ಆಗಸ್ಟ್ 12-14: ಉಡುಪಿಯಲ್ಲಿ ಯೋಗಾಥಾನ್; ಜಿಲ್ಲಾಧಿಕಾರಿ ಕೂರ್ಮಾರಾವ್
Team Udayavani, Jul 2, 2022, 1:38 AM IST
ಮಣಿಪಾಲ: ಜನಸಾಮಾನ್ಯರಲ್ಲಿ ಯೋಗದ ಮಹತ್ವ ಹಾಗೂ ಅದರಿಂದ ದೇಹಕ್ಕೆ ಆಗುವ ಪ್ರಯೋಜನ ಕುರಿತು ಅರಿವು ಮೂಡಿಸುವುದು ಸೇರಿದಂತೆ ಯೋಗವನ್ನು ನಿತ್ಯ ಜೀವನದ ಒಂದು ಭಾಗವಾಗಿ ಅಳವಡಿಸಿಕೊಳ್ಳಲು ಆಗಸ್ಟ್ 12ರಿಂದ 14ರ ವರೆಗೆ ಜಿಲ್ಲಾಮಟ್ಟದ ಯೋಗಾಥಾನ್ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 10,000 ಜನರಿಗೆ ಏಕಕಾಲದಲ್ಲಿ ಒಂದೆಡೆ ತರಬೇತಿ ನೀಡಿ, ಯೋಗವನ್ನು ತಮ್ಮ ದೈನಂದಿನ ಚಟುವಟಿಕೆ ಯಾಗಿಸಿಕೊಂಡು ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡುವಂತೆ ಮಾಡುವುದು ಇದರ ಉದ್ದೇಶವಾಗಿದೆ. ಇದರಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ನೀಡಲಾಗುವುದು ಎಂದರು.
ಸಾರ್ವಜನಿಕರು ಯೋಗಾಥಾನ್‌ನಲ್ಲಿ ಭಾಗವಹಿಸಲು [email protected] ನಲ್ಲಿ ಆನ್‌ಲೈನ್ ನೋಂದಣಿ ಹಾಗೂ ಕಾರ್ಯಕ್ರಮದ ಸ್ಥಳದಲ್ಲಿಯೇ ನೋಂದಣಿಗೂ(ಆಫ್ಲೈನ್) ಅವಕಾಶವಿದೆ. ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕಾಲೇಜುಗಳಲ್ಲಿ ಪ್ರಾಂಶುಪಾಲರ ಸಹಕಾರ ಪಡೆಯಬೇಕು ಎಂದು ಸೂಚನೆ ನೀಡಿದರು.
ಉಡುಪಿ ಜಿಲ್ಲೆ ಘೋಷಣೆಯಾಗಿ 25 ವರ್ಷ ಸಂಪೂರ್ಣವಾಗುತ್ತಿದ್ದು, ಇದರ ಅಂಗವಾಗಿ ವಿಶೇಷ ಕಾರ್ಯಕ್ರಮ ಗಳನ್ನು ಆಯೋಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ, ಜಿಲ್ಲಾ ಆಯುಷ್ ಅಧಿಕಾರಿ ಡಾ| ಸತೀಶ್ ಆಚಾರ್ಯ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.