ಮೊವಾಡಿ – ನಾಡ ಸೇತುವೆ: 2020ರ ಮೇ ಒಳಗೆ ಪೂರ್ಣ
Team Udayavani, Oct 22, 2019, 5:55 AM IST
ಕುಂದಾಪುರ: ನಾಡದಿಂದ ತ್ರಾಸಿಗೆ ಸಂಪರ್ಕಿಸುವ ಮೊವಾಡಿ ಬಳಿ ಸೌಪರ್ಣಿಕಾ ನದಿಗೆ ನಿರ್ಮಿಸಲಾಗುತ್ತಿರುವ ಸೇತುವೆ ಕಾಮಗಾರಿ ಭರದಿಂದ ಸಾಗಿದ್ದು, ಮುಂದಿನ ವರ್ಷದ ಮೇಯೊಳಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ದಿಂದ ಮಂಜೂರಾದ 9.28 ಕೋ.ರೂ. ಅನುದಾನದಲ್ಲಿ ಕಾಮಗಾರಿ ನಡೆಯುತ್ತಿದೆ.
ತ್ರಾಸಿ ಹಾಗೂ ನಾಡ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆಗೆ ಕಳೆದ ವರ್ಷ ಶಿಲಾನ್ಯಾಸ ನೆರವೇರಿಸಿದ್ದರೂ, ಕಾಮಗಾರಿ ಈ ವರ್ಷದ ಮಾರ್ಚ್‌ನಲ್ಲಿ ಆರಂಭಗೊಂಡಿತ್ತು. ಮಳೆ ಹಾಗೂ ಮರಳು ಸಮಸ್ಯೆಯಿಂದಾಗಿ ಕಾಮಗಾರಿಗೆ ಸ್ವಲ್ಪ ಮಟ್ಟಿಗೆ ತೊಡಕಾಗಿದ್ದರೂ, ಈಗ ಮತ್ತೆ ಕಾಮಗಾರಿ ಆರಂಭಗೊಂಡಿದೆ. 2020 ರ ಮೇಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಗಡುವು ನೀಡಲಾಗಿದೆ.
150 ಮೀಟರ್ ಉದ್ದ
ಸೌಪರ್ಣಿಕಾ ನದಿಗೆ ಅಡ್ಡಲಾಗಿ ನಿರ್ಮಿಸುವ ಈ ಸೇತುವೆಯ ಉದ್ದ 150 ಮೀ. ಇರಲಿದ್ದು, 8.5 ಮೀ. ಅಗಲ, ಫುಟ್‌ಪಾತ್ ಸೇರಿದರೆ 10.5 ಮೀ. ಅಗಲವಿರಲಿದೆ. ಈ ಕಾಮಗಾರಿಗೆ ಕೋಣಿಯ ಸೈಂಟ್ ಆಂಥೋನಿ ಕನ್ಸಸ್ಟ್ರಕ್ಷನ್ಸ್ ಗುತ್ತಿಗೆದಾರರಾಗಿದ್ದಾರೆ. ಉಡುಪಿ, ಕಾರ್ಕಳ, ಈ ಮೊವಾಡಿ – ನಾಡ ಸೇತುವೆ, ಭಟ್ಕಳದಲ್ಲಿ ಒಟ್ಟು 9 ಸೇತುವೆಗಳಿಗೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ 42.57 ಕೋ.ರೂ. ಮಂಜೂರಾಗಿದ್ದು, ಈ ಎಲ್ಲ ಸೇತುವೆ ಕಾಮಗಾರಿ ಸೈಂಟ್ ಆಂಥೋನಿ ಕನ್‌ಸ್ಟ್ರಕ್ಷನ್ಸ್‌ಗೆ ನೀಡಲಾಗಿದೆ.
ರಸ್ತೆ ದುರಸ್ತಿಗೆ ಮನವಿ
ಈ ಸೇತುವೆ ಕಾಮಗಾರಿ ಮುಗಿದ ಬಳಿಕ ಇದನ್ನು ಸಂಪರ್ಕಿಸುವ ರಸ್ತೆಗಳು ಹದಗೆಟ್ಟು ಹೋಗಿದ್ದು, ಅದನ್ನು ಕೂಡ ದುರಸ್ತಿ ಮಾಡಿದರೆ ಅನುಕೂಲವಾಗಲಿದೆ. ಸುಮಾರು 300 ಕ್ಕೂ ಹೆಚ್ಚು ಮನೆಗಳ ಜನ ಈ ಸೇತುವೆಯನ್ನೇ ಅವಲಂಬಿಸಿದ್ದಾರೆ. ಹಾಗಾಗಿ ಸಂಪರ್ಕ ರಸ್ತೆಯ ಡಾಮರೀಕರಣ ಆಗಲಿ ಎನ್ನುವುದು ಸ್ಥಳೀಯರ ಆಗ್ರಹ.
