ಮಾ. 26ರಂದು ಪ್ರತಿಭಟನೆಗೆ ನಿರ್ಧಾರ: ಸೊರಕೆ
ಕಾಪು ತಾಲೂಕು, ಪುರಸಭೆ ವ್ಯಾಪ್ತಿಯ ಅಭಿವೃದ್ಧಿಯಲ್ಲಿ ಹಿನ್ನಡೆ
Team Udayavani, Mar 19, 2020, 5:22 AM IST
ಕಾಪು: ಕಾಪು ತಾಲೂಕು, ಪುರಸಭೆ ಸಹಿತವಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಳೆದ ಎರಡೂವರೆ ವರ್ಷಗಳಲ್ಲಿ ಯಾವುದೇ ರೀತಿಯ ಅನುದಾನವನ್ನು ತಾರದೆ, ಅಭಿವೃದ್ಧಿ ಪರ ತೀರ್ಮಾನಗಳನ್ನೂ ಕೈಗೆತ್ತಿಕೊಳ್ಳದೆ ಹೊಸ ಯೋಜನೆಗಳ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಪ್ರಯತ್ನಿಸದೇ ಇರುವುದನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮಾ.26ರಂದು ಪುರಸಭೆಯ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಕಾಪು ರಾಜೀವ ಭವನದಲ್ಲಿ ಮಾ. 17ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಅಧಿಕಾರಾವಧಿಯಲ್ಲಿ ತಂದ ಅನುದಾನವನ್ನು ಬೇರೆಡೆ ವರ್ಗಾಯಿಸಿ ಅದಕ್ಕೆ ಗುದ್ದಲಿ ಪೂಜೆ ನಡೆಸುವುದು, ಫ್ಲೆಕ್ಸ್ ಹಾಕಿಸುವಂತಹ ಕೆಲಸ ಮಾತ್ರ ಹಾಲಿ ಶಾಸಕರಿಂದ ನಡೆಯುತ್ತಿದೆ. ಅದು ಹೊರತು ಬೇರೇನೂ ನಡೆಯುತ್ತಿಲ್ಲ ಎಂದು ಅವರು ಆರೋಪಿಸಿದರು.
ಬೇಡಿಕೆ ಈಡೇರಿಕೆಗೆ
ಆಗ್ರಹಿಸಿ ಪ್ರತಿಭಟನೆ
ಕಾಪು ಪುರಸಭೆಗೆ ಮಂಜೂರಾದ ಅನುದಾನ ಬೇರೆಡೆ ವರ್ಗಾವಣೆಯಾಗುತ್ತಿದ್ದು, ಈ ಬಗ್ಗೆ ಸೂಕ್ತ ತನಿಖೆಯಾಗಬೇಕಿದೆ. ನಗರೋತ್ಥಾನ ಕಾಮಗಾರಿಗಳು ಕಳಪೆ ರೀತಿಯಲ್ಲಿ ನಡೆಯುತ್ತಿದ್ದು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು. ಅದರ ಜತೆಗೆ ಕಾಮಗಾರಿಗಳ ವಿಳಂಬ, ಕಾಮಗಾರಿಯ ಬದಲಾಯಿಸುವಿಕೆ, ಅನುದಾನ ವರ್ಗಾವಣೆ ಸಹಿತವಾಗಿ ವಿವಿಧ ಬೇಡಿಕೆಗಳನ್ನು ಮುಂದಿರಿಸಿಕೊಂಡು ಮಾ. 26ರಂದು ಪ್ರತಿಭಟನೆ ನಡೆಯಲಿದೆ ಎಂದರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ ಚಂದ್ರ ಸುವರ್ಣ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಸಾದಿಕ್, ಪಕ್ಷದ ಮುಖಂಡರಾದ ಡಾ| ದೇವಿಪ್ರಸಾದ್ ಶೆಟ್ಟಿ, ಮನಹರ್ ಇಬ್ರಾಹಿಂ, ಹರೀಶ್ ನಾಯಕ್, ದೀಪಕ್ ಎರ್ಮಾಳ್, ಸುನೀಲ್ ಬಂಗೇರ, ಅಮೀರುದ್ದೀನ್, ಪುರಸಭಾ ಸದಸ್ಯರಾದ ಕೆ. ಎಚ್. ಉಸ್ಮಾನ್, ಅಬ್ದುಲ್ ಹಮೀದ್, ಶಾಬು ಸಾಹೇಬ್, ಮಹಮ್ಮದ್ ಇಮ್ರಾನ್, ಸುರೇಶ್ ದೇವಾಡಿಗ, ಮಾಲಿನಿ ಶೆಟ್ಟಿ, ಸೌಮ್ಯ, ವಿಜಯಲಕ್ಷಿ$¾, ಅಶ್ವಿನಿ, ಸುಲೋಚನಾ ಬಂಗೇರ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.