ಕೆಸರುಮಯವಾದ ಮೊಗೆಬೆಟ್ಟು ರಸ್ತೆ: ಅಪಾಯದ ನಡುವೆ ವಿದ್ಯಾರ್ಥಿಗಳ ಯಾನ
Team Udayavani, Jul 25, 2017, 8:50 AM IST
ತೆಕ್ಕಟ್ಟೆ (ಮೊಗೆಬೆಟ್ಟು ): ಇಲ್ಲಿನ ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗೆಬೆಟ್ಟಿನಿಂದ ಕೆಳಬೆಟ್ಟಿಗೆ ಸಂಪರ್ಕ ಕಲ್ಪಿಸುವ ಸುಮಾರು ಒಂದೂವರೆ ಕಿಲೋ ಮೀಟರ್ ಮಣ್ಣು ರಸ್ತೆ ಸಂಪೂರ್ಣ ಕೆಸರು ಗದ್ದೆಯಾಗಿ ಪರಿವರ್ತನೆಗೊಂಡಿದ್ದು ನಿತ್ಯ ಸ್ಥಳೀಯ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಅಪಾಯದ ನಡುವೆ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ ಈ ಬಗ್ಗೆ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ದಿವ್ಯ ನಿರ್ಲಕ್ಷé
ಬೇಳೂರು ಗ್ರಾ. ಪಂ. ವ್ಯಾಪ್ತಿಯ ಹಲವು ರಸ್ತೆಗಳು ಡಾಮರೀಕರಣಗೊಂಡಿದ್ದರೂ ಕೂಡಾ ಜನ ವಸತಿ ಪ್ರದೇಶವಿರುವ ಈ ಭಾಗದಲ್ಲಿ ಮಾತ್ರ ಕಳೆದ ಹಲವು ದಶಕಗಳಿಂದಲೂ ಯಾವುದೇ ಅಭಿವೃದ್ಧಿ ಕಾಣದೆ ಸೊರಗುತ್ತಿದ್ದು ರಾತ್ರಿ ವೇಳೆಯಲ್ಲಿ ಸಂಚರಿಸುವ ವಾಹನ ಹಾಗೂ ಪಾದಾಚಾರಿಗಳು ಆತಂಕದ ನಡುವೆ ಸಂಚರಿಸಬೇಕಾದ ಪರಿಸ್ಥಿತಿ ಇದೆ . ಶತಮಾನದ ಈ ರಸ್ತೆಯ ಅಭಿವೃದ್ಧಿಯ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಕೂಡಾ ಯಾವುದೇ ರೀತಿಯ ಪ್ರಯೋಜನವಾಗದಿರುವುದು ವಾಸ್ತವದ ಸಂಗತಿ.
ಗಿಡನೆಟ್ಟು ಪ್ರತಿಭಟನೆ
ರಸ್ತೆಯ ಮಧ್ಯದಲ್ಲಿ ಸೃಷ್ಟಿಯಾದ ಅಪಾಯಕಾರಿ ಹೊಂಡದಲ್ಲಿ ಸ್ಥಳೀಯರು ಬಾಳೆಗಿಡ ಇನ್ನಿತರ ಕಾಟು ಗಿಡಗಂಟಿಗಳನ್ನು ನೆಡುವ ಮೂಲಕ ಸ್ಥಳೀಯಾಡಳಿತದ ವಿರುದ್ಧ ತೀವ್ರವಾಗಿ ಪ್ರತಿಭಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.