ವಲಸೆ ಕಾರ್ಮಿಕರಿಗೆ ತಾತ್ಕಾಲಿಕ  ವಸತಿ ಸೌಕರ್ಯ: ಎಸಿ ಸ್ಥಳ ಪರಿಶೀಲನೆ

Team Udayavani, Apr 1, 2017, 3:14 PM IST

3103kde19.jpg

ಕುಂದಾಪುರ: ಕುಂದಾಪುರ ನಗರದಲ್ಲಿ  ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬಂದ ನೂರಾರು ಮಂದಿ ವಲಸೆ ಕಾರ್ಮಿಕರು ವಾಸಿಸುತ್ತಿದ್ದು, ರಾತ್ರಿಹೊತ್ತು ಅವರು ತಂಗಲು ಯಾವುದೇ ಸೂಕ್ತ ವಸತಿ ಸೌಕರ್ಯ ಇಲ್ಲದೇ ಇರುವುದನ್ನು ಗಮನ ಹರಿಸಿದ  ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್‌ ಅವರು ಜಿಲ್ಲಾಡಳಿತದ ನಿರ್ದೇಶನದಂತೆ  ಕುಂದಾಪುರ ಪುರಸಭೆಯ ನೆರವಿನೊಂದಿಗೆ ವಲಸೆ ಕಾರ್ಮಿಕರಿಗೆ ವಸತಿ ಸೌಕರ್ಯವನ್ನು ಒದಗಿಸುವ ಬಗ್ಗೆ ಚಿಂತನೆ ನಡೆಸಿದ್ದು , ಈ ಬಗ್ಗೆ  ಶುಕ್ರವಾರ  ಕುಂದಾಪುರದಲ್ಲಿ  ಸೂಕ್ತ ಸ್ಥಳಪರಿಶೀಲನೆಯನ್ನು ಅಧಿಕಾರಿಗಳೊಂದಿಗೆ ನಡೆಸಿದರು.

ಕುಂದಾಪುರ ಪುರಸಭೆಯು ಹೊಸ ಬಸ್ಸು ನಿಲ್ದಾಣದಲ್ಲಿ ನಿರ್ಮಿಸಿದ ವಾಣಿಜ್ಯ ಸಂಕೀರ್ಣದ ಎರಡನೇ ಮಹಡಿಯಲ್ಲಿ  ವಲಸೆ ಕಾರ್ಮಿಕರಿಗೆ ತಾತ್ಕಾಲಿಕವಾಗಿ ರಾತ್ರಿ ಹೊತ್ತು  ತಂಗಲು ವಸತಿ ನೀಡುವ ಬಗ್ಗೆ  ವಿಶೇಷ ನೈಟ್‌ ಶಲ್ಟರ್‌ ನಿರ್ಮಿಸಲು  ನಿರ್ಣಯಿಸದ ಬೆನ್ನಲ್ಲೇ ಕುಂದಾಪುರ ಉಪವಿಭಾಗಾಧಿಕಾರಗಳು ಇಲಾಖಾ ಅಧಿಕಾರಿಗಳೊಂದಿಗೆ ಈ ಸ್ಥಳವನ್ನು ಪರಿಶೀಲನೆ ನಡೆಸಿದರು. ಅಲ್ಲದೇ ಇಲ್ಲಿ ಕಾರ್ಮಿಕರಿಗೆ ತಂಗಲು  ಅವಕಾಶ ಮಾಡಿಕೊಡುವ ಬಗ್ಗೆ  ಹಾಗೂ ಅವರಿಗೆ ಬೇಕಾಗುವ ಶೌಚಾಲಯ, ವಿದ್ಯುತ್‌ ಮೊದಲಾದ ಮೂಲ ಸೌಕರ್ಯವನ್ನು ಕಲ್ಪಿಸುವ ಕುರಿತು ಮಾತುಕತೆ ನಡೆಸಿದರು.

ಗುರುವಾರ ರಾತ್ರಿ ಉಪವಿಭಾಗಾಧಿಕಾರಿ ಯವರು  ನೆಹರೂ ಮೈದಾನದ ಸಾಲಾ ಪರಿಸರವನ್ನು ಭೇಟಿ ಮಾಡಿ ಅಲ್ಲಲ್ಲಿ ಮಲಗಿದ್ದ ಕಾರ್ಮಿಕರ ಸಮಸ್ಯೆಯನ್ನು ಆಲಿಸಿದರು ಮತ್ತು  ಅವರಿಗೆ ಸೂಕ್ತ ವಸತಿ ನೀಡುವ ಕುರಿತು ಜಿಲ್ಲಾ ಡಳಿತದ ಗಮನಕ್ಕೆ ತಂದಿರುವುದಾಗಿ ಇದಕ್ಕೆ ಸುಕ್ತ ಪರಿಹಾರವನ್ನು ಕಂಡುಕೊಳ್ಳಲಾಗುವುದು ಎಂದರು. ಅಲ್ಲದೇ ಮಹಿಳೆಯರಿಗೆ ಪ್ರಸ್ತುತ ವಸತಿ ಶಾಲೆಯ ಒಂದು ಪಾರ್ಶ್ವದಲ್ಲಿ  ರಾತ್ರಿಹೊತ್ತು ತಂಗಲು ತಾತ್ಕಾಲಿಕ  ವ್ಯವಸ್ಥೆ ಮಾಡಿಕೊಡುವುದಾಗಿ ತಿಳಿಸಿದರು. ಮುಂದೆ ಪುರಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸ ಲಾಗಿರುವ 35 ಸೆಂಟ್ಸ್‌  ಜಾಗದಲ್ಲಿ ವಲಸೆ ಕಾರ್ಮಿಕರಿಗಾಗಿಯೇ ಕಟ್ಟಡ ನಿರ್ಮಿಸುವ ಮೂಲಕ ಅವರಿಗೆ ವಸತಿಯನ್ನು ಕಲ್ಪಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಕುಂದಾಪುರ ಠಾಣಾ ಎಸ್‌.ಇ. ನಾಸಿರ್‌ ಹುಸೇನ್‌,  ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ್‌, ಕಾರ್ಮಿಕ ನಿರೀಕ್ಷಕ ಸತ್ಯನಾರಾಯಣ ಬಿ.ಎಸ್‌., ಸಮಾಜ ಸೇವಕ ಹುಸೇನ್‌ ಹೈಕಾಡಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

11

Manipal: ಡಂಪಿಂಗ್‌ ಯಾರ್ಡ್‌ ಆದ ಮಣ್ಣಪಳ್ಳ!

10

Udupi: ಒಂದೇ ವೃತ್ತ; ಪೊಲೀಸ್‌ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ

7

Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್‌; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

1-wqewqeqwe

Cardiac arrest: ಗುಜರಾತ್‌ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

naksal (2)

Chhattisgarh: ನಕ್ಸಲರು ಇಟ್ಟಿದ್ದ ಐಇಡಿ ಸ್ಫೋ*ಟ, ವ್ಯಕ್ತಿ ಸಾ*ವು

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.