ಮಾರ್ಕೆಟ್ ರಸ್ತೆ ಕಾಮಗಾರಿ ವಿಳಂಬ: ಪ್ರತಿಭಟನೆ
Team Udayavani, Feb 2, 2019, 12:30 AM IST
ಕಾರ್ಕಳ: ನಗರೋತ್ಥಾನ ಯೋಜನೆಯಡಿ ಪುರಸಭೆ ವ್ಯಾಪ್ತಿಯ ಮಾರ್ಕೆಟ್ ರಸ್ತೆಯಲ್ಲಿ ನಡೆಸಲಾಗುತ್ತಿರುವ ಕಾಮಗಾರಿ ಅವಧಿ ಕಳೆದರೂ ಪೂರ್ಣವಾಗಿಲ್ಲ ಎಂದು ಆರೋಪಿಸಿ, ಸ್ಥಳೀಯರು ಪುರಸಭೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಪುರಸಭೆ ಸದಸ್ಯ ಶುಭದ ರಾವ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಸ್ಥಳೀಯರು ಕಳೆದ ಅಕ್ಟೋಬರ್‌ನಲ್ಲಿ ಕಾಮಗಾರಿ ಆರಂಭಗೊಂಡರೂ ಈವರೆಗೆ ಪೂರ್ಣಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರಿಗೆ, ವ್ಯಾಪಾರಸ್ಥರಿಗೆ ತೀರಾ ತೊಂದರೆಯಾಗಿದೆ. ಚರಂಡಿ ಕಾಮಗಾರಿಯೂ ಅಪೂರ್ಣವಾಗಿದ್ದು, ಹಾಸುಗಲ್ಲುಗಳನ್ನು ಮುಚ್ಚದೇ ಕಳಪೆ ಕಾಮಗಾರಿ ನಡೆಸಲಾಗಿದೆ. ಹೀಗಾಗಿ ಬಸ್ ಓಡಾಟ, ಶನಿವಾರದ ಸಂತೆಗೂ ಸಾಕಷ್ಟು ಸಮಸ್ಯೆಯಾಗಿದೆ. ಈ ಕುರಿತು ಪುರಸಭೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಶೀಘ್ರ ಸಮಸ್ಯೆ ಬಗೆಹರಿಸುವಂತೆ ಪುರಸಭೆ ಮುಖ್ಯಾಧಿಕಾರಿ ಮೇಬಲ್ ಡಿ’ಸೋಜಾ ಅವರನ್ನು ಆಗ್ರಹಿಸಿದರು.
ಡಿಸಿ ಗಮನಕ್ಕೆ ತನ್ನಿ
ಕಾಮಗಾರಿಯಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದ್ದು, ಹತ್ತು ದಿನಗಳ ಒಳಗಾಗಿ ಪೂರ್ಣಗೊಳಿಸಬೇಕೆಂದು ಮುಖ್ಯಾಧಿಕಾರಿಯವರಲ್ಲಿ ಒತ್ತಾಯಿಸಿದ ಶುಭದ ರಾವ್ ಇಲ್ಲಿನ ಸಮಸ್ಯೆ ಕುರಿತು ತಾವು ಜಿಲ್ಲಾಧಿಕಾರಿಯವರ ಗಮನಕ್ಕೆ ತರಬೇಕು ಎಂದು ಆಗ್ರಹಿಸಿದರು.
ಬಳಿಕ ಜಿಲ್ಲಾಧಿಕಾರಿಯವರಿಗೆ ಪುರಸಭಾ ಮುಖ್ಯಾಧಿಕಾರಿ ಮೂಲಕ ಪ್ರತಿಭಟನ ನಿರತರು ಮನವಿ ಸಲ್ಲಿಸಿದರು. ಮಾರ್ಕೆಟ್ ರಸ್ತೆಯಿಂದ ಬಸ್ ನಿಲ್ದಾಣ ಮೂಲಕ ಪುರಸಭೆ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಯಿತು. ಪುರಸಭೆ ಸದಸ್ಯ ಲಕ್ಷ್ಮೀನಾರಾಯಣ ಮಲ್ಯ, ಶ್ರೀಧರ್ ನಾಯಕ್, ದಾಮೋದರ್, ಪದ್ಮಪ್ರಸಾದ್ ಜೈನ್, ರಘುವೀರ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.