡಿಕೊಡುತ್ತದೆ ಎಂದರು. 

ಮ್ಯಾರಥಾನ್‌ನಲ್ಲಿ  ಪೊಲೀಸರು
ಕರ್ತವ್ಯ, ಬಂದೋಬಸ್ತ್ ಎಂದು ಬಿಝಿಯಾ ಗಿರುತ್ತಿದ್ದ ಪೊಲೀಸ್‌ ಅಧಿಕಾರಿಗಳು ಮ್ಯಾರಥಾನ್‌ನಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಎಸ್‌.ಪಿ. ಲಕ್ಷ್ಮಣ ಬ. ನಿಂಬರಗಿ, ಹೆಚ್ಚುವರಿ ಎಸ್‌ಪಿ ಕುಮಾರಚಂದ್ರ, ಡಿವೈಎಸ್ಪಿಗಳಾದ ಕುಮಾರಸ್ವಾಮಿ, ಬೆಳ್ಳಿಯಪ್ಪ, ದಿನೇಶ್‌ ಕುಮಾರ್‌ ಮತ್ತು ಇತರ ಪೊಲೀಸ್‌ ಅಧಿಕಾರಿಗಳು ಖಾಕಿ ಕಳಚಿ ಪಾಲ್ಗೊಂಡರು. 

ಸಿಂಡಿಕೇಟ್‌ ಬ್ಯಾಂಕ್‌ ಜನರಲ್‌ ಮ್ಯಾನೇಜರ್‌ ಎಚ್‌. ಭಾಸ್ಕರ ಹಂದೆ, ಸಹಾಯಕ ವಲಯ ಪ್ರಬಂಧಕ ಬಿ.ಆರ್‌. ಹಿರೇಮಠ,ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ಪ್ರಸ್‌ ಕ್ಲಬ್‌ ಸಂಚಾಲಕ ನಾಗರಾಜ ರಾವ್‌, ಕೆಎಂಸಿ ಪ್ರಾಧ್ಯಾಪಕ ಡಾ| ವಿನೋದ್‌ ನಾಯಕ್‌ ಹಾಗೂ ಇತರರು ಉಪಸ್ಥಿತರಿದ್ದರು.

ವ್ಯಸನ ಮುಕ್ತ ಮಾಸಾಚರಣೆ ಪ್ರಯುಕ್ತ 2 ತಿಂಗಳಿನಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪೊಲೀಸರು ಶಿಕ್ಷೆ ನೀಡುವ ಮೂಲಕ ಮಾದಕದ್ರವ್ಯ ವ್ಯಸನವನ್ನು ತಡೆಗಟ್ಟಬಹುದೆನ್ನುವ ತಪ್ಪು ಕಲ್ಪನೆ ಜನರಲ್ಲಿ ಇದೆ. ಇದನ್ನು ಕೇವಲ ಪೊಲೀಸ್‌ ಅಥವಾ ಕಾನೂನಿನಿಂದ ನಿಯಂತ್ರಿಸಲು ಅಸಾಧ್ಯ; ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಬೇಕಾಗಿದೆ. ಮಾದಕ ವಸ್ತು ಪೂರೈಕೆಗಿಂತಲೂ, ಬಳಕೆಯನ್ನು ತಡೆಗಟ್ಟಲು ಜನಜಾಗೃತಿ ಅತ್ಯಂತ ಆವಶ್ಯಕ. ಮಾದಕ ವ್ಯಸನ ಪಿಡುಗುಮುಕ್ತ ಸಮಾಜ ನಿರ್ಮಾಣದ ಗುರಿ ಇದೆ ಎಂದರು.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.