“ನೈತಿಕತೆ ಆಧಾರಿತ ರಾಜಕೀಯದಿಂದ ಸಮಾಜ ನಿರ್ಮಾಣ ಸಾಧ್ಯ’
Team Udayavani, Sep 14, 2019, 5:43 AM IST
ಹಿರಿಯಡಕ (ಹೆಬ್ರಿ): ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬ ಪರಿಕಲ್ಪನೆಯು ನಕಾರಾ ತ್ಮಕವಾಗಿ ಬಿಂಬಿತವಾಗುತ್ತಿದ್ದು ಈ ದಷ್ಟಿಕೋನವನ್ನು ಬದಲಾಯಿಸಲು ಮತ್ತು ಮೌಲ್ಯಯುತ ಸಮಾಜ ನಿರ್ಮಿಸಲು ನೈತಿಕತೆ ಮತ್ತು ವೈಚಾರಿಕತೆ ಆಧಾರಿತ ರಾಜಕೀ ಯದಿಂದ ಮಾತ್ರ ಸಾಧ್ಯ ಎಂದು ಉಡುಪಿ ಎಂ.ಜಿ.ಎಂ. ಕಾಲೇಜಿನ ಪೊ| ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.
ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಲೇಖಕಿಯರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಿ| ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ| ನಿಕೇತನ ಅವರು ಮಾತನಾಡಿ ಸಾಹಿತ್ಯ ಮತ್ತು ರಾಜಕೀಯ ಪರಸ್ಪರ ಪೂರಕವಾಗಿ ಕಾರ್ಯನಿರ್ವಹಿಸಿದರೆ ಸಮಾಜದಲ್ಲಿ ಸಂವೇದನಾ ಶೀಲತೆ ಮೂಡಿಸಲು ಸಾಧ್ಯ ಎಂದರು.
ಉಡುಪಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನೀಲಾವರ ಸುರೇಂದ್ರ ಅಡಿಗ ಮತ್ತು ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬ್ರಹ್ಮಾವರ ವಸಂತಿ ಶೆಟ್ಟಿ ಮತ್ತು ಕಾಲೇಜಿನ ಪ್ರಾಂಶುಪಾಲ ಅವರನ್ನು ಸಮ್ಮಾನಿಸಲಾಯಿತು. ಪುಳಿಮಾರು ಮನೆಯ ಭವಾನಿ ಶೆಟ್ಟಿ, ಸಾಹಿತ್ಯ ಪರಿಷತ್‌ನ ನಾರಾಯಣ ಮಡಿ, ಭುವನ ಪ್ರಸಾದ್ ಹೆಗಡೆ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುಜಯಾ ಕೆ.ಎಸ್. ಸ್ವಾಗತಿಸಿದರು. ಬ್ರಹ್ಮಾವರ ಗಣೇಶ್ ಕಾರ್ಯಕ್ರಮ ನಿರೂಪಿಸಿದರು. ಮುರಳೀಧರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.