ಅಟಲ್ ಉತ್ಸವಕ್ಕೆ ಕೇಂದ್ರ ಸಚಿವ ಅನುರಾಗ್ ಠಾಕೂರ್
ಡಿ. 24: ಉಡುಪಿಯಲ್ಲಿ ರಾಷ್ಟ್ರ ಮಟ್ಟದ ಅಟಲ್ ಪ್ರೊ ಕಬಡ್ಡಿ ಪಂದ್ಯ
Team Udayavani, Dec 21, 2022, 6:10 AM IST
ಮಣಿಪಾಲ : ಬಿಜೆಪಿ ನಗರ, ಗ್ರಾಮಾಂತರ ಸಮಿತಿ ವತಿಯಿಂದ ನಗರದ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಡಿ. 24ರಂದು ಸಂಜೆ 5ರಿಂದ ಆಯೋಜಿಸಿರುವ ಅಟಲ್ ಉತ್ಸವ – ಹೊನಲು ಬೆಳಕಿನ ರಾಷ್ಟ್ರ ಮಟ್ಟದ ಅಟಲ್ ಟ್ರೋಫಿ ಪ್ರೊ ಕಬಡ್ಡಿ ಪಂದ್ಯಕೂಟದಲ್ಲಿ ಕೇಂದ್ರ ಕ್ರೀಡಾ, ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಭಾಗವಹಿಸಲಿದ್ದಾರೆ ಎಂದು ಶಾಸಕ ಕೆ. ರಘುಪತಿ ಭಟ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರಾತ್ರಿ 7ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಚಿವ ಅನುರಾಗ್ ಠಾಕೂರ್ ಉದ್ಘಾಟಿಸಲಿದ್ದಾರೆ. ರಾಜ್ಯ ಕ್ರೀಡಾ ಸಚಿವ ಡಾ| ಕೆ.ಸಿ. ನಾರಾಯಣ ಗೌಡ ಪಂದ್ಯಾಟಕ್ಕೆ ಚಾಲನೆ ನೀಡುವರು. ಕರ್ನಾಟಕ ಸಹಿತ ಮಹಾರಾಷ್ಟ್ರ, ಕೇರಳ, ದಿಲ್ಲಿ, ಹರಿಯಾಣ, ತಮಿಳುನಾಡು ರಾಜ್ಯಗಳ ಒಟ್ಟು 12 ತಂಡಗಳು ಪಂದ್ಯದಲ್ಲಿ ಭಾಗವಹಿಸಲಿವೆ. ವಿಜೇತರಿಗೆ ಪ್ರಥಮ 1 ಲಕ್ಷ ರೂ., ದ್ವಿತೀಯ 75 ಸಾವಿರ ರೂ., ತೃತೀಯ 50 ಸಾವಿರ ರೂ., ಚತುರ್ಥ 25 ಸಾವಿರ ರೂ. ಬಹುಮಾನ ನೀಡಲಾಗುವುದು. 15 ಸಾವಿರ ಪ್ರೇಕ್ಷಕರಿಗೆ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರಾದ ಎಸ್. ಅಂಗಾರ, ವಿ. ಸುನಿಲ್ ಕುಮಾರ್, ಕೋಟ ಶ್ರೀನಿವಾಸ್ ಪೂಜಾರಿ ಮೊದಲಾದವರು ಭಾಗವಹಿಸಲಿದ್ದಾರೆ.
