ಮುಂಗಾರು ಪೂರ್ವ ಮಳೆ : ಕರಾವಳಿ ಭಾಗದಲ್ಲಿ ವಾಡಿಕೆಗಿಂತ ಕಡಿಮೆ
Team Udayavani, May 25, 2017, 3:22 PM IST
ಉಡುಪಿ: ಮುಂಗಾರು ಪೂರ್ವ ಮಳೆ ಪ್ರಮಾಣದಲ್ಲಿ ತೀವ್ರ ಕುಸಿತಗೊಂಡಿದ್ದು, ನಗರದ ಕುಡಿಯುವ ನೀರಿನ ಸಮಸ್ಯೆಗೆ ಅದು ಕೂಡ ಒಂದು ಕಾರಣವಾಗಿದೆ. ಮುಂಗಾರು ಆರಂಭಕ್ಕೂ ಮುನ್ನ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಜನವರಿಯಿಂದ ಮೇ 24ರ ವರೆಗೆ ವಾಡಿಕೆಯಂತೆ 120.10 ಮಿ.ಮೀ. ಮಳೆಯಲ್ಲಿ 100.18 ಮಿ.ಮೀ. ಮಳೆಯಾಗಿದ್ದು, ಒಟ್ಟಾರೆ ಶೇ. 17ರಷ್ಟು ಕಡಿಮೆ ಮಳೆಯಾಗಿದೆ.
ಕಳೆದ ಜನವರಿಯಿಂದ ಮೇ 24ರ ವರೆಗೆ ದ.ಕ. ಜಿಲ್ಲೆಯಲ್ಲಿ ವಾಡಿಕೆಯಂತೆ 172 ಮಿ.ಮೀ. ಮಳೆಯಾಗಬೇಕಿದ್ದು, ಆದರೆ ಈ ಬಾರಿ 184 ಮಿ.ಮೀ. ಮಳೆಯಾಗಿದ್ದು, ಶೇ. 7ರಷ್ಟು ಕಡಿಮೆ ಮಳೆಯಾಗಿದೆ. ಉಡುಪಿಯಲ್ಲಿ 132 ಮಿ.ಮೀ. ಮಳೆಯಾಗಬೇಕಿದ್ದು, ಈ ಬಾರಿ ಕೇವಲ 83.25 ಮಿ.ಮೀ. ಮಳೆಯಾಗಿದೆ. ಅಂದರೆ ಶೇ. 37ರಷ್ಟು ಕಡಿಮೆ ಮಳೆ ಬಂದಿದೆ.
ಸುಳ್ಯ, ಪುತ್ತೂರು,
ಬೆಳ್ತಂಗಡಿಯಲ್ಲಿ ಹೆಚ್ಚಳ
ತಾಲೂಕುವಾರು ಮುಂಗಾರು ಪೂರ್ವ ಮಳೆಯ ಪ್ರಮಾಣವನ್ನು ನೋಡಿದರೆ ಸುಳ್ಯದಲ್ಲಿ ಶೇ. 31, ಪುತ್ತೂರಿನಲ್ಲಿ ಶೇ. 24 ಹಾಗೂ ಬೆಳ್ತಂಗಡಿಯಲ್ಲಿ ಶೇ. 16ರಷ್ಟು ಮಳೆ ವಾಡಿಕೆಗಿಂತ ಹೆಚ್ಚು ಬಂದಿದೆ. ಬಂಟ್ವಾಳ ಶೇ. – 24, ಮಂಗಳೂರು – 34, ಕುಂದಾಪುರ ಶೆ. – 15, ಕಾರ್ಕಳ ಶೇ. – 40 ಹಾಗೂ ಉಡುಪಿಯಲ್ಲಿ ಶೇ. – 64ರಷ್ಟು ಕಡಿಮೆ ಮಳೆಯಾಗಿದೆ.
ಇನ್ನು ಮೇ ತಿಂಗಳಲ್ಲಿ ಒಟ್ಟಾರೆ 83.70ರಷ್ಟು ಮಳೆಯಾಗಬೇಕಿದ್ದು, 81.60ರಷ್ಟು ಮಳೆಯಾಗಿದೆ. ದ.ಕ. ಜಿಲ್ಲೆಯಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗಿದ್ದು, ಶೇ. 21ರಷ್ಟು ಮಳೆ ಹೆಚ್ಚು ಬಂದಿದೆ. ಆದರೆ ಉಡುಪಿ ಜಿಲ್ಲೆಯಲ್ಲಿ ಮೇ ಯಲ್ಲಿ ವಾಡಿಕೆಗಿಂತ ಶೇ. 23 ರಷ್ಟು ಕಡಿಮೆ ಮಳೆಯಾಗಿದೆ.
