ಮನೆ ಹಾನಿಗೆ ಗರಿಷ್ಠ ಪರಿಹಾರ ನೀಡಿ: ಸಂಸದೆ ಶೋಭಾ
ಜಿಲ್ಲೆಯ ಮಳೆ ಹಾನಿ: ಸಭೆ
Team Udayavani, Aug 27, 2019, 5:47 AM IST
ಉಡುಪಿ: ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಭಾಗಶಃ ಹಾನಿಗೊಳ ಗಾದ ಮನೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ಮಳೆ ಹಾನಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ 4 ಮನೆಗಳು ಸಂಪೂರ್ಣ ಹಾನಿ ಗೊಳಗಾಗಿವೆ ಎಂದು ಅಧಿಕಾರಿಗಳು ನೀಡಿದ ಮಾಹಿತಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಭಾಗಶಃ ಹಾನಿಯಾದ ಮನೆಗಳು ಗರಿಷ್ಠ ಸಂಖ್ಯೆಯಲ್ಲಿದ್ದು, ಈ ಮನೆಗಳ ಹಾನಿಯ ಕುರಿತು ಪುನಃ ಪರಿಶೀಲಿಸಿ ಮನೆಯವರ ಅಭಿಪ್ರಾಯ ಪಡೆದು, ಗರಿಷ್ಠ ಮೊತ್ತದ ಪರಿಹಾರ ವಿತರಿಸುವಂತೆ ಎಲ್ಲ ತಹಶೀಲ್ದಾರ್‌ಗಳಿಗೆ ಸೂಚಿಸಿದರು.
325 ಹೆಕ್ಟೇರ್ ಬೆಳೆ ಹಾನಿ
ಭತ್ತದ ಬೆಳೆ ಹಾನಿಗೆ ಸಂಬಂಧಿಸಿದಂತೆ ಇದುವರೆಗೆ 708 ಪ್ರಕರಣಗಳಲ್ಲಿ ಒಟ್ಟು 325 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಅಂದಾಜು 22 ಲ.ರೂ.ನಷ್ಟವಾಗಿದೆ. ತೋಟಗಾರಿಕಾ ಬೆಳೆಯಲ್ಲಿ 11.26 ಎಕ್ರೆಗೆ ಹಾನಿಯಾಗಿದ್ದು, ಅಂದಾಜು 14.64 ಲ.ರೂ.ನಷ್ಟವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಆರೋಗ್ಯ ಇಲಾಖೆ ಕಾರ್ಯಪ್ರವೃತ್ತವಾಗಲಿ
ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ ಅತಿವೃಷ್ಠಿಯಿಂದಾಗಿ ನೀರು ನಿಂತು ಡೆಂಗ್ಯೂ, ಮಲೇರಿಯಾದಂತಹ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಈ ಬಗ್ಗೆ ಕಾರ್ಯಪ್ರವೃತ್ತರಾಗಬೇಕು. ಲಾರ್ವಾ ಸರ್ವೇ ಕಾರ್ಯಕ್ಕೆ ಸ್ಥಳೀಯ ನರ್ಸಿಂಗ್ ವಿದ್ಯಾರ್ಥಿಗಳ ಸಹಾಯವನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಶಾಸಕ ರಘುಪತಿ ಭಟ್, ಜಿ.ಪಂ.ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕುಡಿಯುವ ನೀರು: ಅಗತ್ಯ ಕ್ರಮ ಕೈಗೊಳ್ಳಿ
ಜಿಲ್ಲೆಯಲ್ಲಿ ಸಮುದ್ರ ಕೊರೆತ ತಡೆಯುವ ಕುರಿತಂತೆ ಸೂಕ್ತ ಯೋಜನೆ ರೂಪಿಸಿ ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಂಸದರು ಸೂಚಿಸಿದರು. ಮುಂದಿನ ವರ್ಷಗಳಲ್ಲಿ ನೀರಿನ ಕೊರತೆ ಉಂಟಾಗದಂತೆ ಮುಂಜಾಗೃತಾ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ, ಬಜೆ ಡ್ಯಾಮ್‌ನಲ್ಲಿ ತುಂಬಿರುವ ಹೂಳನ್ನು ತೆಗೆಯುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.