ವಿದೇಶಿ ಪ್ರಜೆಗೆ ಮಂಗನ ಕಾಯಿಲೆ

Team Udayavani, Feb 3, 2019, 12:30 AM IST

monkey-fever-ud.jpg

ಉಡುಪಿ: ಫ್ರಾನ್ಸ್‌ನ ಮಹಿಳೆಯೋರ್ವರು ಮಂಗನ ಕಾಯಿಲೆ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಶನಿವಾರ ದಾಖಲಾಗಿದ್ದಾರೆ.

33 ವರ್ಷದ ಈಕೆ ಕೆಲವು ದಿನಗಳ ಹಿಂದೆ ಉ.ಕ. ಜಿಲ್ಲೆಯ ಯಾಣ, ಗೋಕರ್ಣ ಮೊದಲಾದೆಡೆಗೆ ಪ್ರವಾಸಕ್ಕೆ ಬಂದಿದ್ದರು. ಅನಂತರ ಜ್ವರ ಕಾಣಿಸಿಕೊಂಡು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಬಳಿಕ ಕೆಎಂಸಿಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಯಾರಿಗೂ ಮಂಗನ ಕಾಯಿಲೆ ಇರುವುದು ಪತ್ತೆಯಾಗಿಲ್ಲ. ಆದರೆ ಶನಿವಾರವೂ ಜಿಲ್ಲೆಯ ಮಣಿಪುರ ಮತ್ತು ಹಳ್ಳಿಹೊಳೆಯಲ್ಲಿ ತಲಾ ಒಂದು ಮಂಗಗಳ ಶವ ಪತ್ತೆಯಾಗಿದೆ. ಇದುವರೆಗೆ ಜಿಲ್ಲೆಯಲ್ಲಿ 100ಕ್ಕೂ ಅಧಿಕ ಮಂಗಗಳ ಶವಗಳು ಪತ್ತೆಯಾಗಿವೆ. ತೀರ್ಥಹಳ್ಳಿ ಲಚ್ಚು ಪೂಜಾರಿ (77) ಶುಕ್ರವಾರ ಮೃತಪಟ್ಟಿದ್ದು ಮಂಗನ ಕಾಯಿಲೆಯಿಂದ ಒಟ್ಟು ಶಿವಮೊಗ್ಗ ಜಿಲ್ಲೆಯ ಇಬ್ಬರು ಮೃತಪಟ್ಟಂತಾಗಿದೆ.
 
152 ಮಂದಿಗೆ ಚಿಕಿತ್ಸೆ
ಇದುವರೆಗೆ ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಆಸುಪಾಸಿನ ಸುಮಾರು 152 ಮಂದಿ ಶಂಕಿತ ಮಂಗನ ಕಾಯಿಲೆ ರೋಗಕ್ಕೆ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 120 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದಾರೆ. 30 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ಮಂದಿಯ ತಪಾಸಣಾ ವರದಿ ಬರಲು ಬಾಕಿ ಇದೆ ಎಂದು ಆಸ್ಪತ್ರೆ ಪ್ರಕಟನೆ ತಿಳಿಸಿದೆ.

ತೀರ್ಥಹಳ್ಳಿ: ವ್ಯಕ್ತಿ ಸಾವು
ತೀರ್ಥಹಳ್ಳಿ:
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜನರ ಜೀವ ಹಿಂಡಿದ್ದ ಮಂಗನಕಾಯಿಲೆ ಈಗ ತೀರ್ಥಹಳ್ಳಿ ಭಾಗಕ್ಕೆ ವ್ಯಾಪಿಸಿದೆ. ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದು ಮಂಗನಕಾಯಿಲೆ ಶಂಕೆ ವ್ಯಕ್ತವಾಗಿದೆ. ಇದರಿಂದಾಗಿ ಈ ಕಾಯಿಲೆಗೆ ಜಿಲ್ಲೆಯಲ್ಲಿ ಒಟ್ಟು 9 ಮಂದಿ ಮೃತಪಟ್ಟಂತಾಗಿದೆ.

ಮಂಡಗದ್ದೆ ಸಮೀಪದ ಸಿಂಗನಬಿದರೆ ಗ್ರಾ.ಪಂ. ವ್ಯಾಪ್ತಿಯ ತೋಟದಕೊಪ್ಪದ ಲಚ್ಚ ಪೂಜಾರಿ (75) ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಇವರನ್ನು 5 ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಬೇರೆ ಬೇರೆ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ರಕ್ತ ಪರೀಕ್ಷೆ ನಡೆಸಿದಾಗ ಮಂಗನ ಕಾಯಿಲೆಗೆ ತುತ್ತಾಗಿರುವ ಶಂಕೆ ವ್ಯಕ್ತವಾಗಿತ್ತು. ಆರೋಗ್ಯ ಇಲಾಖೆ ಇವರ ರಕ್ತದ ಮಾದರಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಅಲ್ಲಿಂದ ವರದಿ ಬಂದ ಅನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ.

ಟಾಪ್ ನ್ಯೂಸ್

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2025-01-01 at 19.31.55

Udupi: ಅಸ್ವಸ್ಥಗೊಂಡ ರೈಲು ಪ್ರಯಾಣಿಕೆ ಸಾವು

6

Udupi: ಗಾಂಜಾ ಸೇವನೆ; ಓರ್ವ ವಶಕ್ಕೆ

11

Kaup: ಎಲ್ಲೂರು ಘಟಕದಲ್ಲಿ ಉಚ್ಚಿಲದ ತ್ಯಾಜ್ಯ ವಿಲೇವಾರಿ ಬೇಡಿಕೆ

10

Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ

6

Karkala ಪೇಟೆ ಸುತ್ತಮುತ್ತ ಬೀದಿನಾಯಿಗಳ ಹಾವಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

5

Guttigar: ಯುವಕನಿಗೆ ಜೀವ ಬೆದರಿಕೆ; ದೂರು ದಾಖಲು

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.