ಮೇ ತಿಂಗಳಲ್ಲಿ ಕಾರ್ಕಳದಲ್ಲಿ 113 ಮಿ.ಮೀ. ಮಳೆಯಲ್ಲಿ 79 ಮಿ.ಮೀ. ಮಳೆಯಾಗಿದೆ. ಕುಂದಾಪುರದಲ್ಲಿ ಶೇ. 6ರಷ್ಟು ಹೆಚ್ಚು ಮಳೆಯಾಗಿದ್ದು, 93 ಮಿ. ಮೀ. ಮಳೆಯಾಗಿದೆ.
ತಾಲೂಕಿನ ವಾಡಿಕೆ ಮಳೆ 87.3 ಮಿ. ಮೀ. ಆಗಿದೆ. ಇನ್ನು ಉಡುಪಿ ತಾಲೂಕಿನಲ್ಲಿ 100.5 ಮಿ.ಮೀ. ವಾಡಿಕೆ ಮಳೆಯಲ್ಲಿ ಕೇವಲ 41.8 ಮಿ. ಮೀ. ಮಾತ್ರ ಮಳೆಯಾಗಿದೆ.
ಇದೇ ಕಾರಣದಿಂದ ಬಜೆ ಜಲಾಶ ಯವು ಇದೇ ಮೊದಲ ಬಾರಿಗೆ ಸಂಪೂರ್ಣ ಬತ್ತಿದ ಸ್ಥಿತಿಯಲ್ಲಿದೆ.ಇದರಿಂದ ನಗರಸಭಾ ವ್ಯಾಪ್ತಿಯಲ್ಲಿ ನೀರು ಪೂರೈಕೆಯಲ್ಲಿಯೂ ಸಮಸ್ಯೆ ಗಳಾಗಿವೆ.
ಮುಂಗಾರಿನಲ್ಲಿ
ಉತ್ತಮ ಮಳೆ ನಿರೀಕ್ಷೆ
ಮುಂಬರುವ ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.ಜಿಲ್ಲೆಯ ಜನತೆಗೆ ಇದೊಂದು ಆಶಾದಾಯಕ ಬೆಳವಣಿಗೆ.ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎನ್ನುವುದಾಗಿ ರಾಜ್ಯ ನೈಸರ್ಗಿಕ ವಿಕೋಪ ಬೆಂಗಳೂರು ಕೇಂದ್ರದ ಉಸ್ತುವಾರಿ ವಿಜ್ಞಾನಿ ಎಸ್.ಎಸ್.ಎಂ. ಗವಾಸ್ಕರ್ ಅವರು ತಿಳಿಸಿದ್ದಾರೆ.ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಇನ್ನು ಒಂದು ವಾರದಲ್ಲಿ ಉಡುಪಿ ಜಿಲ್ಲೆಯ ಅಲ್ಲಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ತಿಳಿದು ಬಂದಿದೆ.
ಮೇ 30ಕ್ಕೆ ಮುಂಗಾರು ಪ್ರವೇಶ
ಬೆಂಗಳೂರು: ಮುಂಗಾರು ಮಾರುತ ನಿರೀಕ್ಷಿತ ರೀತಿಯಲ್ಲಿ ಸಾಗುತ್ತಿದ್ದು, 48 ಗಂಟೆಗಳಲ್ಲಿ ಬಂಗಾಲಕೊಲ್ಲಿಯನ್ನು ಪೂರ್ತಿಯಾಗಿ ಆವರಿಸಲಿದೆ. ಬಂಗಾಲಕೊಲ್ಲಿಯಲ್ಲಿ ಮುಂಗಾರುಗೆ ಪೂರಕ ಎಂಬಂತೆ ಮೇಲ್ಮೆ„ ಸುಳಿಗಾಳಿ ಕೂಡ ಇದ್ದು, ಗಾಳಿಯ ವೇಗ ಇದೇ ರೀತಿ ಮುಂದುವರಿದರೆ ಈಗಾಗಲೇ ತಿಳಿಸಿರುವಂತೆ ಮೇ 30ರ ಆಸುಪಾಸಿನಲ್ಲಿ ಮುಂಗಾರು ಭಾರತ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಕೇಂದ್ರ ತಿಳಿಸಿದೆ.
ಕೇರಳಕ್ಕೆ ಪ್ರವೇಶಿಸಿದ ಎರಡು ದಿನಗಳಲ್ಲಿ ಕರ್ನಾಟಕ ಕರಾವಳಿಗೂ ಮುಂಗಾರು ಪ್ರವೇಶಿಸಲಿದೆ. ಕಳೆದ ಕೆಲವು ದಿನಗಳಲ್ಲಿ ರಾಜ್ಯದ ವಿವಿಧೆಡೆ ಮುಂಗಾರುಪೂರ್ವ ಮಳೆಯಾಗುತ್ತಿದೆ. ಇದು ಇನ್ನೂ ಕೆಲವು ದಿನ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಪ್ರತಿನಿತ್ಯ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಈ ವಾರದಲ್ಲಿ ಇನ್ನೂ ಹೆಚ್ಚಾಗಲಿದೆ ಎಂದು ಹವಾಮಾನ ಕೇಂದ್ರದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.