Monkey Disease: ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮುನ್ನೆಚ್ಚರಿಕೆ
Team Udayavani, Feb 25, 2024, 11:09 PM IST
ಉಡುಪಿ: ಮಂಗನ ಕಾಯಿಲೆ (ಕೆಎಫ್ಡಿ)ಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈಗಾಗಲೇ ಮಂಗನ ಕಾಯಿಲೆಯ ಒಂದು ಪ್ರಕರಣ ದೃಢಪಟ್ಟಿದ್ದು, ಶನಿವಾರ ಇನ್ನೆರಡು ಮಾದರಿಗಳು ಆರೋಗ್ಯ ಇಲಾಖೆಯ ಕೈಸೇರಿವೆ. ಇದರ ವರದಿ ಸೋಮವಾರ ಅಥವಾ ಮಂಗಳವಾರ ಬರುವ ಸಾಧ್ಯತೆಗಳಿವೆ.
ವಂಡ್ಸೆಯಲ್ಲಿ ಪ್ರಕರಣ ದೃಢಪಟ್ಟಿದ್ದು, ಬಾಧಿತ ವ್ಯಕ್ತಿಯಲ್ಲಿ ಚೇತರಿಕೆ ಕಂಡುಬಂದಿದೆ. ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾ ಗಲಿದ್ದಾರೆ. ರೋಗಲಕ್ಷಣ ಕಾಣಿಸಿಕೊಂಡ ಇನ್ನೆರಡು ಪ್ರಕರಣಗಳು ಕುಂದಾಪುರ ನಗರ ಹಾಗೂ ಅಜೆಕಾರು ವ್ಯಾಪ್ತಿಯದ್ದಾಗಿದೆ. ಈ ವ್ಯಾಪ್ತಿಯ ಎಲ್ಲ ಮನೆಗಳಲ್ಲಿಯೂ ಆರೋಗ್ಯಾ ಧಿಕಾರಿಗಳ ನೇತೃತ್ವದ ತಂಡದಿಂದ ತಪಾಸಣೆ ಕಾರ್ಯವನ್ನು ಚುರುಕುಗೊಳಿಸಲಾಗಿದೆ.
ಮುನ್ನೆಚ್ಚರಿಕೆಗಳು
ಜಿಲ್ಲೆಯಲ್ಲಿ ಸೋಂಕು ದೃಢಪಟ್ಟ ಹಾಗೂ ಕಾಣಿಸಿಕೊಂಡ ಪ್ರಕರಣಗಳು ಗ್ರಾಮೀಣ ಭಾಗದ್ದು. ಕಾಡಿಗೆ ಹೋಗುವವರು ಸುರಕ್ಷೆಗಾಗಿ ಮೈತುಂಬಾ ಬಟ್ಟೆ ಧರಿಸುವುದು ಉತ್ತಮ. ಕಾಡು, ತೋಟಗಳಿಗೆ ಕೆಲಸಕ್ಕೆ ಹೋಗುವವರು ಡಿಇಪಿಎ ಉಣ್ಣಿ ವಿಕರ್ಷಕ ತೈಲ ಲೇಪಿಸಿಕೊಳ್ಳಬೇಕು. ಕೆಲಸ ಮುಗಿಸಿ ಬಂದ ಬಳಿಕ ಬಿಸಿನೀರ ಸ್ನಾನ ಮಾಡಿ ಧರಿಸಿದ ಬಟ್ಟೆಗಳನ್ನು ಬಿಸಿನೀರಿನಲ್ಲಿ ನೆನೆಸಿ ಸೋಪು ಬಳಸಿ ಒಗೆಯಬೇಕು. ಕಾಡಿನಿಂದ ಮನೆಗೆ ಉಣ್ಣಿಗಳು ಬರದಂತೆ ತಡೆಗಟ್ಟಲು ಸುರಕ್ಷಾ ಕ್ರಮ ತೆಗೆದುಕೊಳ್ಳಬೇಕು. ದನಕರುಗಳ ಮೈಯಿಂದ ಉಣ್ಣಿಗಳನ್ನು ತೆಗೆದು ಉಣ್ಣಿ ನಿವಾರಕ ತೈಲವನ್ನು ಲೇಪಿಸಬೇಕು. ಉಣ್ಣಿ ನಿವಾರಕ ಔಷಧವನ್ನು ದನದ ಕೊಟ್ಟಿಗೆಯ ಒಳಗೆ ಮತ್ತು ಸುತ್ತಮುತ್ತಲೂ ಸಿಂಪಡಿಸಬೇಕು. ಮಂಗಗಳು ಸತ್ತಿರುವುದು ಕಂಡುಬಂದರೆ ಗ್ರಾ.