ವಿಧಾನಸೌಧ ಮುಂಭಾಗ ನಾರಾಯಣ ಗುರುಗಳ ಪುತ್ಥಳಿ ಸ್ಥಾಪನೆಗೆ ಶಾಸಕ ಯಶಪಾಲ್ ಸುವರ್ಣ ಮನವಿ
Team Udayavani, Aug 18, 2024, 2:58 PM IST
ಬೆಂಗಳೂರು/ ಉಡುಪಿ: ವಿಧಾನಸೌಧದ ಮುಂಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಿದ, ಸಮಾಜದಲ್ಲಿ ಜಾತಿ ಮತ ಭೇದವನ್ನು ವಿರೋಧಿಸಿ ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸಿದ ಮಹಾನ್ ಚೇತನ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಸರ್ವರಿಗೂ ಸಾರ್ವಕಾಲಿಕ ಅದರ್ಶವಾಗಿದೆ.
ಶಿಕ್ಷಣ, ಉದ್ಯೋಗ ಮತ್ತು ಸಂಘಟನೆಯ ಮೂಲಕ ಸಮಾಜದ ಅಭಿವೃದ್ಧಿಯ ಆಶಯ ಹೊತ್ತು, ದಮನಿತ ಸಮುದಾಯಗಳ ಧ್ವನಿಯಾಗಿ ಮೂಢನಂಬಿಕೆಗಳ ವಿರುದ್ಧ ಜಾಗೃತಿ ಮೂಡಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಇಂದಿನ ಸಮಾಜಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿವಿಧ ದಾರ್ಶನಿಕ ಮಹನೀಯರ ಪುತ್ಥಳಿಯ ಜೊತೆ ವಿಧಾನಸೌಧದಲ್ಲಿ ನಾರಾಯಣ ಗುರುಗಳ ಪುತ್ಥಳಿ ನಿರ್ಮಿಸಿ ಗೌರವ ಸಲ್ಲಿಸಬೇಕಾಗಿದೆ ಎಂದು ಶಾಸಕರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.