ಸಚಿವರ ಭರವಸೆ: ಮುಷ್ಕರ ಕೈಬಿಟ್ಟ ಗ್ರಾ. ಪಂ. ನೌಕರರು
Team Udayavani, Oct 11, 2024, 2:27 PM IST
ಮಣಿಪಾಲ: ಗ್ರಾ. ಪಂ.ಗಳ ಪಿಡಿಒ, ಕಾರ್ಯದರ್ಶಿ, ಎಸ್‌ಡಿಎ ಮತ್ತು ಪಂಚ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಮುಷ್ಕರ ನಡೆಸಿದ್ದು, ಬೆಂಗಳೂರಿನಲ್ಲಿ ರಾಜ್ಯ ಮುಖಂಡರು ಮತ್ತು ಸಚಿವರ ಮಾತುಕತೆ ಅನಂತರ ಮುಷ್ಕರವನ್ನು ಹಿಂದೆಗೆದುಕೊಂಡಿದ್ದಾರೆ.
ಜಿಲ್ಲೆಯ ಎಲ್ಲ ಭಾಗದಿಂದ ಪಿಡಿಒ, ಎಸ್‌ಡಿಎ, ಕಾರ್ಯದರ್ಶಿ ಸಹಿತ ಗ್ರಾ. ಪಂ. ನೌಕರರು ಮುಷ್ಕರದಲ್ಲಿ ಭಾಗವಹಿಸಿದ್ದರು. ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾ. ಪಂ. ಅಧಿಕಾರಿ, ನೌಕರರ ಮುಖಂಡರ ಜತೆಗೆ ಮಧ್ಯಾಹ್ನ ಮಾತುಕತೆ ನಡೆಸಿ ಜ್ಯೇಷ್ಠತಾ ಪಟ್ಟಿ ಪ್ರಕ್ರಿಯೆ, ಭಡ್ತಿ, ವೇತನ ಪರಿಷ್ಕರಣೆ ಸಹಿತ ಮೊದಲಾದ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದಿಸಿದ್ದು, ಹಂತಹಂತವಾಗಿ ಸಮಸ್ಯೆಗಳ ಪರಿಹರಿಸುವ ಬಗ್ಗೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಸ್ಥಗಿತಗೊಳಿಸಿರುವುದಾಗಿ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.