ಬೂತ್ ಸಂಗಮ: ಬಿಎಸ್‌ವೈ ಉಪಸ್ಥಿತಿ
ವಾಜಪೇಯಿ ಅವರ 98ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಸುಶಾಸನ ದಿವಸ್ ಆಚರಿಸಲಾಗುತ್ತಿದೆ. ಡಿ. 25ರಂದು ಸಂಜೆ 4ಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರದ 226 ಮತಗಟ್ಟೆಗಳ ಅಧ್ಯಕ್ಷರ ಸಮಾವೇಶ “ಬೂತ್ ಸಂಗಮ’ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತಿಯಲ್ಲಿ ನಡೆಯಲಿದೆ. ಬೂತ್ ಮಟ್ಟದ ಪ್ರತಿನಿಧಿಗಳೇ ವೇದಿಕೆಯಲ್ಲಿ ಪ್ರಮುಖರಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ದಿಕ್ಸೂಚಿ ಭಾಷಣ, ರಾಜ್ಯ ಸಂಘಟನ ಪ್ರಧಾನ ಕಾರ್ಯದರ್ಶಿ ರಾಜೇಶ್ ಸಂಘಟನಾತ್ಮಕ ಮಾರ್ಗದರ್ಶನ ಕೊಡಲಿದ್ದಾರೆ. ಕಾರ್ಯಕ್ರಮದ ಒಂದು ಭಾಗವಾಗಿ ಜ. 7 ಮತ್ತು 8ರಂದು ಯುವ ಸಂಗಮ, ಮಾತೃ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದರು.
ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಷ್ಟ್ರೀಯ ಹಿಂದುಳಿದ ವರ್ಗ ಮೋರ್ಚಾ ಪ್ರ.ಕಾರ್ಯದರ್ಶಿ ಯಶಪಾಲ್ ಸುವರ್ಣ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮನೋಹರ ಕಲ್ಮಾಡಿ, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಸ್ಥಾಯೀ ಸಮಿತಿ ಅಧ್ಯಕ್ಷ ಬಾಲಕೃಷ್ಣ ಡಿ. ಶೆಟ್ಟಿ, ಮುಖಂಡರಾದ ದಿನಕರ ಬಾಬು, ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ, ಉಮೇಶ್ ನಾಯ್ಕ, ಗಿರೀಶ್ ಅಂಚನ್, ಗಣೇಶ್ ಕುಲಾಲ್, ಸಚಿನ್ ಪೂಜಾರಿ, ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು.
ಅನ್ನದಾತ ಸುಖೀಭವಃ ವಿಶೇಷ ಸಂಚಿಕೆ ಬಿಡುಗಡೆ
ಬೂತ್ ಸಂಗಮದಲ್ಲಿ ನಗರ ಬಿಜೆಪಿ ಪ್ರಕಟಿಸುತ್ತಿರುವ ಸಮಗ್ರ ಕೃಷಿ ಮಾಹಿತಿ, ರಾಜ್ಯ ಮತ್ತು ಕೇಂದ್ರ ಸರಕಾರಗಳ ರೈತ ಪರ ಯೋಜನೆಗಳ ಕೈಪಿಡಿ “ಅನ್ನದಾತ ಸುಖೀಭವಃ’ ವಿಶೇಷ ಸಂಚಿಕೆಯನ್ನು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಬಿಡುಗಡೆಗೊಳಿಸಲಿದ್ದಾರೆ. ಕಾರ್ಯಕ್ರಮದ ಅನಂತರ ಗಾಯಕ ವಿಜಯ ಪ್ರಕಾಶ್ ನೇತೃತ್ವದ ತಂಡದಿಂದ ಸಂಗೀತೋತ್ಸವ ಆಯೋಜಿಸಲಾಗಿದೆ. ಗಾಯಕಿಯರಾದ ಅನುರಾಧಾ, ಐಶ್ವರ್ಯಾ ಭಾಗವಹಿಸಲಿ¨ªಾರೆ.
ಕ್ರೀಡಾ ವಿಜ್ಞಾನ ಕೇಂದ್ರ ಉದ್ಘಾಟನೆ
ಅಜ್ಜರಕಾಡು ಕ್ರೀಡಾಂಗಣದಲ್ಲಿ 2 ಕೋ. ರೂ. ವೆಚ್ಚದಲ್ಲಿ ರೂಪುಗೊಂಡ ಕ್ರೀಡಾ ವಿಜ್ಞಾನ ಕೇಂದ್ರದ ಉದ್ಘಾಟನೆಯನ್ನು ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಡಿ. 24ರ ಸಂಜೆ 6 ಗಂಟೆಗೆ ನೆರವೇರಿಸಲಿದ್ದಾರೆ ಎಂದು ಶಾಸಕ ಭಟ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.