ಹತ್ತಿರದ ಮಾರ್ಗ
ನಾಡ, ಹಡವು, ಮೊವಾಡಿಯ ಜನರಿಗೆ ತ್ರಾಸಿಗೆ ಬಂದು ಕುಂದಾಪುರಕ್ಕೆ ತೆರಳಲು ಈ ಸೇತುವೆಯಾದರೆ ಬಹಳಷ್ಟು ಅನುಕೂಲವಾಗಲಿದೆ. ಇದಲ್ಲದೆ ಮೊವಾಡಿಯ ನಿವಾಸಿಗಳಿಗೆ ತ್ರಾಸಿ ಅಥವಾ ಮುಳ್ಳಿಕಟ್ಟೆ ಪೇಟೆಗೆ ಬರಬೇಕಾದರೆ ಕನಿಷ್ಠ 3 ಕಿ.ಮೀ. ದೂರವಿದೆ. ಆದರೆ ಸೇತುವೆಯಾದರೆ ನಾಡ ಪೇಟೆಗಿರುವ ಅಂತರ ಕೇವಲ 1 ಕಿ.ಮೀ. ಮಾತ್ರ. ಮೊವಾಡಿಯಲ್ಲಿ ಕ್ರಿಶ್ಚಿಯನ್ ಸಮುದಾಯದವರು ಹೆಚ್ಚಿರುವುದರಿಂದ ಪಡುಕೋಣೆ ಇಗರ್ಜಿಗೆ ಹೋಗಲು ಕೂಡ ಇದು ಹತ್ತಿರದ ಮಾರ್ಗವಾಗಿದೆ.
ಬಹು ವರ್ಷದ ಬೇಡಿಕೆ
ಮೊವಾಡಿಯಿಂದ ನಾಡ, ಹಡವು, ಪಡುಕೋಣೆ ಭಾಗಕ್ಕೆ ತೆರಳುವ ಜನರ ಬಹು ಕಾಲದ ಬೇಡಿಕೆಯಾಗಿತ್ತು. ಈಗ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಇಷ್ಟೊತ್ತಿಗಾಗಲೇ ಕಾಮಗಾರಿ ಮುಗಿಯಬೇಕಿತ್ತು. ಈ ಭಾಗದ ಸಾವಿರಾರು ಮಂದಿಗೆ ಈ ಸೇತುವೆಯಾದರೆ ಅನುಕೂಲವಾಗಲಿದೆ. ಆದಷ್ಟು ಬೇಗ ಕಾಮಗಾರಿ ಮುಗಿಸಿ, ಸಂಚಾರಕ್ಕೆ ಮುಕ್ತವಾಗಲಿ.
-ಅನಂತ್ ಮೊವಾಡಿ,
ಮಾಜಿ ಜಿ.ಪಂ.ಸದಸ್ಯ,ಸ್ಥಳೀಯರು
ಮುಂದಿನ ವರ್ಷ ಪೂರ್ಣ
ಈಗಾಗಲೇ ಕಾಮಗಾರಿ ನಡೆಯುತ್ತಿದೆ. ಈ ಬಾರಿ ಮಳೆ ಪ್ರಮಾಣ ಹೆಚ್ಚಿದ್ದು, ನದಿಯಲ್ಲಿ ನೀರು ಕೂಡ ಹೆಚ್ಚಿದ್ದುದರಿಂದ ಕಾಮಗಾರಿ ಸ್ವಲ್ಪ ವಿಳಂಬವಾಗಿದೆ. ಆದರೆ ಮುಂದಿನ ವರ್ಷದ ಮೇಯೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಈಗಾಗಲೇ ಶೇ. 50 ಭಾಗದಷ್ಟು ಕಾಮಗಾರಿ ಆಗಿದೆ. 150 ಮೀ. ಉದ್ದದ ಸೇತುವೆ ಇದಾಗಿದ್ದು, ಒಟ್ಟು10.5 ಮೀ. ಅಗಲವಿರಲಿದೆ. ಎರಡೂ ಬದಿ ತಲಾ 70 ಮೀ. ವರೆಗೆ ರಸ್ತೆ ಡಾಮರೀಕರಣ ಮಾಡಿಕೊಡಲಾಗುವುದು. ಅಲ್ಲಿಂದ ಮುಂದಕ್ಕೆ ನಮ್ಮ ರಸ್ತೆ -ನಮ್ಮ ಗ್ರಾಮ ಯೋಜನೆಯಡಿ ರಸ್ತೆ ಡಾಮರೀಕರಣ ಮಾಡಬಹುದು.
-ಮಂಜುನಾಥ್,
ಎಕ್ಸಿಕ್ಯೂಟಿವ್ ಇಂಜಿನಿಯರ್,ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.