ಪಂ., ಆರೋಗ್ಯ ಇಲಾಖೆಗೆ ಮಾಹಿತಿ ನೀಡುವುದು ಅತ್ಯಗತ್ಯ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ತರಗೆಲೆ ರಾಶಿ ಹಾಕದಿರಿ
ಒಣಗಿದ ಎಲೆಗಳು ಸೋಂಕಿತ ಉಣ್ಣೆಗಳನ್ನು ಹೊಂದಿರಬಹುದಾದ್ದರಿಂದ ಕಾಡಿನಿಂದ ಒಣಗಿದ ಎಲೆಗಳನ್ನು ತಂದು ಮನೆ ಅಥವಾ ಮನೆಯ ಸುತ್ತಮುತ್ತ ರಾಶಿ ಹಾಕಬಾರದು. ಕೈಗವಸು ಧರಿಸದೆ ಸತ್ತ ಪ್ರಾಣಿಗಳನ್ನು ಮುಟ್ಟಬಾರದು.
ಉಡುಪಿ ಜಿಲ್ಲೆಯ ವಿವಿಧೆಡೆ ತಪಾಸಣೆ
ಬೈಂದೂರು ತಾಲೂಕಿನ ವಂಡ್ಸೆಯನ್ನು ಕೇಂದ್ರವಾಗಿರಿಸಿಕೊಂಡು ಆರೋಗ್ಯ ಇಲಾಖೆ ತಪಾಸಣೆ ನಡೆಸುತ್ತಿದೆ. ರೋಗ ಲಕ್ಷಣ ಕಂಡುಬಂದವರ ಮನೆ ಪರಿಸರ, ಅಕ್ಕಪಕ್ಕದಲ್ಲಿ ತಪಾಸಣೆ ಕೈಗೊಳ್ಳಲಾಗಿದೆ. ಈ ಹಿಂದೆ ಮುನಿಯಾಲಿನಲ್ಲಿ ಎರಡು ಮಂಗಗಳು ಮೃತಪಟ್ಟಿದ್ದರೂ ಅದರ ವರದಿ ನೆಗೆಟಿವ್ ಬಂದ ಕಾರಣ ಯಾವುದೇ ಸಮಸ್ಯೆ ಉಂಟಾಗಲಿಲ್ಲ. ಆದರೂ ಗ್ರಾಮೀಣ ಭಾಗವನ್ನು ಕೇಂದ್ರೀಕರಿಸಿಕೊಂಡು ಜಿಲ್ಲೆಯಲ್ಲಿ ತಪಾಸಣೆ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.
ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪಾಸಿಟಿವ್ ಕಂಡುಬಂದಿರುವ ಮಹಿಳೆ ಈಗಾಗಲೇ ಗುಣಮುಖರಾಗಿದ್ದಾರೆ. ಇನ್ನೆರಡು ಪ್ರಕರಣಗಳ ವರದಿ ಇನ್ನಷ್ಟೇ ಬರಬೇಕಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧೆಡೆ ಆರೋಗ್ಯ ಇಲಾಖೆಯ ಸಿಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಗಳು ಸತ್ತಿರುವುದು ಕಂಡುಬಂದರೆ ಕೂಡಲೇ ಸ್ಥಳಿಯಾಡಳಿತ ಅಥವಾ ಆರೋಗ್ಯ ಇಲಾಖೆಯ ಗಮನಕ್ಕೆ ತಂದರೆ ಉತ್ತಮ.
-ಡಾ| ಪಿ.ಐ. ಗಡಾದ್, ಜಿಲ್ಲಾ ಆರೋಗ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.