MGM College: ಶಿಕ್ಷಣದೊಂದಿಗೆ ವ್ಯಕ್ತಿತ್ವ ವಿಕಸನ ಅಗತ್ಯ: ಪ್ರೊ| ಪ್ರಸನ್ನ ತಂತ್ರಿ

ಎಂಜಿಎಂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಮೃತ ಸಮ್ಮಿಲನ

Team Udayavani, Dec 1, 2024, 8:46 PM IST

MGM College: ಶಿಕ್ಷಣದೊಂದಿಗೆ ವ್ಯಕ್ತಿತ್ವ ವಿಕಸನ ಅಗತ್ಯ: ಪ್ರೊ| ಪ್ರಸನ್ನ ತಂತ್ರಿ

ಉಡುಪಿ: ಶಿಕ್ಷಣದೊಂದಿಗೆ ವ್ಯಕ್ತಿತ್ವ ವಿಕಸನ ಗುಣ ವಿದ್ಯಾರ್ಥಿಗಳಿಗೆ ಅತೀ ಅಗತ್ಯವಾಗಿದೆ. ಇದು ಎಲ್ಲ ಕಡೆಯೂ ಸಿಗುವಂತಹದ್ದಲ್ಲ. ಆದರೆ ಎಂಜಿಎಂ ಕಾಲೇಜಿನಲ್ಲಿ ಇದರೊಂದಿಗೆ ಜೀವನ ಕೌಶಲ, ನಾಯಕತ್ವಗುಣದಂತಹ ಶಿಕ್ಷಣವೂ ದೊರೆಯುತ್ತಿರುವುದು ವಿದ್ಯಾರ್ಥಿಗಳ ಸೌಭಾಗ್ಯ ಎಂದು ನೀತಿ ಆಯೋಗದ ಸದಸ್ಯ ಹಾಗೂ ಹೈದರಾಬಾದ್‌ನ ಪವರ್‌ ಫೈನಾನ್ಸ್‌ ಕಾರ್ಪೊರೇಷನ್‌ನ ಸಹಪ್ರಾಧ್ಯಾಪಕ ಪ್ರೊ| ಪ್ರಸನ್ನ ತಂತ್ರಿ ಅಭಿಪ್ರಾಯಪಟ್ಟರು.

ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ರವಿವಾರ ನಡೆದ ಹಳೆ ವಿದ್ಯಾರ್ಥಿ ಸಂಘದ ಅಮೃತ ಸಮ್ಮಿಲನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಕೋಚಿಂಗ್‌ ಸೆಂಟರ್‌ಗಳಲ್ಲಿ ಇಂದು ಪ್ರತಿಭಾನ್ವಿತ ಹಾಗೂ ಪ್ರತಿಭಾನ್ವಿತರಲ್ಲದ ವಿದ್ಯಾರ್ಥಿಗಳ ನಡುವೆ ತಾರತಮ್ಯ ಮಾಡಲಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಇಂದು ವಿವಿಧ ಚಿಂತನೆಗಳುಳ್ಳ ವ್ಯಕ್ತಿಗಳನ್ನು ಕಂಡುಕೊಳ್ಳಲು ಸಾಧ್ಯವಿದೆ. ಆದರೆ ನಮ್ಮ ನಿಲುವು ಒಂದೇ ಆಗಿದ್ದಾಗ ನಾವು ಅಂದುಕೊಂಡಿದ್ದನ್ನು ಸಾಧಿಸಿಕೊಳ್ಳಬಹುದು. ಸಾಮಾಜಿಕ ಜೀವನದಲ್ಲಿ ವ್ಯಕ್ತಿತ್ವ ವಿಕಸನ ಬಹಳಷ್ಟು ಪ್ರಾಮುಖ್ಯತೆ ವಹಿಸುತ್ತದೆ.

