ವೈದ್ಯಕೀಯ ವಿಜ್ಞಾನ ಸಂಸ್ಥೆ: ಪರಿಸರ ದಿನಾಚರಣೆ
Team Udayavani, Jun 6, 2019, 6:10 AM IST
ಮಡಿಕೇರಿ:ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವೈದ್ಯಕೀಯ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಸಭಾ ಕಾರ್ಯಕ್ರಮ ನಡೆಯಿತು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲ ಡಾ.ವಿಶಾಲ್ ಕುಮಾರ್ ಅವರು ಮಾತನಾಡಿ ಹನಿಹನಿ ಕೂಡಿದರೆ ಹಳ್ಳವೆಂಬಂತೆ ಪ್ರಕೃತಿಯನ್ನು ಉಳಿಸುವಲ್ಲಿ ನಾವು ಮಾಡುವ ಸಣ್ಣ ಕಾರ್ಯವೇ ದೊಡ್ಡದಾಗಿ ಪರಿವರ್ತನೆಗೊಂಡು ಯಶಸ್ವಿಯಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಗಿಡ ನೆಡಬೇಕು ವ್ಯಾಸಂಗ ಮುಗಿಸಿ ತೆರಳುವಾಗ ಕಿರಿಯ ವಿದ್ಯಾರ್ಥಿಗಳಿಗೆ ಆ ಗಿಡಗಳನ್ನು ಪೋಷಣೆ ಮಾಡುವ ಕರ್ತವ್ಯವನ್ನು ವಹಿಸಬೇಕೆಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮಡಿಕೇರಿ, ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷರು ರವೀಂದ್ರ ರೈ , ಖೀಡಿಕೇರಿ, ಯೂತ್ ರೆಡ್ ಕ್ರಾಸ್‌ನ ಅಧ್ಯಕ್ಷ ಧನಂಜಯ್ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಯೂತ್ ರೆಡ್‌ಕ್ರಾಸ್‌ನ ಉಪಾಧ್ಯಕ್ಷರು ಚಂದನಾ, ಸಂಸ್ಥೆಯ ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ವೃಂದದವರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಡಾ| ವೀಣಾ, ಉಪಸ್ಥಿತರಿದ್ದರು. ಕಾಲೇಜಿನ ಆವರಣವನ್ನು ಶುಚಿಗೊಳಿಸಲಾಯಿತು ವರಣದಲ್ಲಿ ಗಿಡಗಳನ್ನು ನೆಡಲಾಯಿತು.ಅನುಶ್ರೀ ಅವರು ವಂದಿಸಿದರು, ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.