ಸಾಮೂಹಿಕ ಪ್ರಾರ್ಥನೆ, ಜಗತ್ಕಲ್ಯಾಣ ಪೂಜೆ ವೈಜ್ಞಾನಿಕ

Team Udayavani, Jul 19, 2017, 3:05 AM IST

samoohika-prartane.jpg

ಉಡುಪಿ: ಸಾಮೂಹಿಕ ಪ್ರಾರ್ಥನೆ ಜಗತ್ತಿನ ಎಲ್ಲ ಭಾಗಗಳಲ್ಲಿಯೂ ನಡೆಯಬೇಕೆಂದಿಲ್ಲ. ಯಾವ ಮೂಲೆಯಲ್ಲಿ ನಡೆದರೂ ಅದರಿಂದ ಫಲ ದೊರೆಯುತ್ತದೆ ಎಂಬುದನ್ನು ವಿಜ್ಞಾನಿಗಳೂ ಒಪ್ಪುತ್ತಾರೆ. ಸಾಮೂಹಿಕ ಪ್ರಾರ್ಥನೆ ಮತ್ತು ಜಗದ ಕಲ್ಯಾಣಕ್ಕಾಗಿ ಸಲ್ಲಿಸುವ ಪೂಜೆ ಜಗತ್ತಿಗೆ ತಲುಪುತ್ತದೆ ಎನ್ನುವುದು ವೈಜ್ಞಾನಿಕವಾಗಿ ತಿಳಿದುಬಂದಿದೆ ಎಂದು ಮೈಸೂರು ಶ್ರೀ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು. 

ಶ್ರೀಕೃಷ್ಣ ಮಠಕ್ಕೆ ಮಂಗಳವಾರ ಆಗಮಿಸಿ ದೇವರ ದರ್ಶನ ಪಡೆದ ಬಳಿಕ ಪರ್ಯಾಯ ಶ್ರೀ ಪೇಜಾವರ ಮಠದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ಸ್ವಧರ್ಮದಲ್ಲಿ ನಿಷ್ಠೆ ಮತ್ತು ಪರಧರ್ಮದಲ್ಲಿ  ಸಹಿಷ್ಣುತೆಯನ್ನು ಕಾಣುವುದು ಅತಿ ಅಗತ್ಯವಾಗಿದೆ ಎಂದರು. 

ಸ್ವಪ್ರತಿಷ್ಠೆಯಿಂದ ಹದಗೆಟ್ಟಿರುವ ಸಮಾಜ, ಜಗತ್ತನ್ನು ಋಷಿಮುನಿಗಳು, ಶರಣರು, ದಾಸರು, ಸಂತರ ಮಾರ್ಗ ದರ್ಶನದಲ್ಲಿ  ಸರಿಪಡಿಸಬಹುದಾಗಿದೆ. ಹಿಂದೂಗಳು ತಮ್ಮ ಸಂಕುಚಿತ ಮನೋಭಾವನೆಯನ್ನು ಬದಿಗಿಟ್ಟು  ಎಲ್ಲರ ಒಳಿತಿಗಾಗಿ ಪ್ರಯತ್ನಿಸಿದರೆ ಉತ್ತಮ ಭವಿಷ್ಯವಿದೆ ಎಂದು ಸ್ವಾಮೀಜಿ ಹೇಳಿದರು. 

ಶ್ರೀಕೃಷ್ಣ ಜಗತøಸಿದ್ಧ. ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದಾಗಿ ಪೇಜಾವರ ಮಠ ಪ್ರಸಿದ್ಧವಾಗಿದೆ. ಇವರು ಮಧ್ವಾಚಾರ್ಯರ ಪ್ರತೀಕವಾಗಿ ಬೆಳಗುತ್ತಿದ್ದಾರೆ, ಸಮುದಾಯದ ಒಳಿತಿಗಾಗಿ, ಹಿಂದೂಗಳ ಒಗ್ಗಟ್ಟಿಗೆ ಧಾರ್ಮಿಕ ಚೌಕಟ್ಟಿನಲ್ಲಿದ್ದು ಶ್ರಮಿಸು ತ್ತಿದ್ದಾರೆಂದು ಸುತ್ತೂರು ಸ್ವಾಮೀಜಿ ಬಣ್ಣಿಸಿದರು. 

ಪೇಜಾವರ ಕಿರಿಯ ಶ್ರೀಗಳು ಸುತ್ತೂರು ಸ್ವಾಮೀಜಿಯವರ ಕೊಡುಗೆಗಳನ್ನು ಬಣ್ಣಿಸಿ ಶುಭ ಕೋರಿದರು. ಪ್ರೊ| ಶ್ರೀಪತಿ ತಂತ್ರಿ ಸ್ವಾಗತಿಸಿ ಗುರುಮೂರ್ತಿ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಅಭಿವೃದ್ಧಿ -ಶಾಂತಿಗೆ 3 “ಸ’ಕಾರಗಳು
ಸೌಹಾರ್ದ, ಸಹನೆ ಹಾಗೂ ಸಹಕಾರ ಈ ಮೂರು ವಿಚಾರಗಳನ್ನು ಎಲ್ಲ ಧರ್ಮಗಳು ಪಾಲಿ ಸಿದರೆ ದೇಶ ಅಭಿವೃದ್ಧಿ ಹೊಂದುವುದು ಮಾತ್ರ ವಲ್ಲದೆ ಶಾಂತಿ ನೆಲೆಸಲಿದೆ. ಮಧ್ವರು ಮತ್ತು ಬಸವೇಶ್ವರರಿಂದಾಗಿ ಕರ್ನಾಟಕ ದೇಶ ಮತ್ತು ಜಗತ್ತಿಗೆ ಮಹತ್ವದ ಕೊಡುಗೆ ನೀಡಿದೆ. ದಾಸ ಸಾಹಿತ್ಯ ಮತ್ತು  ಶರಣ ಸಾಹಿತ್ಯ ಎರಡು ಕಣ್ಣುಗಳಿದ್ದಂತೆ. ಸುತ್ತೂರು ಸ್ವಾಮೀಜಿ ಯವರು ಶೈಕ್ಷಣಿಕ ಕ್ರಾಂತಿ ಮೂಲಕ ಸಾಮಾಜಿಕ ಕೊಡುಗೆ ಗಳನ್ನು ನೀಡಿದ್ದಾರೆಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ನುಡಿದರು. 

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.