ಮಂಗನ ಕಾಯಿಲೆಗೆ ಇನ್ನೊಂದು ಬಲಿ
Team Udayavani, May 2, 2019, 6:21 AM IST
ಸಾಂದರ್ಭಿಕ ಚಿತ್ರ.
ಸಾಗರ/ಉಡುಪಿ: ಮಾರಣಾಂತಿಕ ಮಂಗನ ಕಾಯಿಲೆಗೆ ತುತ್ತಾದವರ ಸಾವಿನ ಸರಣಿ ಮುಂದುವರಿದಿದೆ. ತಾಲೂಕಿನ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ವ್ಯಕ್ತಿಯೊಬ್ಬರು ಬುಧವಾರ ಬೆಳಗ್ಗೆ ಕಾಯಿಲೆಯಿಂದ ಮೃತಪಟ್ಟಿದ್ದಾರೆ.
ಈ ಕಾಯಿಲೆಗೆ ತುತ್ತಾಗಿದ್ದ ನಂದೋಡಿಯ ಕರಿಯಪ್ಪ (50) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಎ. 27ರಂದು ಕೆಎಂಸಿಗೆ ದಾಖಲಾಗಿದ್ದ ಇವರಿಗೆ ಕೆಎಫ್‌ಡಿ ವೈರಸ್ ಸೋಂಕುತಗುಲಿರುವುದು ದೃಢಪಟ್ಟಿತ್ತು. ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದರೂ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅರಳಗೋಡು ಗ್ರಾ. ಪಂ. ವ್ಯಾಪ್ತಿಯಲ್ಲಿ ಡಿಸೆಂಬರ್‌ನಿಂದ ಈಚೆಗೆ ಸುಮಾರು 21 ಮಂದಿ ಮಂಗನ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ.
ಮಣಿಪಾಲ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದ ತಾಳಗುಪ್ಪ ಸಮೀಪದ ಹಿರೇಮನೆಯ ಸುಬ್ಬಮ್ಮ ಶೆಡ್ತಿ ಅವರಲ್ಲಿ ಮಂಗನಕಾಯಿಲೆಯ ವೈರಸ್ ಇದ್ದದ್ದು ದೃಢಪಟ್ಟಿದೆ. ಅವರ ರಕ್ತ ಪರೀಕ್ಷೆ ವರದಿ ಪಾಸಿಟಿವ್ ಬಂದಿದೆ ಎಂದು ಡಾ| ಮುನಿವೆಂಕಟರಾಜು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.