ನಿಗದಿಗೊಂಡಿರುವ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯಲು ಅವಕಾಶ ಕಲ್ಪಿಸಿ:ರಘುಪತಿ ಭಟ್ ಆಗ್ರಹ  


Team Udayavani, Apr 21, 2021, 5:57 PM IST

ನಿಗದಿಗೊಂಡಿರುವ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯಲು ಅವಕಾಶ ಕಲ್ಪಿಸಿ : ರಘುಪತಿ ಆಗ್ರಹ   

ಉಡುಪಿ : ನೈಟ್ ಕರ್ಫ್ಯೂ ಹಾಗೂ ವಾರಾಂತ್ಯದ ಲಾಕ್ ಡೌನ್ ನಿಂದ ಈಗಾಗಲೇ ನಿಗದಿಯಾಗಿರುವ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ನಿರ್ದಿಷ್ಟ ಜನ ನಿಗದಿಪಡಿಸಿ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸಬೇಕೆಂದು ಶಾಸಕ ರಘುಪತಿ ಭಟ್ ಆಗ್ರಹಿಸಿದ್ದಾರೆ.

ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಕೋವಿಡ್ – 19 2ನೇ ಅಲೆ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಿದೆ. ಈ ಹೊಸ ಮಾರ್ಗಸೂಚಿಯಂತೆ ರಾಜ್ಯದಾದ್ಯಂತ ಶುಕ್ರವಾರ ರಾತ್ರಿ 9:00 ರಿಂದ ಸೋಮವಾರ ಬೆಳಿಗ್ಗೆ 6:00 ವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿರುವುದರಿಂದ ಈ ನಡುವಿನಲ್ಲಿ ಬರುವ ದಿನಗಳಲ್ಲಿ ಅದರಲ್ಲೂ ಭಾನುವಾರ ಮದುವೆ ಸೇರಿದಂತೆ ಹೆಚ್ಚಿನ ಇನ್ನಿತರ ಕಾರ್ಯಕ್ರಮಗಳು ಈಗಾಗಲೇ ನಿಗದಿಗೊಂಡಿರುತ್ತದೆ. ಈ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸುವಂತೆ ಶಾಸಕ ರಘುಪತಿ ಭಟ್ ಅವರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಮದುವೆ ಸೇರಿದಂತೆ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ನಿಗಧಿಗೊಂಡಿರುವುದರಿಂದ ಈ ಕಾರ್ಯಕ್ರಮಗಳು ಸ್ಥಗಿತಗೊಂಡರೆ ಜನ ಸಮಸ್ಯೆಗೊಳಗಾಗುತ್ತಾರೆ. ಆದ್ದರಿಂದ ಜಿಲ್ಲಾಡಳಿತವು ಕೋವಿಡ್ – 19 ಮುಂಜಾಗ್ರತಾ ಕ್ರಮಗಳೊಂದಿಗೆ 50 ಜನ ಮೀರದಂತೆ ಜನ ನಿಗದಿಪಡಿಸಿ ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಪಾಸನ್ನು ಪಡೆಯುವಂತೆ ಸೂಚಿಸಿ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Geetha-yajna-KanchiShree

Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ

MGM–Udupi-1

Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.