ಇವುಗಳನ್ನು ಯಾವ ಶಾಲಾ-ಕಾಲೇಜುಗಳಲ್ಲಿಯೂ ಕಲಿಸುತ್ತಿಲ್ಲ. ಆದರೆ ಎಂಜಿಎಂ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾಗಿರುವಂತಹ ಶಿಕ್ಷಣ ಲಭಿಸುತ್ತಿದೆ. ವಿವಿಧ ಕಂಪೆನಿಗಳು ತಮ್ಮ ಸಿಎಸ್‌ಆರ್‌ ಅನುದಾನದಲ್ಲಿ ಹಾಗೂ ಸಂಸ್ಥೆಯ ಹಳೆ ವಿದ್ಯಾರ್ಥಿಗಳು ತಾವು ಕಲಿತ ಸಂಸ್ಥೆಗೆ ಆರ್ಥಿಕ ನೆರವು ನೀಡಿದರೆ ವಿದ್ಯಾರ್ಥಿಗಳಿಗೆ ಮತ್ತಷ್ಟು ಮೂಲಸೌಲಭ್ಯ ಕಲ್ಪಿಸಲು ಸಾಧ್ಯವಾಗಲಿದೆ ಎಂದರು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ| ಸುರೇಂದ್ರನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ, ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ದೇವಿದಾಸ್‌ ನಾಯ್ಕ, ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ| ಮಾಲತಿ ದೇವಿ, ನಿವೃತ್ತ ಪ್ರಾಂಶುಪಾಲ ಪ್ರೊ| ಎಂ.ಎಲ್‌.ಸಾಮಗ, ಟಿ.ಮೋಹನದಾಸ್‌ ಪೈ ಕೌಶಲಾಭಿವೃದ್ಧಿ ಕೇಂದ್ರದ ನಿರ್ದೇಶಕ ಟಿ.ರಂಗ ಪೈ, ಹಳೆವಿದ್ಯಾರ್ಥಿ ಸಂಘದ ಖಜಾಂಚಿ ದೀಪಾಲಿ ಕಾಮತ್‌ ಮಾತನಾಡಿದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ, ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಮುಖ್ಯಸ್ಥ ಡಾ| ಎಂ.ವಿಶ್ವನಾಥ ಪೈ ಸ್ವಾಗತಿಸಿದರು. ವೀಕ್ಷಿತ್‌ ವಂದಿಸಿದರು. ಉಪನ್ಯಾಸಕಿ ಸೌಮ್ಯ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

JP-Nadda

HMPV Issue: ಎಚ್‌ಎಂಪಿವಿ ಹೊಸ ವೈರಸ್ ಏನಲ್ಲ, ಆತಂಕಪಡುವ ಅಗತ್ಯವಿಲ್ಲ: ಜೆ.ಪಿ.ನಡ್ಡಾ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

arrested

Mangaluru: ಕಾರಾಗೃಹದೊಳಗೆ ಮೊಬೈಲ್ ಎಸೆಯಲು ಯತ್ನಿಸಿದವ ಅರೆಸ್ಟ್

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

car-parkala

Brahmavar: ಕಂಟೈನರ್‌ ಢಿಕ್ಕಿ; ಬೈಕ್‌ ಸಹಸವಾರೆ ಸಾವು

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

15(1

Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ

9

ಕಾರ್ಕಳ ನಗರದಲ್ಲೂ ನೆಟ್‌ ಕಿರಿಕಿರಿ!

1

Udupi: ಇನ್‌ಸ್ಟಾಗ್ರಾಂ ಲಿಂಕ್‌ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

JP-Nadda

HMPV Issue: ಎಚ್‌ಎಂಪಿವಿ ಹೊಸ ವೈರಸ್ ಏನಲ್ಲ, ಆತಂಕಪಡುವ ಅಗತ್ಯವಿಲ್ಲ: ಜೆ.ಪಿ.ನಡ್ಡಾ

ACT

Mangaluru: ಕೊಕೇನ್‌, ಚರಸ್‌ ಸೇವನೆ; ಮೂವರ ಬಂಧನ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

car-parkala

Brahmavar: ಕಂಟೈನರ್‌ ಢಿಕ್ಕಿ; ಬೈಕ್‌ ಸಹಸವಾರೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.