Manipal ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ
Team Udayavani, Jul 2, 2024, 1:38 AM IST
ಮಣಿಪಾಲ: ವ್ಯಕ್ತಿಯೊಬ್ಬರ ಎಸ್ಬಿ ಖಾತೆಯಿಂದ ಮತ್ತೊಂದು ಖಾತೆಗೆ ಲಕ್ಷಾಂತರ ರೂ. ವರ್ಗಾವಣೆಗೊಂಡ ಘಟನೆ ನಡೆದಿದೆ.
ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿ ನಾಥ್ ಅವರು ಮಣಿಪಾಲದ ಐಸಿಐಸಿಐ ಬ್ಯಾಂಕ್ನಲ್ಲಿ ಎಸ್ಬಿ ಖಾತೆ ಹೊಂದಿದ್ದರು. ಅದರಿಂದ ಜ. 27ರಿಂದ ಜೂ.20ರ ವರೆಗೆ ಸುಮಾರು 2,08,004ರೂ.ಗಳು ಸುಮಾರು 177 ಸಲ ಬೇರೆ ಬೇರೆ ಕಂತು ಗಳಲ್ಲಿ ಗೂಗಲ್ ಪೇ ಎಂಬ ಖಾತೆಗೆ ವರ್ಗಾವಣೆಯಾಗಿದೆ.
ಈ ಬಗ್ಗೆ ಸಂಬಂಧ ಪಟ್ಟ ಬ್ಯಾಂಕ್ಗೆ ಹೋಗಿ ಅಧಿಕಾರಿಗಳನ್ನು ವಿಚಾರಿಸಿದಾಗ ಒಟಿಪಿ-ಡೆಬಿಟ್ ಕಾರ್ಡ್ ಮೂಲಕ ಹಣ ವರ್ಗಾ ವಣೆಯಾಗಿದೆ ಎಂದು ತಿಳಿಸಿದ್ದಾರೆ.
ಆದರೆ ಡಾ| ಗೋಪಿನಾಥ್ ಅವರಿಗೆ ವರ್ಗಾವಣೆಗೆ ಸಂಬಂಧಪಟ್ಟ ಯಾವುದೇ ಒಟಿಪಿ ಅಥವಾ ಸಂದೇಶ ಗಳು ಬಂದಿಲ್ಲ. ಯಾರೋ ಅಪರಿಚಿತ ವ್ಯಕ್ತಿ ಅವರ ಗಮನಕ್ಕೆ ಬಾರದೆ ಅವರ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾಯಿಸಿದ್ದಾರೆ ಎಂದು ಅವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.