ಲಿಂಗತ್ವ ಅಲ್ಪಸಂಖ್ಯಾಕರಿಗೆ ವಿವಿಧ ಸೌಲಭ್ಯ:ಜಿಲ್ಲಾಧಿಕಾರಿ

ಲಿಂಗತ್ವ ಅಲ್ಪ ಸಂಖ್ಯಾಕರ ಅಭಿವೃದ್ಧಿ ಸಭೆ

Team Udayavani, Oct 5, 2019, 5:56 AM IST

5440020710550310UDPS3

ಉಡುಪಿ: ಜಿಲ್ಲೆಯಲ್ಲಿನ ಲಿಂಗತ್ವ ಅಲ್ಪಸಂಖ್ಯಾಕರಿಗೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ನೆರವು ನೀಡುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್‌ ಹೇಳಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾಕರ ಅಭಿವೃದ್ಧಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿನ ಲಿಂಗತ್ವ ಅಲ್ಪಸಂಖ್ಯಾಕರಲ್ಲಿ ಉದ್ಯೋಗ ಮತ್ತು ಸ್ವ ಉದ್ಯೋಗ ಮಾಡಲು ಇಚ್ಚಿಸುವವರು ಒಂದು ವಾರದ ಒಳಗೆ ತಮ್ಮ ಪಟ್ಟಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ನೀಡಬೇಕು. ಉದ್ಯೋಗ ಮತ್ತು ಸ್ವ-ಉದ್ಯೋಗ ಮಾಡಲು ಅವಕಾಶಗಳನ್ನು ಕಲ್ಪಿಸುವುದು. ಪಂಚಾಯತ್‌ ವ್ಯಾಪ್ತಿಯಲ್ಲಿ ಮನೆ ನಿವೇಶನ ಅಗತ್ಯವಿರುವವರು ಪಟ್ಟಿಯನ್ನು ನೀಡುವಂತೆ ತಿಳಿಸಿದರು. ಈಗಾಗಲೇ ಜಿ.ಪಂ. ನಿಂದ ವಸತಿ ರಹಿತರು ಮತ್ತು ನಿವೇಶನ ರಹಿತರ ಪಟ್ಟಿ ಸಿದ್ಧಪಡಿಸಿದ್ದು, 75 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಇನ್ನೂ 75 ಎಕರೆ ಜಾಗ ಗುರುತಿಸುವ ಕಾರ್ಯ ನಡೆಯಲಿದ್ದು, ಪಟ್ಟಿ ನೀಡಿದಲ್ಲಿ ವಿಶೇಷ ವರ್ಗದಲ್ಲಿ ಅವಕಾಶ ನೀಡಲಾಗುವುದು ಎಂದರು.

ತೊಂದರೆ ನೀಡದಿರಿ
ಲಿಂಗತ್ವ ಅಲ್ಪ ಸಂಖ್ಯಾಕರು ಮುಖ್ಯವಾಹಿನಿಯಲ್ಲಿ ಬಾಳಲು ಜಿಲ್ಲಾಡಳಿತದಿಂದ ಎಲ್ಲ ರೀತಿಯ ಅಗತ್ಯ ನೆರವು ನೀಡಲಾಗುವುದು. ಜಿಲ್ಲೆಯ ಟೋಲ್‌ಗ‌ಳಲ್ಲಿ ಅನಗತ್ಯವಾಗಿ ಸಾರ್ವಜನಿಕರಿಗೆ ಹಾಗೂ ವಾಹನಗಳಿಗೆ ತೊಂದರೆ ನೀಡುವ ಲಿಂಗತ್ವ ಅಲ್ಪಸಂಖ್ಯಾಂಕರ ವಿರುದ್ದ ಕಠಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಂತವರ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ತಿಳಿಸಿದರು. ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಲಿಂಗತ್ವ ಅಲ್ಪ ಸಂಖ್ಯಾಕರಿಂದ ತೊಂದರೆಯಾದರೆ ಇಡೀ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತದೆ. ಆ ರೀತಿ ಆಗದಂತೆ ಸಮಾಜದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ಒಳ್ಳೆಯ ಭಾವನೆ ಬರುವ ರೀತಿಯಲ್ಲಿ ವರ್ತಿಸಬೇಕು. ಜಿಲ್ಲೆಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾಕರ ಸರ್ವೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ 2019-20 ರಲ್ಲಿ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾಕರ ಪುರ್ನವಸತಿ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಲಿಂಗತ್ವ ಅಲ್ಪ ಸಂಖ್ಯಾಕರ ಆಯ್ಕೆ ಪ್ರಕ್ರಿಯೆ ನಡೆಯಿತು.

ಶಾಸಕ ರಘುಪತಿ ಭಟ್‌ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾಕರು ಸಮಾಜದಲ್ಲಿ ಹೊಂದಿಕೊಂಡು ಹೋಗಬೇಕು. ಹೊರ ಜಿಲ್ಲೆಯಿಂದ ಬಂದು ಇಲ್ಲಿನ ಟೋಲ್‌ಗ‌ಳಲ್ಲಿ ಸಮಸ್ಯೆ ಉಂಟು ಮಾಡುವ ಹಾಗೂ ಅನೈತಿಕ ಚಟುವಟಿಕೆ ನಡೆಸುವವರ ಕುರಿತು ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.

ಸಭೆಯಲ್ಲಿ ಬೆಂಗಳೂರಿನ ಪಯಣ ಸಂಘಟನೆಯ ಚಾಂದಿನಿ, ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರ ಪರವಾಗಿ ಸಂಜೀವ ವಂಡ್ಸೆ ಮತ್ತಿತರರು ಸಮುದಾಯದ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹೊÉàಟ್‌, ಎಎಸ್‌ಪಿ ಕುಮಾರ ಚಂದ್ರ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್‌ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಗುರುತು ಚೀಟಿ
ಲಿಂಗತ್ವ ಅಲ್ಪಸಂಖ್ಯಾಕರ ಬಗ್ಗೆ ಸಮಾಜದಲ್ಲಿ ಮತ್ತು ಪೋಷಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಹಾಗೂ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಪೊಲೀಸ್‌ ಇಲಾಖೆಗೆ ಈ ಬಗ್ಗೆ ಪ್ರತ್ಯೇಕ ಕಾರ್ಯಾಗಾರ ನಡೆಸ‌ಲಾಗುವುದು. ಮೈತ್ರಿ ಯೋಜನೆಯಲ್ಲಿ ಎಲ್ಲ ಲಿಂಗತ್ವ ಅಲ್ಪ ಸಂಖ್ಯಾಕರ ಪ್ರಯೋಜನ ಪಡೆಯುವಲ್ಲಿ ತಹಶೀಲ್ದಾರ್‌ಗಳು ಗಮನಹರಿಸಿ ಶೀಘ್ರದಲ್ಲಿ ಅವರಿಗೆ ಗುರುತು ಚೀಟಿ ವಿತರಿಸುವಂತೆ ಸೂಚಿಸಿದರು.

ಟಾಪ್ ನ್ಯೂಸ್

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.